ಭಾರತ; 24 ಗಂಟೆಯಲ್ಲಿ 83,809 ಹೊಸ ಕೋವಿಡ್ ಪ್ರಕರಣ

ನವದೆಹಲಿ, ಸೆಪ್ಟೆಂಬರ್ 15 : ಭಾರತದಲ್ಲಿ 24 ಗಂಟೆಯಲ್ಲಿ 83,809 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ಇದರಿಂದಾಗಿ ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 49,30,237ಕ್ಕೆ ಏರಿಕೆಯಾಗಿದೆ.

ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯಂತೆ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 9,90,061. ಇದುವರೆಗೂ ದೇಶದಲ್ಲಿ ಗುಣಮುಖರಾದವರು 38,59,400. ವಿಶ್ವದಲ್ಲಿ ಹೆಚ್ಚು ಸೋಂಕಿತರು ಇರುವ ದೇಶದಲ್ಲಿ ಭಾರತ 2ನೇ ಸ್ಥಾನದಲ್ಲಿದೆ.

ಕಳೆದ 24 ಗಂಟೆಯಲ್ಲಿ 1054 ಕೋವಿಡ್ ಸೋಂಕಿತರು ದೇಶದಲ್ಲಿ ಮೃತಪಟ್ಟಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 80,776ಕ್ಕೆ ಏರಿಕೆಯಾಗಿದೆ. ಭಾರತದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ.

ಸೆಪ್ಟೆಂಬರ್ 14ರ ತನಕ ದೇಶದಲ್ಲಿ 5,83,12,273 ಕೋವಿಡ್ ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ. ಸೋಮವಾರ 10,72,845 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.

ಸೋಂಕಿತರ ಸಂಖ್ಯೆ 49 ಲಕ್ಷಕ್ಕೆ ಏರಿಕೆ

ಸೋಂಕಿತರ ಸಂಖ್ಯೆ 49 ಲಕ್ಷಕ್ಕೆ ಏರಿಕೆ

ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 4,926,914ಕ್ಕೆ ಏರಿಕೆಯಾಗಿದೆ. ವಿಶ್ವದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆಲ್ಲಿ ಭಾರತ 2ನೇ ಸ್ಥಾನದಲ್ಲಿದೆ. 6,749,289 ಸೋಂಕಿತರು ಇರುವ ಅಮೆರಿಕ ಮೊದಲ ಸ್ಥಾನದಲ್ಲಿದೆ. 4,349,544 ಸೋಂಕಿತರು ಇರುವ ಬ್ರೆಜಿಲ್ 3ನೇ ಸ್ಥಾನದಲ್ಲಿದೆ.

ಮಹಾರಾಷ್ಟ್ರದಲ್ಲಿ ಅಧಿಕ ಸೋಂಕಿತರು

ಮಹಾರಾಷ್ಟ್ರದಲ್ಲಿ ಅಧಿಕ ಸೋಂಕಿತರು

ಭಾರತದಲ್ಲಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ. ಒಟ್ಟು ಸೋಂಕಿತರ ಸಂಖ್ಯೆ 10,77,374. ಸಕ್ರಿಯ ಪ್ರಕರಣಗಳ ಸಂಖ್ಯೆ 2,91,256. ಇದುವರೆಗೂ ರಾಜ್ಯದಲ್ಲಿ 29,894 ಜನರು ಮೃತಪಟ್ಟಿದ್ದಾರೆ.

ಆಂಧ್ರ ಪ್ರದೇಶ, ತಮಿಳುನಾಡು

ಆಂಧ್ರ ಪ್ರದೇಶ, ತಮಿಳುನಾಡು

ಭಾರತದಲ್ಲಿ ಕೋವಿಡ್ ಸೋಂಕಿತರು ಹೆಚ್ಚು ಇರುವ 2ನೇ ರಾಜ್ಯ ಆಂಧ್ರ ಪ್ರದೇಶ. ರಾಜ್ಯದಲ್ಲಿ 5,75,079 ಸೋಂಕಿತರು ಇದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 93,204.

ತಮಿಳುನಾಡು ರಾಜ್ಯ 3ನೇ ಸ್ಥಾನದಲ್ಲಿದೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 5,08,511. ಸಕ್ರಿಯ ಪ್ರಕರಣಗಳ ಸಂಖ್ಯೆ 46,912.

4ನೇ ಸ್ಥಾನದಲ್ಲಿ ಕರ್ನಾಟಕ

4ನೇ ಸ್ಥಾನದಲ್ಲಿ ಕರ್ನಾಟಕ

ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,67,689ಕ್ಕೆ ಏರಿಕೆಯಾಗಿದೆ. ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ರಾಜ್ಯ ದೇಶದಲ್ಲಿಯೇ 4ನೇ ಸ್ಥಾನದಲ್ಲಿದೆ. 3,61,823 ಜನರು ಇದುವರೆಗೂ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 98,463.

ಕೋವಿಡ್ ಕೇರ್ ಸೆಂಟರ್‌ಗೆ ಬೀಗ

ಕೋವಿಡ್ ಕೇರ್ ಸೆಂಟರ್‌ಗೆ ಬೀಗ

ಬೆಂಗಳೂರು ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,73,628. ಕೋವಿಡ್ ರೋಗಿಗಳಿಗೆ ಚಿಕಿತ್ಸೆ ನೀಡಲು ಆರಂಭಿಸಲಾಗಿದ್ದ ಬೆಂಗಳೂರು ಅಂತರಾಷ್ಟ್ರೀಯ ವಸ್ತು ಪ್ರದರ್ಶನದಲ್ಲಿನ (ಬಿಐಇಸಿ) ಆರೈಕೆ ಕೇಂದ್ರವನ್ನು ಇಂದಿನಿಂದ ಮುಚ್ಚಲಾಗುತ್ತಿದೆ. 10 ಸಾವಿರ ಬೆಡ್‌ಗಳ ವ್ಯವಸ್ಥೆಯನ್ನು ಇಲ್ಲಿ ಮಾಡಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+