ಕೊವಿಶೀಲ್ಡ್ 1 ಮತ್ತು 2ನೇ ಡೋಸ್ ನಡುವೆ 84 ದಿನಗಳ ಅಂತರ ಏಕೆ?

ನವದೆಹಲಿ, ಸಪ್ಟೆಂಬರ್ 4: ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ನೀಡುತ್ತಿರುವ ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವೆ ಎಷ್ಟು ದಿನಗಳ ಅಂತರವಿದ್ದರೆ ಒಳಿತು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ.

ಕೊವಿಶೀಲ್ಡ್ ಮೊದಲ ಡೋಸ್ ಮತ್ತು ಎರಡನೇ ಡೋಸ್ ನಡುವೆ 84 ದಿನಗಳ ಅಂತರವಿದ್ದರೆ ಲಸಿಕೆಯು ಹೆಚ್ಚು ಸುರಕ್ಷಿತವಾಗಿರಲಿದ್ದು, ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದು ಕೇಂದ್ರ ಸರ್ಕಾರ ಕೇರಳ ಹೈಕೋರ್ಟ್ ಗೆ ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಿದೆ.

ಕಿಟೆಕ್ಸ್ ಗಾರ್ಮೆಂಟ್ಸ್ ಲಿಮಿಟೆಡ್ ಕಂಪನಿಯು ತನ್ನ ಉದ್ಯೋಗಿಗಳಿಗೆ 84 ದಿನಗಳೊಳಗೆ ಎರಡೂ ಡೋಸ್ ಕೊವಿಶೀಲ್ಡ್ ಲಸಿಕೆ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಲು ಉಚ್ಛ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಕಂಪನಿಯು ಸಲ್ಲಿಸಿದ ಅರ್ಜಿಗೆ ಕೇಂದ್ರ ಸರ್ಕಾರವು ಸಲ್ಲಿಸಿದ ಕೌಂಟರ್ ಅಫಿಡವಿಟ್ ನಲ್ಲಿ ಈ ಅಂಶವನ್ನು ಉಲ್ಲೇಖಿಸಿದೆ.

ಸರ್ಕಾರ ಸಲ್ಲಿಸಿದ ಅಫಿಡವಿಟ್ ನಲ್ಲಿ ಇರುವುದೇನು?

ಸರ್ಕಾರ ಸಲ್ಲಿಸಿದ ಅಫಿಡವಿಟ್ ನಲ್ಲಿ ಇರುವುದೇನು?

"ಭಾರತದ ರಾಷ್ಟ್ರೀಯ ಕೋವಿಡ್ ಲಸಿಕೆ ವಿತರಣೆ ಅಭಿಯಾನವನ್ನು ವೈಜ್ಞಾನಿಕ ಮತ್ತು ಸಾಂಕ್ರಾಮಿಕ ರೋಗ ಪುರಾವೆಗಳು ಹಾಗೂ ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಮಾರ್ಗಸೂಚಿಗಳು ಮತ್ತು ಜಾಗತಿಕ ಉತ್ತಮ ಅಭ್ಯಾಸಗಳ ಆಧಾರದ ಮೇಲೆ ರಚಿಸಲಾಗಿದೆ," ಎಂದು ಅಫಿಡವಿಟ್ ಆರಂಭದಲ್ಲೇ ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕೋವಿಡ್ -19 ಲಸಿಕೆ ವಿತರಣೆ ಅಡಿಯಲ್ಲಿ ಕೋವಿಶೀಲ್ಡ್ ಲಸಿಕೆಯ ಎರಡು ಡೋಸ್‌ಗಳ ನಡುವಿನ ಅಂತರವನ್ನು ಲಭ್ಯವಿರುವ ಮತ್ತು ಹೊಸ ವೈಜ್ಞಾನಿಕ ಪುರಾವೆಗಳ ಆಧಾರದ ಮೇಲೆ ಪರಿಷ್ಕರಣೆಗೆ ಒಳಪಡಿಸಲಾಗಿದೆ ಕೊವಿಡ್-19 ಲಸಿಕೆ ವಿತರಣೆಯ ರಾಷ್ಟ್ರೀಯ ತಜ್ಞರ ಸಮಿತಿ(NEGVAC)ಯು ತಿಳಿಸಿದೆ.

