70 ದಿನಗಳ ನಂತರ ದೇಶದ ಕೊರೊನಾ ಪ್ರಕರಣಗಳಲ್ಲಿ ಇಳಿಕೆ
ನವದೆಹಲಿ, ಜೂನ್ 12: ದೇಶದಲ್ಲಿ ಬರೋಬ್ಬರಿ 70 ದಿನಗಳ ನಂತರ ದಿನನಿತ್ಯದ ಕೊರೊನಾ ಸೋಂಕಿನ ಪ್ರಕರಣಗಳಲ್ಲಿ ಇಳಿಕೆ ಕಂಡುಬಂದಿದೆ. ಕಳೆದ 24 ಗಂಟೆಗಳಲ್ಲಿ 84,332 ಹೊಸ ಕೊರೊನಾ ಪ್ರಕರಣಗಳು ದಾಖಲಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಒಂದು ದಿನದಲ್ಲಿ 84,332 ಮಂದಿಗೆ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಈ ಅವಧಿಯಲ್ಲಿ 1,21,311 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, 4,002 ಮಂದಿ ಸೋಂಕಿನಿಂದಾಗಿ ಪ್ರಾಣ ಕಳೆದುಕೊಂಡಿದ್ದಾರೆ.

ದೇಶದಲ್ಲಿ ಒಟ್ಟು ಪ್ರಕರಣಗಳ ಸಂಖ್ಯೆ 2,93,59,155ಕ್ಕೆ ಏರಿಕೆಯಾಗಿದೆ. ಇದರಲ್ಲಿ 2,79,11,384 ಮಂದಿ ಗುಣಮುಖರಾಗಿದ್ದು, ಇದುವರೆಗೂ ಒಟ್ಟು 3,67,081 ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಸದ್ಯಕ್ಕೆ 10,80,690 ಸಕ್ರಿಯ ಪ್ರಕರಣಗಳಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
24,96,00,304 ಮಂದಿಗೆ ಕೊರೊನಾ ಲಸಿಕೆ: ಭಾರತದಲ್ಲಿ ಕೋವಿಶೀಲ್ಡ್, ಕೋವ್ಯಾಕ್ಸಿನ್ ಹಾಗೂ ಸ್ಫುಟ್ನಿಕ್ ವಿ ಲಸಿಕೆಗಳನ್ನು ನೀಡಲಾಗುತ್ತಿದೆ. 147 ದಿನಗಳಲ್ಲಿ 24,96,00,304 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿರುವುದಾಗಿ ತಿಳಿದುಬಂದಿದೆ.












Click it and Unblock the Notifications