ದೇಶದಲ್ಲಿ ಕಳೆದ ವರ್ಷದಂತೆ ಈ ಬಾರಿಯೂ ಆತಂಕಕಾರಿ ಕೊರೊನಾ ಸೋಂಕಿನ ಪ್ರಮಾಣ
ನವದೆಹಲಿ, ಏಪ್ರಿಲ್ 02: ಭಾರತದಲ್ಲಿ ಮತ್ತೆ ಕೊರೊನಾ ಸೋಂಕು ಏರುಗತಿಯಲ್ಲಿ ಸಾಗುತ್ತಿದೆ. ಕೊರೊನಾ ಮೊದಲ ಅಲೆಯ ಆರಂಭದಲ್ಲಿ ಇದ್ದ ಪರಿಸ್ಥಿತಿಯನ್ನು ಮತ್ತೆ ಭಾರತ ಎದುರಿಸುತ್ತಿದೆ. ಮಹಾರಾಷ್ಟ್ರ ಮತ್ತೆ ಕೊರೊನಾ ಹಾಟ್‌ಸ್ಪಾಟ್ ಆಗಿದೆ.
ಮುಂದಿನ ಕೆಲವು ದಿನಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 81,466 ಕೊರೊನಾ ಸೋಂಕಿತರು ಪತ್ತೆಯಾಗಿದ್ದಾರೆ, 50,356 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ, 459 ಮಂದಿ ಮೃತಪಟ್ಟಿದ್ದಾರೆ.
ಹಾಗೆಯೇ 1,23,03,131 ಪ್ರಕರಣಗಳಿವೆ, ಇದುವರೆಗೂ 1,15,25,039 ಮಂದಿ ಗುಣಮುಖರಾಗಿದ್ದಾರೆ. 6,14,496 ಸಕ್ರಿಯ ಪ್ರಕರಣಗಳಿವೆ ಇದುವರೆಗೂ 1,63,396 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೂ 6,87,89,138 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಮಹಾರಾಷ್ಟ್ರದಲ್ಲಿ ಒಂದೇ ದಿನದಲ್ಲಿ 39544 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. 227 ಜನರು ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆ 54,649ಕ್ಕೆ ಏರಿಕೆಯಾಗಿದೆ.
ಮಹಾರಾಷ್ಟ್ರದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 28,12,980ಕ್ಕೆ ಏರಿಕೆಯಾಗಿದೆ. ಒಂದು ದಿನದಲ್ಲಿ 23,600 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರ ಸಂಖ್ಯೆ 24,00,727ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 3,56,243 ಕೊವಿಡ್-19 ಸಕ್ರಿಯ ಪ್ರಕರಣಗಳಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಮುಂಬೈನಲ್ಲಿ ಮಾರ್ಚ್ ತಿಂಗಳಿನಲ್ಲಿ 88170 ಮಂದಿಗೆ ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಕಳೆದ ಫೆಬ್ರವರಿ ತಿಂಗಳಿಗೆ ಹೋಲಿಸಿದ್ದಲ್ಲಿ 70351 ಹೆಚ್ಚು ಕೊವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಅದೇ ಅಂಕಿ-ಸಂಖ್ಯೆಯನ್ನು ಜನವರಿ ತಿಂಗಳಿಗೆ ಹೋಲಿಕೆ ಮಾಡಿದ್ದಲ್ಲಿ 72382 ಹೆಚ್ಚು ಹೊಸ ಪ್ರಕರಣಗಳು ಮಾರ್ಚ್ ತಿಂಗಳಿನಲ್ಲಿ ವರದಿಯಾಗಿವೆ.












Click it and Unblock the Notifications