2 ಲಸಿಕೆಗಳ ನಡುವೆ 12 ರಿಂದ 16 ವಾರ ಅಂತರ

2 ಲಸಿಕೆಗಳ ನಡುವೆ 12 ರಿಂದ 16 ವಾರ ಅಂತರ

"ಕೊವಿಡ್-19 ಲಸಿಕೆ ವಿತರಣೆಯ ರಾಷ್ಟ್ರೀಯ ತಜ್ಞರ ಸಮಿತಿ(NEGVAC)ಯ ಶಿಫಾರಸ್ಸಿನ ಆಧಾರದ ಮೇಲೆ ರಾಷ್ಟ್ರೀಯ ಕೊರೊನಾವೈರಸ್ ಲಸಿಕೆ ಅಭಿಯಾನದಡಿ ನೀಡುವ ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವೆ 12 ರಿಂದ 16 ವಾರಗಳ ಅಂತರವನ್ನು ನಿಗದಿಗೊಳಿಸಲಾಗಿದೆ. ಒಂದು ಮತ್ತು ಎರಡನೇ ಡೋಸ್ ಲಸಿಕೆ ನಡುವೆ 84 ದಿನಗಳ ಅಂತರವನ್ನು ಕಾಪಾಡುವುದರಿಂದ ಕೊವಿಡ್-19 ವಿರುದ್ಧ ಲಸಿಕೆಯು ಹೆಚ್ಚು ಸುರಕ್ಷಿತ ಮತ್ತು ಪರಿಣಾಮಕಾರಿಯಾಗಿರಲಿದೆ ಎಂದು ತಾಂತ್ರಿಕ ಸಮಿತಿಯೂ ಸಹ ಸಲಹೆ ನೀಡಿದೆ," ಎಂದು ಅಫಿಡವಿಟ್ ನಲ್ಲಿ ಹೇಳಲಾಗಿದೆ.

ಅಂತರ ಹೆಚ್ಚಿಸುವುದರ ಹಿಂದೆ ವೈಜ್ಞಾನಿಕ ಆಧಾರ

ಅಂತರ ಹೆಚ್ಚಿಸುವುದರ ಹಿಂದೆ ವೈಜ್ಞಾನಿಕ ಆಧಾರ

ತೀರಾ ಅಗತ್ಯ ಸಂದರ್ಭಗಳಲ್ಲಿ ಅಂತಾರಾಷ್ಟ್ರೀಯ ಪ್ರಯಾಣ ಬೆಳಸಲು ಇಚ್ಛೀಸುವವರ ಅನುಕೂಲಕ್ಕಾಗಿ 12 ರಿಂದ 16 ವಾರಗಳಲ್ಲಿ ನಿಗದಿತ ಅವಧಿಗೂ ಪೂರ್ವದಲ್ಲಿ ಎರಡೂ ಡೋಸ್ ಲಸಿಕೆ ನೀಡಲು ಅನುಮತಿ ನೀಡಲಾಗಿದೆ. ಆದರೆ ವೈಜ್ಞಾನಿಕ ಆಧಾರದಲ್ಲಿ ನೋಡುವುದಾದರೆ ಎರಡು ಡೋಸ್ ಕೊವಿಶೀಲ್ಡ್ ಲಸಿಕೆಯು ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕಿದ್ದಲ್ಲಿ ನಡುವಿನ ಅಂತರ ಕನಿಷ್ಠ 12 ರಿಂದ 16 ವಾರ ಇರಬೇಕಾಗುತ್ತದೆ. ಕೊವಿಶೀಲ್ಡ್ ಲಸಿಕೆಯ ಎರಡು ಡೋಸ್ ನಡುವಿನ ಅಂತರವನ್ನು ವೈಜ್ಞಾನಿಕ ಕಾರಣ ಮತ್ತು ತಜ್ಞರ ಸಲಹೆಯೊಂದಿಗೆ ಸೂಕ್ತ ಅಂಕಿ-ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಹೆಚ್ಚಿಸುವುದಕ್ಕೆ ತೀರ್ಮಾನಿಸಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.

