ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ 250 ದಿನಗಳ ದಾಖಲೆ ಬರೆದ ಭಾರತ

ನವದೆಹಲಿ, ಸಪ್ಟೆಂಬರ್ 23: ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವ ಉದ್ದೇಶದಿಂದಾಗಿ ಆರಂಭಿಸಲಾದ ಕೊವಿಡ್-19 ಲಸಿಕೆ ವಿತರಣೆ ಅಭಿಯಾನ 250 ದಿನ ಪೂರೈಸಿದೆ. ಜಗತ್ತಿನ ಇತರೆ ರಾಷ್ಟ್ರಗಳ ಎದುರು ಲಸಿಕೆ ವಿತರಣೆಯಲ್ಲಿ ಭಾರತವು ಹೊಸ ದಾಖಲೆ ಬರೆದಿದೆ.

ಕಳೆದ ಜನವರಿ 16ರಂದು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನಕ್ಕೆ ಅಧಿಕೃತವಾಗಿ ಚಾಲನೆ ನೀಡಿದರು. ಅಂದಿನಿಂದ ಇಂದಿನವರೆಗೂ ಲಸಿಕೆ ವಿತರಣೆಯಲ್ಲಿ ದೇಶವು ಒಂದಿಲ್ಲೊಂದು ದಾಖಲೆಗಳನ್ನು ಬರೆಯುತ್ತಲೇ ಬಂದಿದೆ.

ಭಾರತದಲ್ಲಿ ಕೊವಿಡ್-19 ಸೋಂಕು ಹರಡುವಿಕೆ ಮೇಲೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕೊವಿಶೀಲ್ಡ್, ಕೊವ್ಯಾಕ್ಸಿನ್, ಸ್ಪುಟ್ನಿಕ್-ವಿ ಹಾಗೂ ಫೈಜರ್ ಸೇರಿದಂತೆ ನಾಲ್ಕು ಲಸಿಕೆಗಳಿಗೆ ಅನುಮೋದನೆ ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಶೇ.75ರಷ್ಟು ಉಚಿತವಾಗಿ ಪೂರೈಕೆ ಮಾಡಲಾಗುತ್ತಿದೆ. 250 ದಿನಗಳಲ್ಲಿ ಎಷ್ಟು ಜನರಿಗೆ ಕೊವಿಡ್-19 ಲಸಿಕೆ ನೀಡಲಾಗಿದೆ?, ಕೇಂದ್ರ ಸರ್ಕಾರ ಪೂರೈಸಿದ ಲಸಿಕೆ ಪ್ರಮಾಣವೆಷ್ಟು?, ದೇಶದಲ್ಲಿ ದಾಖಲಾಗಿರುವ ಕೊರೊನಾವೈರಸ್ ಸೋಂಕಿತ ಪ್ರಕರಣಗಳೆಷ್ಟು ಎಂಬುದರ ಕುರಿತು ಒಂದು ವಿಸ್ತೃತ ವರದಿಗಾಗಿ ಮುಂದೆ ಓದಿ.

ಕೊವಿಡ್-19 ಲಸಿಕೆ ವಿತರಣೆ ಯಾರಿಗೆಷ್ಟು ಎಂಬ ಮಾಹಿತಿ

ಕೊವಿಡ್-19 ಲಸಿಕೆ ವಿತರಣೆ ಯಾರಿಗೆಷ್ಟು ಎಂಬ ಮಾಹಿತಿ

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,70,167 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 87,83,665 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,47,221 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,46,66,596 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟ 33,74,76,070 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,67,81,067 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 15,36,39,648 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,14,56,603 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 61,81,01,021 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 21,52,45,655 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಲಸಿಕೆ ವಿತರಣೆ ಹಂತಗಳನ್ನು ಓದಿ

ಭಾರತದಲ್ಲಿ ಲಸಿಕೆ ವಿತರಣೆ ಹಂತಗಳನ್ನು ಓದಿ

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆ ಪೂರೈಕೆ

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಲಸಿಕೆ ಪೂರೈಕೆ

2021ರ ಸಪ್ಟೆಂಬರ್ 22ರ ಅಂಕಿ-ಅಂಶಗಳ ಪ್ರಕಾರ, 80,13,26,335 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 80,13,26,335

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 48,00,000

* ಕೊವಿಡ್-19 ಲಸಿಕೆಯ ಲಭ್ಯತೆ - 4,52,07,660

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+