ಭಾರತದಲ್ಲಿ 'ಅದೊಂದು' ದಿನದಿಂದ ಈಚೆಗೆ ಕೊರೊನಾವೈರಸ್ ಲಸಿಕೆ ವಿತರಣೆ ಇಳಿಮುಖ!?

ನವದೆಹಲಿ, ಸಪ್ಟೆಂಬರ್ 30: ಭಾರತದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹುಟ್ಟುಹಬ್ಬದ ಉಡುಗೊರೆ ಅಂತಾ ಒಂದೇ ದಿನ ದೇಶದಾದ್ಯಂತ 2 ಕೋಟಿಗೂ ಹೆಚ್ಚು ಫಲಾನುಭವಿಗಳಿಗೆ ಕೊವಿಡ್-19 ಲಸಿಕೆ ನೀಡಿದ್ದೇ ಬಂತು. ಅಲ್ಲಿಂದ ಕ್ರಮೇಣವಾಗಿ ಲಸಿಕೆ ವಿತರಣೆ ಪ್ರಮಾಣ ಇಳಿಮುಖವಾಗುತ್ತಿರುವುದು ಅಂಕಿ-ಅಂಶಗಳಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ.

ದೇಶದಲ್ಲಿ ಈ ಮೊದಲು ಪ್ರತಿನಿತ್ಯ ಕನಿಷ್ಠ 70 ರಿಂದ 80 ಲಕ್ಷ ಡೋಸ್ ಲಸಿಕೆ ವಿತರಣೆ ಮಾಡಲಾಗುತ್ತಿತ್ತು. ಆದರೆ ಕಳೆದ ಎರಡು ದಿನಗಳಿಂದ ಈ ಸಂಖ್ಯೆ 60 ಲಕ್ಷದ ಗಡಿಯನ್ನೂ ತಲುಪಲು ಸಾಧ್ಯವಾಗುತ್ತಿಲ್ಲ. ಕಳೆದ ಬುಧವಾರ ರಾತ್ರಿ 7 ಗಂಟೆ ವೇಳೆಗೆ 59,48,118 ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ. ದೇಶದಲ್ಲಿ ಲಸಿಕೆ ವಿತರಣೆ ಅಭಿಯಾನ ಆರಂಭಿಸಿ 257 ದಿನಗಳಾಗಿದ್ದು, 88.28 ಕೋಟಿ ಡೋಸ್ ಲಸಿಕೆ ನೀಡಲಾಗಿದೆ.

ಭಾರತದಲ್ಲಿ ಈವರೆಗೂ 88,28,81,552 ಫಲಾನುಭವಿಗಳಿಗೆ ಕೊವಿಡ್-19 ಲಸಿಕೆಯನ್ನು ವಿತರಿಸಲಾಗಿದ್ದು, ದೇಶದಲ್ಲಿ ಇದುವರೆಗೂ 64,61,13,909 ಮಂದಿಗೆ ಮೊದಲ ಡೋಸ್ ಹಾಗೂ 23,67,67,643 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ಕೇಂದ್ರ ಸರ್ಕಾರದಿಂದ ದೇಶದ ವಿವಿಧ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಈವರೆಗೂ 85,42,35,155 ಡೋಸ್ ಲಸಿಕೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

88.28 Crore Beneficiaries Got Vaccinated Against Coronavirus Across India

ಎಷ್ಟು ಮಂದಿಗೆ ಕೊರೊನಾವೈರಸ್ ಲಸಿಕೆ ವಿತರಣೆ?:

ಕೊರೊನಾವೈರಸ್ ಎರಡನೇ ಅಲೆಯಲ್ಲಿ ಅತಿಹೆಚ್ಚು ಸೋಂಕು ತಗುಲಿರುವುದು ಹಾಗೂ ಸಾವಿನ ಸಂಖ್ಯೆಯಲ್ಲಿ ಅತಿಹೆಚ್ಚು ಮಧ್ಯವಯಸ್ಕರ ಸಂಖ್ಯೆಯೇ ಹೆಚ್ಚಾಗಿದೆ. 1,03,72,430 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 88,80,241 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,83,51,843 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 1,49,67,447 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

18 ವರ್ಷ ಮೇಲ್ಪಟ್ಟ 35,75,96,583 ಮಂದಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 8,09,03,869 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ. 45 ವರ್ಷ ಮೇಲ್ಪಟ್ಟವರಿಗೆ ಲಸಿಕೆ ವಿತರಣೆಯಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ. ದೇಶದಲ್ಲಿ ಈವರೆಗೂ 45 ವರ್ಷ ಮೇಲ್ಪಟ್ಟ 15,88,17,060 ಜನರಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 7,61,53,326 ಮಂದಿಗೆ ಎರಡನೇ ಡೋಸ್ ಲಸಿಕೆಯನ್ನು ನೀಡಲಾಗಿದೆ. ದೇಶದಲ್ಲಿ ಈವರೆಗೂ 64,61,13,909 ಫಲಾನುಭವಿಗಳಿಗೆ ಮೊದಲ ಡೋಸ್ ಹಾಗೂ 23,67,67,643 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಕೊರೊನಾವೈರಸ್ ಲಸಿಕೆ ಹಂತಗಳು ಎಷ್ಟಿದೆ?:

ಭಾರತದಲ್ಲಿ ಕೊರೊನಾವೈರಸ್ ಸೋಂಕು ನಿಯಂತ್ರಿಸುವ ಉದ್ದೇಶದಿಂದ ಲಸಿಕೆ ವಿತರಣೆಯನ್ನು ಸಮರೋಪಾದಿಯಲ್ಲಿ ನಡೆಸಲಾಗುತ್ತಿದೆ. ಕಳೆದ ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು ಮೂರನೇ ಹಂತದಲ್ಲಿ 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಜೂನ್ 21ರಿಂದ 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಲಸಿಕೆ ವಿತರಣೆಯನ್ನು ಆರಂಭಿಸಲಾಗಿತ್ತು.

ಕೇಂದ್ರ ಸರ್ಕಾರ ಪೂರೈಸಿರುವ ಕೊರೊನಾವೈರಸ್ ಲಸಿಕೆ

2021ರ ಸೆಪ್ಟಂಬರ್ 29ರ ಅಂಕಿ-ಅಂಶಗಳ ಪ್ರಕಾರ, 85,42,35,155 ಡೋಸ್ ಕೊರೊನಾವೈರಸ್ ಲಸಿಕೆ ಪೂರೈಕೆ ಮಾಡಲಾಗಿದೆ. ಈ ಪೈಕಿ ಎಷ್ಟು ಡೋಸ್ ಲಸಿಕೆ ಬಳಕೆಯಾಗಿದೆ, ಇನ್ನೆಷ್ಟು ಲಸಿಕೆ ಬರಬೇಕಿದೆ. ಬಾಕಿ ಉಳಿದಿರುವ ಲಸಿಕೆ ಪ್ರಮಾಣ ಎಷ್ಟು ಎಂಬುದನ್ನು ಪಟ್ಟಿಯಲ್ಲಿ ನೋಡಿರಿ.

* ಪೂರೈಕೆಯಾದ ಲಸಿಕೆ ಪ್ರಮಾಣ - 85,42,35,155

* ಸದ್ಯ ಬರಬೇಕಾಗಿರುವ ಲಸಿಕೆ ಪ್ರಮಾಣ - 83,80,140

* ಕೊವಿಡ್-19 ಲಸಿಕೆಯ ಲಭ್ಯತೆ - 4,57,98,120

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+