ಕಂಪನಿಯ ಅರ್ಜಿ ವಜಾಗೊಳಿಸುವಂತೆ ಸರ್ಕಾರದ ಮನವಿ

ಕಂಪನಿಯ ಅರ್ಜಿ ವಜಾಗೊಳಿಸುವಂತೆ ಸರ್ಕಾರದ ಮನವಿ

"ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಅರ್ಜಿದಾರರ ಯಾವುದೇ ಮೂಲಭೂತ ಅಥವಾ ಶಾಸನಬದ್ಧ ಹಕ್ಕುಗಳನ್ನು ಉಲ್ಲಂಘಿಸಿಲ್ಲ. ರಿಟ್ ಅರ್ಜಿಯಲ್ಲಿ ಅರ್ಜಿದಾರರು ಮುಂದಿಟ್ಟಿರುವ ಆಧಾರಗಳು ಕ್ಷುಲ್ಲಕ ಹಾಗೂ ಸಂಪೂರ್ಣ ಸುಳ್ಳಾಗಿವೆ. ಆದ್ದರಿಂದ ಅರ್ಜಿಯು ವಜಾಗೊಳಿಸಲು ಅರ್ಹವಾಗಿದೆ. ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲಾದ ಮತ್ತು ಅರ್ಹತೆಗಳಿಲ್ಲದ ಅರ್ಜಿಯನ್ನು ನ್ಯಾಯ ದೃಷ್ಟಿಯಿಂದ ವಜಾಗೊಳಿಸಬೇಕು," ಎಂದು ಕೇಂದ್ರ ಸರ್ಕಾರದ ಅಫಿಡವಿಟ್ ನಲ್ಲಿ ಉಲ್ಲೇಖಿಸಲಾಗಿದೆ.

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಪ್ರಮಾಣ ಎಷ್ಟಿದೆ?

ದೇಶದಲ್ಲಿ ಕೊವಿಡ್-19 ಲಸಿಕೆ ವಿತರಣೆ ಪ್ರಮಾಣ ಎಷ್ಟಿದೆ?

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ಪ್ರತಿನಿತ್ಯ ಒಂದೊಂದು ದಾಖಲೆ ನಿರ್ಮಾಣವಾಗುತ್ತಿದೆ. ಕಳೆದ 9 ರಿಂದ 10 ಗಂಟೆಗಳಲ್ಲಿ 51 ಲಕ್ಷಕ್ಕಿಂತ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 231 ದಿನಗಳಾಗಿದೆ. ಶುಕ್ರವಾರ ರಾತ್ರಿ 7 ಗಂಟೆ ವೇಳೆಗೆ 51,88,894 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ಈ ಪೈಕಿ 34,81,898 ಮಂದಿಗೆ ಮೊದಲ ಡೋಸ್ ಹಾಗೂ 17,06,996 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಭಾರತದಲ್ಲಿ ಈವರೆಗೂ 67,65,00,301 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಲಿತ ಪ್ರದೇಶಗಳಿಗೆ ಈವರೆಗೂ 65,00,99,080 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಭಾರತದಲ್ಲಿ ಲಸಿಕೆ ಪೂರೈಕೆ ಮತ್ತು ಲಸಿಕೆ ವಿತರಣೆ ಮಾಹಿತಿ

ಭಾರತದಲ್ಲಿ ಲಸಿಕೆ ಪೂರೈಕೆ ಮತ್ತು ಲಸಿಕೆ ವಿತರಣೆ ಮಾಹಿತಿ

2021ರ ಸೆಪ್ಟೆಂಬರ್ 4ರ ಅಂಕಿ-ಅಂಶಗಳ ಪ್ರಕಾರ, 65,00,99,080 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 65,00,99,080

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 1,20,95,700

* ಕೊವಿಡ್-19 ಲಸಿಕೆಯ ಲಭ್ಯತೆ - 4,36,81,760

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+