ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೊರೊನಾ ದಾಖಲೆ: ಭಾರತೀಯರಿಗೆ ಖುಷಿ ಕೊಡುವ ಅಂಕಿ-ಅಂಶಗಳು!

|
Google Oneindia Kannada News

ನವದೆಹಲಿ, ಜೂನ್ 08: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗಿನ ಅಟ್ಟಹಾಸ ಸ್ವಲ್ಪ ಮಟ್ಟಿಗೆ ತಗ್ಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನೀತಿ ನಿರ್ಬಂಧ ಹಾಗೂ ಜನರ ಜಾಗೃತಿಯಿಂದ ಪರಿಸ್ಥಿತಿ ಸ್ವಲ್ಪ ಮಟ್ಟಕ್ಕೆ ಹತೋಟಿಗೆ ಬಂದಿದೆ.

ದೇಶದಲ್ಲಿ ಕೊರೊನಾವೈರಸ್ ಸೋಂಕಿನ ಪ್ರಮಾಣ ಮತ್ತು ಹರಡುವಿಕೆ ವೇಗ ಇಳಿಮುಖವಾಗಿದೆ ಎಂಬುದನ್ನು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ನೀಡುವ ಅಂಕಿ-ಅಂಶಗಳಿಂದ ಸ್ಪಷ್ಟವಾಗಿ ಗೋಚರಿಸುತ್ತಿದೆ.

ಕಳೆದ 24 ಗಂಟೆಗಳಲ್ಲಿ ಕೊವಿಡ್-19 ಹೊಸ ಪ್ರಕರಣಗಳ ಸಂಖ್ಯೆಯು ದಾಖಲೆ ಪ್ರಮಾಣದಲ್ಲಿ ಇಳಿಮುಖಗೊಂಡಿದೆ. ಎರಡನೇ ಅಲೆ ಆರಂಭವಾದಾಗಿನಿಂದ ಇಂದಿನವರೆಗೆ ಮೊದಲ ಬಾರಿ ಸೋಂಕಿತ ಪ್ರಕರಣಗಳ ಸಂಖ್ಯೆ 1 ಲಕ್ಷಕ್ಕಿಂತ ಕಡಿಮೆಯಾಗಿರುವುದು ವರದಿಯಾಗಿದೆ. ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳು, ರೋಗದ ತಪಾಸಣೆ ಪ್ರಮಾಣ, ಕೊವಿಡ್-19 ಲಸಿಕೆ ವಿತರಣೆ ವೇಗದ ಕುರಿತು ಒಂದು ವರದಿಯನ್ನು ಮುಂದೆ ಓದಿ.

ಕಳೆದ 24 ಗಂಟೆಗಳಲ್ಲಿ 86,498 ಜನರಿಗೆ ಕೊರೊನಾವೈರಸ್

ಕಳೆದ 24 ಗಂಟೆಗಳಲ್ಲಿ 86,498 ಜನರಿಗೆ ಕೊರೊನಾವೈರಸ್

ದೇಶದಲ್ಲಿ ಒಂದೇ ದಿನ 86,498 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,82,282 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2123 ಮಂದಿ ಪ್ರಾಣ ಬಿಟ್ಟಿದ್ದಾರೆ. ಭಾರತದಲ್ಲಿ ಒಟ್ಟು 2,89,96,473 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,73,41,462 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,51,309 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 13,03,702 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ತಗ್ಗಿದ ಕೊರೊನಾವೈರಸ್ ತಪಾಸಣೆ ಪ್ರಮಾಣ

ದೇಶದಲ್ಲಿ ತಗ್ಗಿದ ಕೊರೊನಾವೈರಸ್ ತಪಾಸಣೆ ಪ್ರಮಾಣ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುವುದಕ್ಕೆ ಇನ್ನೂ ಒಂದು ಕಾರಣ ಅಡಗಿದೆ. ಕೊವಿಡ್-19 ಸೋಂಕು ಪರೀಕ್ಷೆ ಪ್ರಮಾಣದಲ್ಲೂ ಇಳಿಕೆ ಕಂಡು ಬಂದಿದೆ. ಪ್ರತಿನಿತ್ಯ 20 ಲಕ್ಷಕ್ಕೂ ಹೆಚ್ಚು ಜನರಿಗೆ ತಪಾಸಣೆ ನಡೆಸಲಾಗುತ್ತಿತ್ತು. ಆದರೆ ಕಳೆದ 24 ಗಂಟೆಗಳಲ್ಲಿ 18,73,485 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ದೇಶದಲ್ಲಿ 23.61 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ

ದೇಶದಲ್ಲಿ 23.61 ಕೋಟಿ ಜನರಿಗೆ ಕೊರೊನಾವೈರಸ್ ಲಸಿಕೆ

ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಹಾಗೂ ಆಸ್ಟ್ರಾಜೆನಿಕಾ ಸಂಶೋಧಿಸಿದ ಸೀರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸುತ್ತಿರುವ ಕೊವಿಶೀಲ್ಡ್ ಹಾಗೂ ಭಾರತ್ ಬಯೋಟೆಕ್ ಸಂಸ್ಥೆಯು ಹೈದ್ರಾಬಾದ್ ನಲ್ಲಿ ಉತ್ಪಾದಿಸುತ್ತಿರುವ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸುವುದಕ್ಕೆ ಭಾರತದಲ್ಲಿ ಅನುಮೋದನೆ ನೀಡಲಾಗಿದೆ. ದೇಶದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 143 ದಿನಗಳಲ್ಲಿ 23,61,98,726 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಭಾರತದಲ್ಲಿ ಮೇ 1ರಿಂದ ಈವರೆಗೂ 3,02,45,100 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 2,37,107 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

ದೇಶದಲ್ಲಿ ಈವರೆಗೂ 99,81,949 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 68,76,906 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,62,99,343 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 86,96,391 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 7,18,38,338 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,14,36,520 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 6,09,90,200 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,93,37,311 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

English summary
86498 New Coronavirus Cases Reported in India in the Last 24 Hours.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X