ಕೊರೊನಾ ಹೊಸ ದಾಖಲೆ: ಎರಡು ಅಂಕಿಗೆ ಇಳಿದ ಸಾವಿನ ಸಂಖ್ಯೆ!
ನವದೆಹಲಿ, ಫೆಬ್ರವರಿ.02: ಕೊರೊನಾವೈರಸ್ ಸೋಂಕಿನಿಂದ ಮೃತಪಟ್ಟವರ ಸಂಖ್ಯೆಯಲ್ಲಿ ದಾಖಲೆಯಾಗಿದೆ. 8 ತಿಂಗಳ ನಂತರದಲ್ಲಿ ಮೊದಲ ಬಾರಿಗೆ ಭಾರತದಲ್ಲಿ ಮಹಾಮಾರಿಗೆ ಬಲಿಯಾದವರ ಸಂಖ್ಯೆ ಎರಡಂಕಿಗೆ ಇಳಿಕೆಯಾಗಿದೆ.
ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಸೋಂಕಿಗೆ 94 ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 1,54,486ಕ್ಕೆ ಏರಿಕೆಯಾಗಿದೆ. ಕಳೆದೊಂದು ದಿನದಲ್ಲಿ 8635 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ಮಂಗಳವಾರದ ಅಂಕಿ-ಅಂಶಗಳ ಪ್ರಕಾರ, ದೇಶದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,07,66,245ಕ್ಕೆ ಏರಿಕೆಯಾಗಿದೆ. 1,04,48,406 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 1,63,353 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

6,59,422 ಜನರಿಗೆ ಕೊರೊನಾವೈರಸ್ ಪರೀಕ್ಷೆ:
ಕೊವಿಡ್-19 ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 6,59,422 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 19,77,52,057 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.












Click it and Unblock the Notifications