ಭಾರತದಲ್ಲಿ 24 ಗಂಟೆಗಳಲ್ಲೇ 86508 ಜನರಿಗೆ ಕೊವಿಡ್-19 ಪಾಸಿಟಿವ್

ನವದೆಹಲಿ, ಸಪ್ಟೆಂಬರ್.24: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯು 57 ಲಕ್ಷದ ಗಡಿ ದಾಟಿದೆ. ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 86508 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆ ವೇಳೆ ದೃಢಪಟ್ಟಿದೆ.

ಬುಧವಾರ ಬೆಳಗ್ಗೆ 10 ಗಂಟೆಯಿಂದ ಗುರುವಾರ ಬೆಳಗ್ಗೆ 10 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 1129 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 91149ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 57,32,519ಕ್ಕೆ ಏರಿಕೆಯಾಗಿದೆ. ಈ ಪೈಕಿ 46,74,988 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 9,66,382 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

86508 New Covid-19 Cases And 1129 Deaths Reported In India In The Last 24 Hours

6,74,36,031 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 11,56,569 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 6,74,36,031 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಅಟ್ಟಹಾಸಕ್ಕೆ ಭಾರತವಷ್ಟೇ ಅಲ್ಲದೇ ವಿಶ್ವದ ಬಲಿಷ್ಠ ರಾಷ್ಟ್ರಗಳೇ ತತ್ತರಿಸಿ ಹೋಗಿವೆ. ಜಗತ್ತಿನಲ್ಲಿ ಇದುವರೆಗಿನ ಅಂಕಿ ಅಂಶಗಳ ಪ್ರಕಾರ ಮಹಾಮಾರಿಗೆ 981962 ಜನರು ಪ್ರಾಣ ಬಿಟ್ಟಿದ್ದಾರೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 32094034ರಷ್ಟಿದ್ದು, 23676349 ಸೋಂಕಿತರು ಗುಣಮುಖರಾಗಿದ್ದಾರೆ.

Recommended Video

      ಕಾಶ್ಮೀರದಲ್ಲಿ ಭಾರತೀಯರು ಅಂತ ಹೇಳೋರು ಯಾರು ಇಲ್ಲಾ?? | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+