ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: 9 ಮಂದಿ ದುರ್ಮರಣ

Recommended Video

      ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: 9 ಮಂದಿ ದುರ್ಮರಣ | Oneindia Kannada

      ಕರ್ನೂಲ್, ಜೂನ್ 25: ಆಂಧ್ರಪ್ರದೇಶದ ಕುರ್ನೂಲ್ ಜಿಲ್ಲೆಯಲ್ಲಿ ನಿನ್ನೆ(ಜೂನ್ 24) ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಜನ ಮೃತರಾಗಿದ್ದಾರೆ.

      ಆಂಧ್ರಪ್ರದೇಶ ಸರ್ಕಾರಿ ಸಾರಿಗೆ ಬಸ್ಸು ಕರ್ನೂಲ್ ಜಿಲ್ಲೆಯ ಸೊಮಯಾಜುಲಪಳ್ಳೆ ಎಂಬಲ್ಲಿ 13 ಪ್ರಯಾಣಿಕರಿದ್ದ ಆಟೋಕ್ಕೆ ಡಿಕ್ಕಿ ಹೊಡೆದ ಪರಿಣಾಮ ಏಳು ಜನ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

      ಆಟೋದಲ್ಲಿದ್ದವರೆಲ್ಲ ವೃದ್ಧರಾಗಿದ್ದು, ಅನಾರೋಗ್ಯದ ಕಾರಣ ವೈದ್ಯರ ಬಳಿ ತೆರಳುತ್ತಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

      9 dead in road mishap in AP, CM expresses condolence

      ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಆಂಧ್ರ ಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ, ಸಂತಾಪ ಸೂಚಿಸಿದ್ದಾರೆ.

      ಜೂನ್ 21 ರಂದು ಸಂಬಂಧಿಕರೊಬ್ಬರ ಅಂತ್ಯ ಸಂಸ್ಕಾರಕ್ಕೆಂದು ಹೊರಟಿದ್ದ 15 ಜನ ಅಪಘಾತದಲ್ಲಿ ದುರಂತ ಅಂತ್ಯಕಂಡ ಪ್ರಕರಣ ಮಧ್ಯಪ್ರದೇಶದ ಮೊರೆನಾ ಎಂಬಲ್ಲಿ ನಡೆದಿತ್ತು.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+