ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಭೀಕರ ಅಪಘಾತ: 9 ಸಾವು
ಮಿರ್ಜಾಪುರ, ಡಿಸೆಂಬರ್ 11: ಉತ್ತರ ಪ್ರದೇಶದ ಮಿರ್ಜಅಪುರದಲ್ಲಿ ಇಂದು(ಡಿ.11) ಬೆಳಿಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಟ್ಟು 9 ಜನ ಮೃತರಾಗಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.
ಇಂದು ಬೆಳಿಗ್ಗೆ ಲಾರಿ ಮತ್ತು ಟ್ರಾಕ್ಟರ್ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಪ್ರಕರಣಕ್ಕೆ ಸಂಬಂಧಿಸಿದಂತೆ ದೂರು ದಾಖಲಿಸಿಕೊಂಡಿರುವ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಗಾಯಗೊಂಡವರನ್ನು ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.












Click it and Unblock the Notifications