8th Pay Commission: ವೇತನ ಆಯೋಗದ ನಿರೀಕ್ಷೆಯಲ್ಲಿರುವ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ
ನವದೆಹಲಿ, ಮೇ. 02 : ದೇಶದಲ್ಲಿ ಲೋಕಸಭೆ ಚುನಾವಣೆ ನಡೆಯುತ್ತಿರುವಾಗಲೇ ಕೇಂದ್ರ ಸರ್ಕಾರಿ ನೌಕರರ ಸಂಘಟನೆಗಳು 8ನೇ ವೇತನ ಆಯೋಗವನ್ನು ರಚಿಸುವಂತೆ ಒತ್ತಾಯಿಸುತ್ತಿವೆ. ಕಳೆದ ವಾರದಿಂದ 8ನೇ ವೇತನ ಆಯೋಗದ ಬಗ್ಗೆ ಹಲವು ಅಪ್‌ಡೇಟ್‌ಗಳು ಸಿಗುತ್ತಿವೆ. ಹೊಸ ಮಾಹಿತಿ ಪ್ರಕಾರ, ಸಾರ್ವತ್ರಿಕ ಚುನಾವಣೆಯ ನಂತರ ಹೊಸ ವೇತನ ಪರಿಷ್ಕರಣೆ ಆಯೋಗವು ಸ್ಥಾಪನೆಯಾಗುವ ಸಾಧ್ಯತೆಯಿದೆ.
ಭಾರತೀಯ ರೈಲ್ವೇ ತಾಂತ್ರಿಕ ಮೇಲ್ವಿಚಾರಕರ ಸಂಘವು ಸಿಬ್ಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯಕ್ಕೆ ಬರೆದ ಪತ್ರದಲ್ಲಿ 8 ನೇ ವೇತನ ಆಯೋಗವನ್ನು ಸ್ಥಾಪಿಸಬೇಕು. ಭವಿಷ್ಯದ ವೈಪರೀತ್ಯಗಳಿಗೆ ಅವಕಾಶ ನೀಡದೆ ಪ್ರಸ್ತುತ ಇರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಸಿಬ್ಬಂದಿ ಮತ್ತು ತರಬೇತಿ ಇಲಾಖೆ (Do&PT) ಈ ಪತ್ರವನ್ನು ಮುಂದಿನ ಕ್ರಮಕ್ಕಾಗಿ ಖರ್ಚು ಇಲಾಖೆಗೆ (ಹಣಕಾಸು ಸಚಿವಾಲಯ) ರವಾನಿಸಿದೆ. ವೇತನ ಆಯೋಗದ ಶಿಫಾರಸುಗಳನ್ನು ಅನುಷ್ಠಾನಗೊಳಿಸುವ ಜವಾಬ್ದಾರಿಯನ್ನು ಹಣಕಾಸು ಸಚಿವಾಲಯ ಹೊಂದಿದೆ. ಹೀಗಾಗಿ ಲೋಕಸಭಾ ಚುನಾವಣೆ ಮುಗಿದ ಬಳಿಕ ಎಂಟನೇ ವೇತನ ಆಯೋಗ ರಚನೆಯಾಗಲಿದೆ.
ಪ್ರಸ್ತುತ ಇರುವ 7 ನೇ ವೇತನ ಆಯೋಗವನ್ನು 2014 ರಲ್ಲಿ ರಚಿಸಲಾಯಿತು. ಅದರ ಶಿಫಾರಸುಗಳು 2016 ರಲ್ಲಿ ಜಾರಿಗೆ ಬಂದಿದ್ದವು. ಈ ಆಯೋಗದ ಪರಿಣಾಮವಾಗಿ, ಕೇಂದ್ರ ಸರ್ಕಾರಿ ನೌಕರರ ವೇತನವನ್ನು ಸುಮಾರು 23 ಪ್ರತಿಶತದಷ್ಟು ಹೆಚ್ಚಿಸಲಾಯಿತು. ಸಾಮಾನ್ಯವಾಗಿ, ಪ್ರತಿ 10 ವರ್ಷಗಳಿಗೊಮ್ಮೆ ಕೇಂದ್ರೀಯ ವೇತನ ಆಯೋಗವನ್ನು ರಚಿಸಲಾಗುತ್ತದೆ. ಇಲ್ಲಿ ಗಮನಿಸಬೇಕಾದದ್ದು ಏನೆಂದರೆ ವೇತನ ಆಯೋಗ ರಚನೆ ಬಗ್ಗೆ ಕಾನೂನಿನಿಂದ ಯಾವುದೇ ಕಡ್ಡಾಯವಿಲ್ಲ.

