• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ದೇಶದ ಶೇ.85ರಷ್ಟು ಕೊರೊನಾ ಪ್ರಕರಣಗಳು ಕೇವಲ 10 ರಾಜ್ಯಗಳಲ್ಲಿವೆ: ಆರೋಗ್ಯ ಸಚಿವಾಲಯ

|

ನವದೆಹಲಿ, ಮೇ 15: ದೇಶದ ಒಟ್ಟು ಕೊರೊನಾ ಸೋಂಕಿತ ಪ್ರಕರಣಗಳ ಪೈಕಿ ಶೇ.85ರಷ್ಟು ಪ್ರಕರಣಗಳು ಕೇವಲ 10 ರಾಜ್ಯಗಳಲ್ಲಿವೆ ಎಂಬುದು ತಿಳಿದುಬಂದಿದೆ.

ಆರೋಗ್ಯ ಸಚಿವಾಲಯ ಈ ಕುರಿತು ಮಾಹಿತಿ ನೀಡಿದೆ, 11 ರಾಜ್ಯಗಳಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಸಕ್ರಿಯ ಕೋವಿಡ್ ಪ್ರಕರಣಗಳಿದ್ದು, ಎಂಟು ರಾಜ್ಯಗಳು 50,000 ದಿಂದ ಒಂದು ಲಕ್ಷದವರೆಗೆ ಸಕ್ರಿಯ ಪ್ರಕರಣಗಳನ್ನು ಹೊಂದಿವೆ ಎಂದು ಸಚಿವಾಲಯ ಹೇಳಿದೆ.

ಪ್ರಧಾನಿ ಮೋದಿಯಿಂದ ಕೋವಿಡ್ 19 ಪರಿಸ್ಥಿತಿ ಅವಲೋಕನಪ್ರಧಾನಿ ಮೋದಿಯಿಂದ ಕೋವಿಡ್ 19 ಪರಿಸ್ಥಿತಿ ಅವಲೋಕನ

24 ರಾಜ್ಯಗಳಲ್ಲಿ ಕೋವಿಡ್-19 ಪಾಸಿಟಿವ್ ಪ್ರಮಾಣ ಶೇಕಡಾ 15ಕ್ಕಿಂತ ಹೆಚ್ಚು ಇದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.ಭಾರತ ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,26,098 ಜನರಿಗೆ ಕೊರೊನಾ ವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ವೇಳೆ 3,890 ಕೊವಿಡ್-19 ಸೋಂಕಿತರು ಸಾವನ್ನಪ್ಪಿದ್ದು, 3,53,299 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ.

ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಾರ ಶುಕ್ರವಾರದ ವೇಳೆಗೆ ಭಾರತದಲ್ಲಿ ಒಟ್ಟು 2,43,72,907 ಕೊರೊನಾ ವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,04,32,898 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಗೆ ಈವರೆಗೂ 2,66,207 ಜನರು ಬಲಿಯಾಗಿದ್ದಾರೆ.

ಇದರ ಹೊರತಾಗಿ ದೇಶದಲ್ಲಿ ಇನ್ನೂ 36,73,802 ಕೊರೊನಾ ವೈರಸ್ ಸಕ್ರಿಯ ಪ್ರಕರಣಗಳಿದ್ದು, ಈವರೆಗೆ ದೇಶದಲ್ಲಿ 18,04,57,579 ಜನರಿಗೆ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

English summary
Ten states account for 85 per cent of the total novel coronavirus cases in the country, the Union Health Ministry said on Saturday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X