ಭಾರತದಲ್ಲಿ 63,94,069 ಕೊವಿಡ್-19 ಸೋಂಕಿತ ಪ್ರಕರಣ

ನವದೆಹಲಿ, ಅಕ್ಟೋಬರ್.02: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 64 ಲಕ್ಷದ ಹೊಸ್ತಿಲಿನಲ್ಲಿದೆ. ಕಳೆದ 24 ಗಂಟೆಗಳಲ್ಲೇ 81,484 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ.

ಕಳೆದ ಗುರುವಾರ ಬೆಳಗ್ಗೆ 9 ಗಂಟೆಯಿಂದ ಶುಕ್ರವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 1095 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆ 99773ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 63,94,069ಕ್ಕೆ ಏರಿಕೆಯಾಗಿದೆ. ಈ ಪೈಕಿ 53,52,078 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ 9,42,217 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

81484 New Covid-19 Cases And 1095 Deaths Reported In India In The Last 24 Hours


7,67,17,728 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 10,97,947 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 7,67,17,728 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಜಗತ್ತಿನಾದ್ಯಂತ ಕೊವಿಡ್-19 ಸೋಂಕಿತ ಪ್ರಕರಣಗಳ ಸಂಖ್ಯೆಯು 34470778ರ ಗಡಿ ದಾಟಿದೆ. ಮಹಾಮಾರಿಗೆ ಬಲಿಯಾದವರ ಸಂಖ್ಯೆಯು 10,27,489ಕ್ಕೂ ಹೆಚ್ಚಾಗಿದೆ. ಇನ್ನೊಂದು ಕಡೆಯಲ್ಲಿ 25657479 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+