ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದಲ್ಲಿ ಮತ್ತೆ ಇಳಿಮುಖವಾಯಿತೇ ಕೊರೊನಾವೈರಸ್ ಲಸಿಕೆ ವಿತರಣೆ?

|
Google Oneindia Kannada News

ನವದೆಹಲಿ, ಸಪ್ಟೆಂಬರ್ 29: ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆಯಲ್ಲಿ ವೇಗ ಕೊಂಚ ತಗ್ಗಿದಂತೆ ತೋರುತ್ತಿದೆ. ಪ್ರತಿನಿತ್ಯ 80,000 ಗಡಿ ದಾಟುತ್ತಿದ್ದ ಲಸಿಕೆ ವಿತರಣೆ ಸಂಖ್ಯೆ ಮಂಗಳವಾರ 50,000ದ ಆಸುಪಾಸಿನಲ್ಲೇ ನಿಂತಿದೆ.

ಕಳೆದ ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 49,45,169 ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 256 ದಿನಗಳಾಗಿದ್ದು, 87 ಕೋಟಿಗೂ ಅಧಿಕ ಫಲಾನುಭವಿಗಳಿಗೆ ಲಸಿಕೆ ನೀಡಲಾಗಿದೆ.

 ಕೊರೊನಾ ಇನ್ನೂ ದೀರ್ಘಕಾಲ ನಮ್ಮೊಂದಿಗೆ ಇರಲಿದೆ; WHO ಅಧಿಕಾರಿ ಕೊರೊನಾ ಇನ್ನೂ ದೀರ್ಘಕಾಲ ನಮ್ಮೊಂದಿಗೆ ಇರಲಿದೆ; WHO ಅಧಿಕಾರಿ

ಭಾರತದಲ್ಲಿ ಈವರೆಗೂ 87,61,89,412 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದ್ದು, ದೇಶದಲ್ಲಿ ಇದುವರೆಗೂ 64,25,70,102 ಮಂದಿಗೆ ಮೊದಲ ಡೋಸ್ ಹಾಗೂ 23,36,19,310 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೂ 84,70,41,325 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

87.61 Crore Beneficiaries Got Vaccinated Against Coronavirus Across India

ಕೊರೊನಾವೈರಸ್ ಲಸಿಕೆ ಹಂತಗಳು ಎಷ್ಟಿದೆ?:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

ಎಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ?:

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,72,229 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 88,65,432 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,50,655 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,49,17,439 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟ 35,50,09,680 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,88,45,995 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 15,81,86,738 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,54,66,028 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 64,25,70,102 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 23,36,19,310 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

2021ರ ಸಪ್ಟೆಂಬರ್ 28ರ ಅಂಕಿ-ಅಂಶಗಳ ಪ್ರಕಾರ, 84,70,41,325 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 84,70,41,325

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 42,83,200

English summary
In 256 Days 87.61 Crore Beneficiaries Got Vaccinated Against Coronavirus Across India.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X