ಭಾರತದಲ್ಲಿ ಒಂದೇ ದಿನ 86052 ಜನರಿಗೆ ಕೊವಿಡ್-19 ಪಾಸಿಟಿವ್!

ನವದೆಹಲಿ, ಸಪ್ಟೆಂಬರ್.25: ನೊವೆಲ್ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 58 ಲಕ್ಷದ ಗಡಿ ದಾಟಿದೆ. ಭಾರತದಲ್ಲಿ 24 ಗಂಟೆಗಳಲ್ಲೇ 86052 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆ ವೇಳೆ ಖಾತ್ರಿಯಾಗಿದೆ.

ಗುರುವಾರ ಬೆಳಗ್ಗೆ 9 ಗಂಟೆಯಿಂದ ಗುರುವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಮಾಹಾಮಾರಿಗೆ 1129 ಜನರು ಬಲಿಯಾಗಿದ್ದು, ದೇಶದಲ್ಲಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟವರ ಸಂಖ್ಯೆ 92290ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 58,18,571ಕ್ಕೆ ಏರಿಕೆಯಾಗಿದೆ. ಈ ಪೈಕಿ 47,56,165 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 9,70,116 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

86052 New Covid-19 Cases And 1141 Deaths Reported In India In The Last 24 Hours

ಒಂದೇ ದಿನ 13.80 ಲಕ್ಷ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 13.80 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.

ಕೊರೊನಾವೈರಸ್ ಅಟ್ಟಹಾಸಕ್ಕೆ ಭಾರತವಷ್ಟೇ ಅಲ್ಲದೇ ವಿಶ್ವದ ಬಲಿಷ್ಠ ರಾಷ್ಟ್ರಗಳೇ ತತ್ತರಿಸಿ ಹೋಗಿವೆ. ಜಗತ್ತಿನಲ್ಲಿ ಇದುವರೆಗಿನ ಅಂಕಿ ಅಂಶಗಳ ಪ್ರಕಾರ ಮಹಾಮಾರಿಗೆ 987742 ಜನರು ಪ್ರಾಣ ಬಿಟ್ಟಿದ್ದಾರೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 32413887ರಷ್ಟಿದ್ದು, 23928589 ಸೋಂಕಿತರು ಗುಣಮುಖರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+