ಭಾರತದಲ್ಲಿ 30 ದಿನದಲ್ಲಿ ಕೊರೊನಾ ಲಸಿಕೆ ಪಡೆದವರೆಷ್ಟು ಜನ?
ನವದೆಹಲಿ, ಫೆಬ್ರವರಿ.15: ಭಾರತದಲ್ಲಿ ಜನವರಿ.16ರಿಂದ ಇದುವರೆಗೂ 82 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಕಳೆದ 30 ದಿನಗಳಲ್ಲಿ ದೇಶಾದ್ಯಂತ ಇದುವರೆಗೂ 82,85,295 ವೈದ್ಯಕೀಯ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರು, ಪೊಲೀಸರು, ಜಿಲ್ಲಾಧಿಕಾರಿ ಸೇರಿದಂತೆ ಸರ್ಕಾರದ ಪ್ರಮುಖ ವಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗೆ ಲಸಿಕೆ ನೀಡಲಾಗಿದೆ.
ದೇಶದಲ್ಲಿ ಎರಡನೇ ಹಂತದ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ ನಡೆಯುತ್ತಿದೆ. ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಟಾಪ್-5 ರಾಜ್ಯಗಳು:
ರಾಜ್ಯ - ಲಸಿಕೆ ಹಾಕಿಸಿಕೊಂಡ ಫಲಾನುಭವಿಗಳು
ಉತ್ತರ ಪ್ರದೇಶ - 8,58,602
ಗುಜರಾತ್ - 6,83,903
ಮಹಾರಾಷ್ಟ್ರ - 6,82,933
ರಾಜಸ್ಥಾನ - 6,10,088
ಮಧ್ಯಪ್ರದೇಶ - 5,57,105












Click it and Unblock the Notifications