ಭಾರತದಲ್ಲಿ ಮತ್ತೆ 11 ಮಂದಿಯಲ್ಲಿ ರೂಪಾಂತರಿ ಕೊರೊನಾ ಸೋಂಕು ಪತ್ತೆ
ನವದೆಹಲಿ, ಜನವರಿ 08: ಭಾರತದಲ್ಲಿ ಮತ್ತೆ 11 ಮಂದಿಯಲ್ಲಿ ರೂಪಾಂತರಿ ಕೊರೊನಾ ಸೋಂಕು ಪತ್ತೆಯಾಗಿದೆ.
ಒಟ್ಟು 82 ಮಂದಿಗೆ ಇದುವರೆಗೆ ಸೋಂಕು ತಗುಲಿದೆ. ಸೋಂಕಿತರೊಂದಿಗೆ ಸಂಪರ್ಕದಲ್ಲಿದ್ದವರೆಲ್ಲರನ್ನೂ ಕ್ವಾರಂಟೈನ್'ಗೊಳಪಡಿಸಲಾಗಿದ್ದು, ಸಹ ಪ್ರಯಾಣಿಕರು, ಕುಟುಂಸ್ಥರು ಹಾಗೂ ಇತರರಿಗಾಗಿ ಹುಡುಕಾಟ ಆರಂಭಿಸಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ 11 ಜನರಲ್ಲಿ ಹೊಸ ಬ್ರಿಟನ್ ರೂಪಾಂತರದ ಕೊರೋನಾ ಸೋಂಕು ಪತ್ತೆಯಾಗುವುದರೊಂದಿಗೆ ಹೊಸ ತಳಿಯ ಸೋಂಕಿಗೆ ಗುರಿಯಾದವರ ಸಂಖ್ಯೆ 82ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ವಿವಿಧ ರಾಜ್ಯಗಳಿಂದ ರವಾನಿಸಲಾಗಿದ್ದ ಸೋಂಕಿತರ ವರದಿಯನ್ನು ಪುಣೆಯ ರಾಷ್ಟ್ರೀಯ ವೈರಾಣು ಕೇಂದ್ರದಲ್ಲಿ ಪರೀಕ್ಷೆಗೊಳಪಡಿಸಲಾಗಿದೆ. ಈಗಾಗಲೇ ಎಲ್ಲಾ ಸೋಂಕಿತರನ್ನು ಪ್ರತ್ಯೇಕ ಕೊಠಡಿಗಳಲ್ಲಿ ಐಸೋಲೇಷನ್ ನಲ್ಲಿ ಇರಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.












Click it and Unblock the Notifications