ಭಾರತದಲ್ಲಿ 84 ಕೋಟಿ ಡೋಸ್ ಕೊರೊನಾವೈರಸ್ ಲಸಿಕೆ ವಿತರಣೆ

ನವದೆಹಲಿ, ಸಪ್ಟೆಂಬರ್ 24: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ನಿಯಂತ್ರಿಸುವುದಕ್ಕಾಗಿ ಲಸಿಕೆ ವಿತರಣೆ ಅಭಿಯಾನವನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 251 ದಿನಗಳಾಗಿದ್ದು, ಗುರುವಾರ ರಾತ್ರಿ 7 ಗಂಟೆ ವೇಳೆಗೆ 65,26,432 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 80,67,26,335 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ.

ಭಾರತದಲ್ಲಿ ಈವರೆಗೂ 84,08,21,190 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದ್ದು, ದೇಶದಲ್ಲಿ ಇದುವರೆಗೂ 62,24,19,377 ಮಂದಿಗೆ ಮೊದಲ ಡೋಸ್ ಹಾಗೂ 21,84,01,813 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

 84.08 Crore Beneficiaries Got Vaccinated Against Coronavirus Across India

ಕೊರೊನಾವೈರಸ್ ಲಸಿಕೆ ಹಂತಗಳು ಎಷ್ಟಿದೆ?:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

ಎಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ?:

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,70,538 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 87,99,476 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,47,928 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,47,16,085 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟ 34,05,90,440 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 6,88,05,465 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 15,44,27,846 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,21,67,362 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 62,24,19,377 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 21,84,01,813 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

2021ರ ಸಪ್ಟೆಂಬರ್ 23ರ ಅಂಕಿ-ಅಂಶಗಳ ಪ್ರಕಾರ, 80,67,26,335 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 80,67,26,335

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 64,00,000

* ಕೊವಿಡ್-19 ಲಸಿಕೆಯ ಲಭ್ಯತೆ - 4,29,03,090

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+