ಭಾರತದಲ್ಲಿ ಕೇಂದ್ರದಿಂದ ಪೂರೈಸಲಾದ ಕೊರೊನಾವೈರಸ್ ಲಸಿಕೆ ಪ್ರಮಾಣ ಎಷ್ಟು?
ನವದೆಹಲಿ, ಸಪ್ಟೆಂಬರ್ 25: ಭಾರತದಲ್ಲಿ ಒಂದೇ ದಿನ 70 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾವೈರಸ್ ಲಸಿಕೆಯನನ್ನು ವಿತರಣೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 252 ದಿನಗಳಾಗಿದ್ದು, ಕಳೆದ 24 ಗಂಟೆಗಳಲ್ಲಿ 71,04,051 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 82,57,88,115 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ.
ಭಾರತದಲ್ಲಿ ಈವರೆಗೂ 84,89,29,160 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದ್ದು, ದೇಶದಲ್ಲಿ ಇದುವರೆಗೂ 62,67,27,242 ಮಂದಿಗೆ ಮೊದಲ ಡೋಸ್ ಹಾಗೂ 22,15,53,269 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಎಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ?:
ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,70,791 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 88,13,506 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,48,449 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,47,59,561 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.
18 ವರ್ಷ ಮೇಲ್ಪಟ್ಟ 34,37,02,598 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,08,98,106 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 15,52,26,535 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,28,36,994 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 62,67,27,242 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 22,15,53,269 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ಕೊರೊನಾವೈರಸ್ ಲಸಿಕೆ ಹಂತಗಳು ಎಷ್ಟಿದೆ?:
ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.
ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ
2021ರ ಸಪ್ಟೆಂಬರ್ 25ರ ಅಂಕಿ-ಅಂಶಗಳ ಪ್ರಕಾರ, 82,57,88,115 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.
* ಪೂರೈಕೆಯಾದ ಲಸಿಕೆ ಪ್ರಮಾಣ - 82,57,88,115
* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 94,37,525
* ಕೊವಿಡ್-19 ಲಸಿಕೆಯ ಲಭ್ಯತೆ - 4,15,40,690












Click it and Unblock the Notifications