ಕೊವಿಡ್-19 ಪ್ರಕರಣ: ಬ್ರಿಜಿಲ್ ನ್ನೂ ಹಿಂದಿಕ್ಕುತ್ತಾ ಭಾರತ?

ನವದೆಹಲಿ, ಸಪ್ಟೆಂಬರ್.04: ಅತಿಹೆಚ್ಚು ಕೊರೊನಾವೈರಸ್ ಸೋಂಕಿತ ಪ್ರಕರಣಗಳನ್ನು ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಮೂರನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ. 40 ಲಕ್ಷ ಪ್ರಕರಣಗಳನ್ನು ಹೊಂದಿರುವ ಬ್ರೆಜಿಲ್ ನ್ನು ಹಿಂದಿಕ್ಕಲು ಭಾರತಕ್ಕೆ ಇನ್ನು ಬಹಳಷ್ಟು ದಿನಗಳು ಬೇಕಾಗಿಲ್ಲ.

Recommended Video

      PM Care Fund ಗೆ ಪ್ರಧಾನಿ ಮೋದಿ ನೀಡಿದ ದೇಣಿಗೆ ಎಷ್ಟು? | Oneindia Kannada

      ಭಾರತದಲ್ಲಿ ಈಗಾಗಲೇ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 39,36,748ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲೇ ಭಾರತದಲ್ಲಿ 83341 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಖಾತ್ರಿಯಾಗಿದೆ.

      ಕಳೆದ 24 ಗಂಟೆಗಳಲ್ಲೇ ಮಹಾಮಾರಿಗೆ 1096 ಜನರು ಪ್ರಾಣ ಬಿಟ್ಟಿದ್ದು, ಇದುವರೆಗೂ 68,472 ಜನರು ಕೊವಿಡ್-19ಗೆ ಬಲಿಯಾಗಿದ್ದಾರೆ. ಒಟ್ಟು 39,36,748 ಕೊರೊನಾವೈರಸ್ ಸೋಂಕಿತರ ಪೈಕಿ 30,37,152 ಜನರು ಗುಣಮುಖರಾಗಿದ್ದು, 8,31,124 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

      83341 New Covid-19 Cases And 1096 Deaths Reported In India In The Last 24 Hours

      11,69,765 ಜನರಿಗೆ ಕೊರೊನಾವೈರಸ್ ಪರೀಕ್ಷೆ:

      ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕುವುದಕ್ಕೆ ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ದೇಶದಲ್ಲಿ ಕೊರೊನಾವೈರಸ್ ಸೋಂಕಿನ ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಕಳೆದ 24 ಗಂಟೆಗಳಲ್ಲೇ 11,69,765 ಜನರನ್ನು ಕೊವಿಡ್-19 ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಇದುವರೆಗೂ 4,66,79,145 ಜನರ ರಕ್ತ ಮತ್ತು ಗಂಟಲು ಮಾದರಿಯನ್ನು ಕೊವಿಡ್-19 ಸೋಂಕು ತಪಾಸಣೆಗಾಗಿ ಸಂಗ್ರಹಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯು ತಿಳಿಸಿದೆ.

      ವಿಶ್ವದಲ್ಲಿ 2,64,71,733 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಇದುವರೆಗೂ ಜಗತ್ತಿನಲ್ಲಿ 8,73,223 ಜನರು ಪ್ರಾಣ ಬಿಟ್ಟಿದ್ದಾರೆ. ಇದುವರೆಗೂ 1,86,64,301 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+