ಭಾರತದಲ್ಲಿ 63 ಲಕ್ಷದ ಗಡಿ ದಾಟಿದ ಕೊವಿಡ್-19 ಪ್ರಕರಣಗಳು

ನವದೆಹಲಿ, ಅಕ್ಟೋಬರ್.01: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಈಗಾಗಲೇ 63 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ 86821 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ.

ಕಳೆದ ಬುಧವಾರ ಬೆಳಗ್ಗೆ 9 ಗಂಟೆಯಿಂದ ಗುರುವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 1181 ಜನರು ಬಲಿಯಾಗಿದ್ದು, ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆ 98678ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 63,12,585ಕ್ಕೆ ಏರಿಕೆಯಾಗಿದೆ. ಈ ಪೈಕಿ 52,73,202 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದಾರೆ. ದೇಶದಲ್ಲಿ9,40,705 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

86821 New Covid-19 Cases And 1181 Deaths Reported In India In The Last 24 Hours


7,56,19,781 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 14,23,052 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 7,56,19,781 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಕೊರೊನಾವೈರಸ್ ಅಟ್ಟಹಾಸಕ್ಕೆ ಭಾರತವಷ್ಟೇ ಅಲ್ಲದೇ ವಿಶ್ವದ ಬಲಿಷ್ಠ ರಾಷ್ಟ್ರಗಳೇ ತತ್ತರಿಸಿ ಹೋಗಿವೆ. ಜಗತ್ತಿನಲ್ಲಿ ಇದುವರೆಗಿನ ಅಂಕಿ ಅಂಶಗಳ ಪ್ರಕಾರ ಮಹಾಮಾರಿಗೆ 10,18,789 ಜನರು ಪ್ರಾಣ ಬಿಟ್ಟಿದ್ದಾರೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ 3,41,56,587ರಷ್ಟಿದ್ದು, 2,54,27,160 ಸೋಂಕಿತರು ಗುಣಮುಖರಾಗಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+