ಭಾರತದಲ್ಲಿ 24 ಗಂಟೆಗಳಲ್ಲೇ 86961 ಮಂದಿಗೆ ಕೊವಿಡ್-19

ನವದೆಹಲಿ, ಸಪ್ಟೆಂಬರ್.21: ಭಾರತದಲ್ಲಿ ಕೊರೊನಾವೈರಸ್ ಸೋಂಕಿತರ ಸಂಖ್ಯೆಯು 54 ಲಕ್ಷದ ಗಡಿ ದಾಟಿದೆ. ಕಳೆದ 24 ಗಂಟೆಗಳಲ್ಲೇ 86961 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.

ಕಳೆದ ಭಾನುವಾರ ಬೆಳಗ್ಗೆ 9 ಗಂಟೆಯಿಂದ ಮಂಗಳವಾರ ಬೆಳಗ್ಗೆ 9 ಗಂಟೆವರೆಗೂ ಕೊರೊನಾವೈರಸ್ ಸೋಂಕಿಗೆ 1130 ಜನರು ಪ್ರಾಣ ಬಿಟ್ಟಿದ್ದಾರೆ. ದೇಶದಲ್ಲಿ ಕೊವಿಡ್-19 ಸೋಂಕಿಗೆ ಬಲಿಯಾದವರ ಸಂಖ್ಯೆ 87882ಕ್ಕೆ ಏರಿಕೆಯಾಗಿದೆ.

ಭಾರತದಲ್ಲಿ ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 54,87,581ಕ್ಕೆ ಏರಿಕೆಯಾಗಿದೆ. ಈ ಪೈಕಿ 43,96,399 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 10,03,299 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

86961 New Covid-19 Cases And 1130 Deaths Reported In India In The Last 24 Hours

6,43,92,594 ಜನರಿಗೆ ಕೊರೊನಾವೈರಸ್ ಪರೀಕ್ಷೆ:

ಕೊರೊನಾವೈರಸ್ ಸೋಂಕು ಹರಡುವಿಕೆಗೆ ಕಡಿವಾಣ ಹಾಕಲು ತಪಾಸಣೆ ವೇಗವನ್ನು ಹೆಚ್ಚಿಸುವುದೇ ಮದ್ದು ಎನ್ನಲಾಗುತ್ತಿದೆ. ಈ ಹಿನ್ನೆಲೆ ಕೊರೊನಾವೈರಸ್ ಸೋಂಕು ತಪಾಸಣೆ ವೇಗವನ್ನು ಕ್ಷಿಪ್ರಗತಿಯಲ್ಲಿ ಹೆಚ್ಚಿಸಲಾಗುತ್ತಿದೆ. ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 731534 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 6,43,92,594 ಜನರನ್ನು ಕೊರೊನಾವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದಲ್ಲಿ 3,12,31,473 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಮಹಾಮಾರಿಗೆ ಇದುವರೆಗೂ ಜಗತ್ತಿನಲ್ಲಿ 9,65,065 ಜನರು ಪ್ರಾಣ ಬಿಟ್ಟಿದ್ದಾರೆ. ಇದುವರೆಗೂ 2,28,22,258 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ ಎಂದು ಅಂಕಿ-ಅಂಶಗಳು ಹೇಳುತ್ತಿವೆ.

Recommended Video

      White Houseಗೆ ವಿಷದ ಅಂಚೆ ರವಾನೆ | Oneindia Kannada

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+