ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಶೇ.64.8ರಷ್ಟು ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ

|
Google Oneindia Kannada News

ನವದೆಹಲಿ, ಸಪ್ಟೆಂಬರ್ 21: ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಭಾರತವು ಪ್ರತಿನಿತ್ಯ ಒಂದೊಂದು ದಾಖಲೆ ನಿರ್ಮಿಸುತ್ತಿದೆ. ದೇಶದಲ್ಲಿ ಲಸಿಕೆ ಪಡೆದುಕೊಳ್ಳಲು ಅರ್ಹವಾಗಿರುವ ಶೇ.64.8ರಷ್ಟು ಮಂದಿಗೆ ಮೊದಲ ಡೋಸ್ ಹಾಗೂ ಶೇ.22.2ರಷ್ಟು ಜನರಿಗೆ ಎರಡೂ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.
ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 248 ದಿನಗಳಾಗಿದ್ದು, ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 85,68,026 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 79,58,74,395 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ.

ಅಕ್ಟೋಬರ್‌ನಿಂದ ದೇಶದಲ್ಲಿ ಹೆಚ್ಚುವರಿ ಕೋವಿಡ್ ಲಸಿಕೆ ರಫ್ತು ಪುನಾರಂಭಅಕ್ಟೋಬರ್‌ನಿಂದ ದೇಶದಲ್ಲಿ ಹೆಚ್ಚುವರಿ ಕೋವಿಡ್ ಲಸಿಕೆ ರಫ್ತು ಪುನಾರಂಭ

ಭಾರತದಲ್ಲಿ ಈವರೆಗೂ 81,73,95,763 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದ್ದು, ದೇಶದಲ್ಲಿ ಇದುವರೆಗೂ 60,88,10,164 ಮಂದಿಗೆ ಮೊದಲ ಡೋಸ್ ಹಾಗೂ 60,88,10,164 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

81.73 Crore Beneficiaries Got Vaccinated Against Coronavirus Across India

ಎಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ?:
ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,69,290 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 87,46,521 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,45,846 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,45,61,278 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
18 ವರ್ಷ ಮೇಲ್ಪಟ್ಟ 33,07,59,938 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,24,64,374 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 15,19,22,068 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,99,72,521 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 60,88,10,164 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 20,85,85,599 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಲಸಿಕೆ ಹಂತಗಳು ಎಷ್ಟಿದೆ?:
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?:
2021ರ ಸೆಪ್ಟೆಂಬರ್ 21ರ ಅಂಕಿ-ಅಂಶಗಳ ಪ್ರಕಾರ, 79,58,74,395 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಕಳುಹಿಸಲಾಗಿರುವ ಲಸಿಕೆಯ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
* ಪೂರೈಕೆಯಾದ ಲಸಿಕೆ ಪ್ರಮಾಣ - 79,58,74,395
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 15,51,940
* ಕೊವಿಡ್-19 ಲಸಿಕೆಯ ಲಭ್ಯತೆ - 5,43,43,490

English summary
In 248 Days 81.73 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X