• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

80% ಶಾಲಾ ಸಿಬ್ಬಂದಿ ಕೊರೊನಾ ಲಸಿಕೆ ಮೊದಲ ಡೋಸ್ ಪಡೆದಿದ್ದಾರೆ; ಸಚಿವಾಲಯ

|
Google Oneindia Kannada News

ನವದೆಹಲಿ, ಸೆಪ್ಟೆಂಬರ್ 03: ದೇಶಾದ್ಯಂತ ಶಾಲೆಗಳಲ್ಲಿ ಕೆಲಸ ನಿರ್ವಹಿಸುವ ಸುಮಾರು 80% ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಕನಿಷ್ಠ ಮೊದಲ ಡೋಸ್ ಕೊರೊನಾ ಲಸಿಕೆಯನ್ನು ಪಡೆದಿದ್ದಾರೆ ಎಂದು ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ.

ದೇಶದಾದ್ಯಂತ ಶಾಲೆಗಳ ಪುನರಾರಂಭಕ್ಕೆ ಹಲವು ಅಂಶಗಳು ಒತ್ತು ನೀಡಿರುವ ಬೆನ್ನಲ್ಲೇ ಶಿಕ್ಷಕರಿಗೆ ಹಾಗೂ ಬೋಧಕೇತರ ಸಿಬ್ಬಂದಿಗೆ ಆದ್ಯತೆಯಲ್ಲಿ ಲಸಿಕೆ ನೀಡಲಾಗಿದೆ. ರಾಜ್ಯ ಸರ್ಕಾರಗಳೊಂದಿಗೆ ಕೇಂದ್ರ ಈ ನಿಟ್ಟಿನಲ್ಲಿ ವೇಗವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವಾಲಯ ತಿಳಿಸಿದೆ.

ಈ ಕುರಿತು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಂದ ಆರಂಭಿಕ ಪ್ರತಿಕ್ರಿಯೆ ಅತ್ಯಂತ ಸಕಾರಾತ್ಮಕವಾಗಿತ್ತು ಹಾಗೂ ಇದರ ಫಲವಾಗಿ ಬಹುತೇಕ ರಾಜ್ಯಗಳಲ್ಲಿ 80% ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿ ಕೊರೊನಾ ಲಸಿಕೆಗಳನ್ನು ಪಡೆದುಕೊಂಡಿದ್ದಾರೆ ಎಂದು ಸಚಿವಾಲಯದ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಎಲ್ಲಾ ಬೋಧಕರು ಹಾಗೂ ಬೋಧಕೇತರ ಸಿಬ್ಬಂದಿಗೆ ಮೊದಲ ಡೋಸ್ ಲಸಿಕೆ ಪೂರ್ಣಗೊಳಿಸಿರಬೇಕು ಎಂದು ಶಿಕ್ಷಣ ಸಚಿವಾಲಯ ಮಂಗಳವಾರ ಎಲ್ಲಾ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ. ಶಿಕ್ಷಕರಿಗೆ ಲಸಿಕೆ ನೀಡುವ ಕುರಿತು ಮಾಹಿತಿಯನ್ನು ಗೂಗಲ್ ಟ್ರ್ಯಾಕರ್‌ನಲ್ಲಿ ನವೀಕರಿಸಲು ರಾಜ್ಯಗಳಿಗೆ ತಿಳಿಸಿದೆ.

ಶಿಕ್ಷಕರ ದಿನಾಚರಣೆಯೊಳಗೆ ಎಲ್ಲಾ ಶಿಕ್ಷಕರಿಗೆ ಲಸಿಕೆ ನೀಡಿ; ಆರೋಗ್ಯ ಸಚಿವಶಿಕ್ಷಕರ ದಿನಾಚರಣೆಯೊಳಗೆ ಎಲ್ಲಾ ಶಿಕ್ಷಕರಿಗೆ ಲಸಿಕೆ ನೀಡಿ; ಆರೋಗ್ಯ ಸಚಿವ

ಎಲ್ಲಾ ವರ್ಗಗಳಿಗೆ ಶಾಲೆಗಳನ್ನು ತೆರೆಯಲು ಸರ್ಕಾರ ಶೀಘ್ರದಲ್ಲೇ ರಾಜ್ಯಗಳಿಗೆ ಅನುಮತಿ ನೀಡುತ್ತದೆಯೇ ಎಂಬ ಕುರಿತು ಪ್ರಶ್ನಿಸಿದಾಗ, 'ಸೋಂಕಿನ ಪಾಸಿಟಿವಿಟಿ ದರ, ಆಸ್ಪತ್ರೆಗೆ ದಾಖಲಾಗುವವರ ಸಂಖ್ಯೆ ಹಾಗೂ ಲಸಿಕಾ ವ್ಯಾಪ್ತಿಯ ಕುರಿತು ಇನ್ನೂ ಅಸ್ಥಿರತೆ ಇದೆ. ಇವುಗಳ ಆಧಾರದ ಮೇಲೆ ಹಂತ ಹಂತವಾಗಿ ಶಾಲೆಗಳನ್ನು ತೆರೆಯಲು ಯೋಜನೆ ರೂಪಿಸಲಾಗುತ್ತಿದೆ' ಎಂದು ಮಾಹಿತಿ ನೀಡಿದರು.