ಮೊದಲ ವೇತನ ಆಯೋಗವನ್ನು 1946 ರಲ್ಲಿ ರಚಿಸಲಾಗಿತ್ತು. ವೇತನ ಆಯೋಗವು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರ ವೇತನ, ಭತ್ಯೆಗಳು ಮತ್ತು ಇತರ ಸೌಲಭ್ಯಗಳು ಸೇರಿದಂತೆ ವೇತನಗಳ ರಚನೆಯನ್ನು ಪರಿಶೀಲಿಸುತ್ತದೆ ಮತ್ತು ಕಾಲಕ್ಕೆ ತಕ್ಕಂತೆ ನೌಕರರ ವೇತನ ಹೆಚ್ಚಳವನ್ನು ಶಿಫಾರಸು ಮಾಡುತ್ತದೆ.
8ನೇ ವೇತನ ಆಯೋಗ: IRTSA ಬೇಡಿಕೆಯೇನು?
ಭಾರತೀಯ ರೈಲ್ವೇ ತಾಂತ್ರಿಕ ಮೇಲ್ವಿಚಾರಕರ ಸಂಘ (IRTSA) ಹೊಸ ಕೇಂದ್ರೀಯ ವೇತನ ಆಯೋಗವನ್ನು ರಚಿಸುವಂತೆ ಸರ್ಕಾರವನ್ನು ಒತ್ತಾಯಿಸಿದೆ. ವಿವಿಧ ಗುಂಪುಗಳ ನೌಕರರ ವೇತನದಲ್ಲಿ ಇರುವ ಅಸಮಾನತೆ ಮತ್ತು ಸಮಸ್ಯೆಗಳನ್ನು ಸರಿಪಡಿಸಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.
ಅಲ್ಲದೆ, ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳು, ಕೆಲಸದ ಪರಿಸ್ಥಿತಿಗಳು, ಬಡ್ತಿ ಮತ್ತು ನಂತರದ ವರ್ಗಾವಣೆಗೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಎಲ್ಲಾ ಸಮಸ್ಯೆಗಳನ್ನು ಸರಿ ಮಾಡಬೇಕು ಇದಕ್ಕೆ ವೇತನ ಆಯೋಗಕ್ಕೆ ಸಾಕಷ್ಟು ಸಮಯವನ್ನು ನಿಗದಿಪಡಿಸಬೇಕು ಎಂದು ರೈಲ್ವೆ ನೌಕರರ ಸಂಘ ಬೇಡಿಕೆ ಇಟ್ಟಿದೆ.
"ವೇತನ ಮಟ್ಟ, ಹೆಚ್ಚಳ, ವೇತನ ನಿಗದಿ, ಬಡ್ತಿಗಳು, MACPS, ನಿವೃತ್ತಿ ಪ್ರಯೋಜನಗಳು ಇತ್ಯಾದಿಗಳಲ್ಲಿನ ಸಮಸ್ಯೆಗಳಿಗೆ ಸಂಬಂಧಿಸಿದಂತೆ ವಿವಿಧ ನ್ಯಾಯಾಲಯಗಳಲ್ಲಿ ದೇಶದಾದ್ಯಂತ ಹಲವಾರು ಕಾನೂನು ಪ್ರಕರಣಗಳು ಬಾಕಿ ಉಳಿದಿವೆ. ಇವುಗಳಿಗೆ ನ್ಯಾಯಾಲಯಗಳು ಅಮೂಲ್ಯ ಸಮಯವನ್ನು ವ್ಯಯಿಸುತ್ತವೆ. ಇವುಗಳಿಂದ ಸರ್ಕಾರದ ದಕ್ಷತೆಯ ಮೇಲೆ ಪರಿಣಾಮ ಬೀರುತ್ತವೆ" ಎಂದು ಹೇಳಿದೆ. ಇದಲ್ಲದೆ, 7 ನೇ ಕೇಂದ್ರ ವೇತನ ಆಯೋಗವು 10 ವರ್ಷಗಳ ದೀರ್ಘಾವಧಿಯವರೆಗೆ ಕಾಯದೆ ನಿಯತಕಾಲಿಕವಾಗಿ ವೇತನ ಶ್ರೇಣಿಯನ್ನು ಪರಿಶೀಲಿಸಬೇಕು ಎಂದು ಬೇಡಿಕೆಯಿಟ್ಟಿದೆ.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಚಿನ್ನದ ಬೆಲೆ 55,000 ರೂಪಾಯಿ ದಿಢೀರ್ ಒಂದೇ ದಿನ ಭರ್ಜರಿ ಕುಸಿತ, ಇಂದಿನ ಬೆಲೆ ತಿಳಿಯಿರಿ... Gold Price -
Hotel Gas Bill: ಊಟದ ನಂತರ ಹೋಟೆಲ್ ಬಿಲ್ ನೋಡಿ ದಂಗಾದ ಗ್ರಾಹಕ: ₹1,110 ಬಿಲ್ ಜೊತೆ ₹100 'ಗ್ಯಾಸ್ ಚಾರ್ಜ್'!: ಭಾರೀ ವೈರಲ್ -
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ












Click it and Unblock the Notifications