ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಕ್ಕೆ ಪೂರೈಸಲಾದ ಕೊರೊನಾವೈರಸ್ ಲಸಿಕೆ ಎಷ್ಟು?

ನವದೆಹಲಿ, ಸಪ್ಟೆಂಬರ್ 22: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ವೇಗ ಹೆಚ್ಚಿಸುವ ಉದ್ದೇಶದಿಂದಾಗಿ ಸಮರೋಪಾದಿಯಲ್ಲಿ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆ ಪೂರೈಕೆ ಮಾಡಲಾಗುತ್ತಿದೆ. ದೇಶದಲ್ಲಿ 79.74 ಕೋಟಿಗೂ ಅಧಿಕ ಡೋಸ್ ಲಸಿಕೆಯನ್ನು ಈವರೆಗೂ ಪೂರೈಸಲಾಗಿದ್ದು, ಇದರೊಂದಿಗೆ ಈವರೆಗೂ ಎಷ್ಟು ಡೋಸ್ ಲಸಿಕೆ ವಿತರಣೆಯಾಗಿದೆ ಎಂಬುದರ ಕುರಿತು ಸಂಪೂರ್ಣ ಮಾಹಿತಿಗಾಗಿ ಮುಂದೆ ಓದಿ.

ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಶುರುವಾಗಿ 247 ದಿನ ಕಳೆದಿವೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 68,26,132 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದ್ದು, ಈವರೆಗೂ 82,57,80,128 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ.

ದೇಶದಲ್ಲಿ ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, 61,38,70,343 ಮಂದಿಗೆ ಮೊದಲ ಡೋಸ್ ಹಾಗೂ 21,19,09,785 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

82.57 Crore Beneficiaries Got Vaccinated Against Coronavirus Across India

ಎಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ?:

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,69,776 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 87,65,283 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,46,593 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,46,12,935 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟ 33,43,93,211 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,46,03,335 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 15,28,73,231 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,07,25,092 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 61,38,70,343 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 21,19,09,785 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಲಸಿಕೆ ಹಂತಗಳು ಎಷ್ಟಿದೆ?:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

ಕೊವಿಡ್-19 ಲಸಿಕೆ ಪೂರೈಕೆ ಆಗಿದ್ದೆಷ್ಟು, ಬಳಸಿದ್ದೆಷ್ಟು?:

2021ರ ಸೆಪ್ಟೆಂಬರ್ 21ರ ಅಂಕಿ-ಅಂಶಗಳ ಪ್ರಕಾರ, 79,74,26,335 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದಿಂದ ಕಳುಹಿಸಲಾಗಿರುವ ಲಸಿಕೆಯ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 79,74,26,335

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 33,00,000

* ಕೊವಿಡ್-19 ಲಸಿಕೆಯ ಲಭ್ಯತೆ - 5,34,54,640

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+