ಹೆಚ್ಚಿನ ಲಸಿಕಾ ವ್ಯಾಪ್ತಿ ನಿರ್ದಿಷ್ಟ ಮಟ್ಟದ ಭರವಸೆ ನೀಡುತ್ತದೆ. ಆದರೆ ಪರಿಗಣಿಸಬೇಕಾದ ಇನ್ನೂ ಇತರೆ ಅಂಶಗಳಿವೆ. ರಾಜ್ಯಗಳು ಈ ಅಂಶಗಳನ್ನು ಪರಿಗಣಿಸಬೇಕು ಹಾಗೂ ಈ ವಿಷಯದ ಕುರಿತ ಗಮನ ಹರಿಸಬೇಕು ಎಂದು ಅಧಿಕಾರಿಗಳು ಸಲಹೆ ನೀಡಿದರು.

80 Percent School Staff Administered 1st Covid Vaccine Dose Says Education Ministry

ಎರಡು ಕೋಟಿಗೂ ಹೆಚ್ಚು ಶಿಕ್ಷಕರಿಗೆ ಶೀಘ್ರ ಲಸಿಕೆ ಹಾಕಲು ಲಸಿಕಾ ಅಭಿಯಾನ ಕೈಗೊಳ್ಳಲಾಗಿದೆ ಹಾಗೂ ರಾಜ್ಯಗಳಲ್ಲಿ ಲಸಿಕಾ ಪ್ರಗತಿಯನ್ನು ಶಾಲಾ ಶಿಕ್ಷಣ ಹಾಗೂ ಸಾಕ್ಷರತೆ ಇಲಾಖೆ ಮೇಲ್ವಿಚಾರಣೆ ಮಾಡುತ್ತಿದೆ. ಇದು ಶಾಲೆ ಪುನರಾರಂಭಕ್ಕೆ ನಿರ್ಧಾರ ತೆಗೆದುಕೊಳ್ಳಲು ಅನುವು ಮಾಡಿಕೊಡುತ್ತದೆ ಎಂದರು.

ಕಳೆದ ಬುಧವಾರ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, ಶಿಕ್ಷಕರಿಗೆ ನೀಡಲು ಎರಡು ಕೋಟಿ ಹೆಚ್ಚುವರಿ ಕೊರೊನಾ ಲಸಿಕೆಗಳನ್ನು ರಾಜ್ಯಗಳಿಗೆ ನೀಡುವುದಾಗಿ ತಿಳಿಸಿದ್ದರು. ಸೆಪ್ಟೆಂಬರ್ 5, ಶಿಕ್ಷಕರ ದಿನಾಚರಣೆಗೆ ಮುಂಚಿತವಾಗಿ ಎಲ್ಲಾ ಶಾಲಾ ಶಿಕ್ಷಕರಿಗೆ ಆದ್ಯತೆ ಮೇರೆಗೆ ಲಸಿಕೆ ಹಾಕುವಂತೆ ತಿಳಿಸಿದ್ದರು.

ಕೇಂದ್ರ ಸರ್ಕಾರದಿಂದ ಶಾಲಾ ಶಿಕ್ಷಕರು, ಸಿಬ್ಬಂದಿಗಾಗಿ 2 ಕೋಟಿ ಡೋಸ್ ಕೊವಿಡ್ ಲಸಿಕೆ!ಕೇಂದ್ರ ಸರ್ಕಾರದಿಂದ ಶಾಲಾ ಶಿಕ್ಷಕರು, ಸಿಬ್ಬಂದಿಗಾಗಿ 2 ಕೋಟಿ ಡೋಸ್ ಕೊವಿಡ್ ಲಸಿಕೆ!

ದೇಶದಲ್ಲಿ ಎಷ್ಟು ಮಂದಿಗೆ ಲಸಿಕೆ ನೀಡಲಾಗಿದೆ?

ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 230 ದಿನಗಳಾಗಿದೆ. ಗುರುವಾರ ರಾತ್ರಿ 7 ಗಂಟೆ ವೇಳೆಗೆ 64,70,901 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಿದ್ದು, ಈವರೆಗೂ ದೇಶದಲ್ಲಿ 67 ಕೋಟಿಗೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ. ಈ ಪೈಕಿ 45,48,047 ಮಂದಿಗೆ ಮೊದಲ ಡೋಸ್ ಹಾಗೂ 19,22,854 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಈವರೆಗೂ 67,09,59,968 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
Around 80% teaching and non-teaching staff employed in schools across the country have received at least the first dose of COVID-19 vaccine, Education Ministry officials said
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X