ಭಾರತದಲ್ಲಿ 24 ಗಂಟೆಗಳಲ್ಲೇ 83347 ಜನರಿಗೆ ಕೊರೊನಾವೈರಸ್ ಸೋಂಕು

ನವದೆಹಲಿ, ಸಪ್ಟೆಂಬರ್.23: ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 56 ಲಕ್ಷದ ಗಡಿ ದಾಟಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 83347 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ.

ಕಳೆದ ಮಂಗಳವಾರ ಬೆಳಗ್ಗೆ 10 ಗಂಟೆಯಿಂದ ಬುಧವಾರ ಬೆಳಗ್ಗೆ 10 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 1085 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 88935ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 56,46,011ಕ್ಕೆ ಏರಿಕೆಯಾಗಿದೆ. ಈ ಪೈಕಿ 45,87,614 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 9,68,377 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

83347 New Covid-19 Cases And 1085 Deaths Reported In India In The Last 24 Hours

6,62,79,462 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 9,53,683 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 6,62,79,462 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಅಟ್ಟಹಾಸಕ್ಕೆ ಭಾರತವಷ್ಟೇ ಅಲ್ಲದೇ ವಿಶ್ವದ ಬಲಿಷ್ಠ ರಾಷ್ಟ್ರಗಳೇ ತತ್ತರಿಸಿ ಹೋಗಿವೆ. ಜಗತ್ತಿನಲ್ಲಿ ಇದುವರೆಗಿನ ಅಂಕಿ ಅಂಶಗಳ ಪ್ರಕಾರ ಮಹಾಮಾರಿಗೆ 9,75,315 ಜನರು ಪ್ರಾಣ ಬಿಟ್ಟಿದ್ದಾರೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 31771441ರಷ್ಟಿದ್ದು, 23386714 ಸೋಂಕಿತರು ಗುಣಮುಖರಾಗಿದ್ದಾರೆ.

Recommended Video

      ಹಿಂಗ್ ಮಾಡಿದ್ರೆ ಕಳೆದು ಹೋಗಿರೊ ಫೋನ್ ಸಿಗತ್ತೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+