ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Bharat Jodo Yatra: ಭಾರತ್ ಜೋಡೋ ಯಾತ್ರೆಯ ಸಮಾರೋಪದಲ್ಲಿ 9 ಪಕ್ಷಗಳು ಗೈರು, 12 ಪಕ್ಷಗಳು ಹಾಜರು

ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಸಮಾನ ಮನಸ್ಕ 21 ವಿರೋಧ ಪಕ್ಷಗಳನ್ನು ಆಹ್ವಾನಿಸಲಾಗಿದೆ. ಆದರೆ, ಇದರಲ್ಲಿ 9 ಪಕ್ಷಗಳು ಗೈರಾಗಲಿವೆ. ಕಾರಣ ಮುಂದೆ ಓದಿ...

|
Google Oneindia Kannada News

ನವದೆಹಲಿ, ಜನವರಿ. 29: ಸೋಮವಾರ ನಡೆಯಲಿರುವ ಕಾಂಗ್ರೆಸ್‌ನ ಭಾರತ್ ಜೋಡೋ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಸಮಾನ ಮನಸ್ಕ 12 ವಿರೋಧ ಪಕ್ಷಗಳು ಭಾಗವಹಿಸಲಿವೆ ಎಂದು ಮೂಲಗಳು ಭಾನುವಾರ ತಿಳಿಸಿವೆ.

ಯಾತ್ರೆಯ ಸಮಾರೋಪ ಸಮಾರಂಭಕ್ಕೆ 21 ಪಕ್ಷಗಳನ್ನು ಆಹ್ವಾನಿಸಲಾಗಿತ್ತು, ಆದರೆ ತೃಣಮೂಲ ಕಾಂಗ್ರೆಸ್, ಸಮಾಜವಾದಿ ಪಕ್ಷ ಮತ್ತು ಟಿಡಿಪಿ ಸೇರಿದಂತೆ ಕೆಲವರು ಭದ್ರತೆಯ ಕಾರಣದಿಂದ ಹಾಜರಾಗುತ್ತಿಲ್ಲ ಎಂದು ಮೂಲಗಳು ಮಾಹಿತಿ ನೀಡಿವೆ.

ಫೆಬ್ರವರಿ 5ರಿಂದ ಕಾಂಗ್ರೆಸ್‌ನ 'ಕರಾವಳಿ ಧ್ವನಿ ಯಾತ್ರೆ' ಆರಂಭಫೆಬ್ರವರಿ 5ರಿಂದ ಕಾಂಗ್ರೆಸ್‌ನ 'ಕರಾವಳಿ ಧ್ವನಿ ಯಾತ್ರೆ' ಆರಂಭ

ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ), ಶರದ್ ಪವಾರ್ ಅವರ ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎನ್‌ಸಿಪಿ), ತೇಜಸ್ವಿ ಯಾದವ್ ನೇತೃತ್ವದ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ), ನಿತೀಶ್ ಕುಮಾರ್ ಅವರ ಜನತಾ ದಳ (ಯುನೈಟೆಡ್), ಉದ್ಧವ್ ಠಾಕ್ರೆ ಅವರ ಶಿವಸೇನೆ, ಸಿಪಿಐ(ಎಂ), ಸಿ.ಪಿ.ಐ. , ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ), ಕೇರಳ ಕಾಂಗ್ರೆಸ್, ಫಾರೂಕ್ ಅಬ್ದುಲ್ಲಾ ನೇತೃತ್ವದ ಜಮ್ಮು ಮತ್ತು ಕಾಶ್ಮೀರ ನ್ಯಾಷನಲ್ ಕಾನ್ಫರೆನ್ಸ್, ಮೆಹಬೂಬಾ ಮುಫ್ತಿ ಅವರ ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ), ಮತ್ತು ಶಿಬು ಸೊರೆನ್ ಅವರ ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ಶ್ರೀನಗರದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲಿವೆ.

9 Opposition Parties Likely To Skip Bharat Jodo Yatra Concluding Function

ರಾಹುಲ್‌ ಗಾಂಧಿ ನೇತೃತ್ವದ ಭಾರತ್‌ ಜೋಡೋ ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಜೆಡಿಎಸ್‌ನ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಪ್ರಧಾನಿ ದೇವೇಗೌಡ ಅವರನ್ನು ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಹ್ವಾನಿಸಿದ್ದಾರೆ. ಈ ಕುರಿತು ದೇವೇಗೌಡರು ತಮ್ಮ ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ.

'ಭಾರತ್‌ ಜೋಡೋ ಸಮಾರೋಪ ಸಮಾರಂಭದ ಯಾತ್ರೆಯಲ್ಲಿ ಭಾಗವಹಿಸಲು ಮಲ್ಲಿಕಾರ್ಜುನ ಅವರು ನನ್ನನ್ನು ಆಹ್ವಾನಿಸಿದ್ದರು ಇದು ಜಮ್ಮು- ಕಾಶ್ಮಿರದ ಶ್ರೀನಗರದಲ್ಲಿ ನಡೆಯಲಿದೆ. ಈ ಸಮಾರಂಭದಲ್ಲಿ ನನಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಆದರೆ, ಆ ಸಮಾರಂಭಕ್ಕೆ ನನ್ನ ಮೆಚ್ಚುಗೆಯನ್ನು ತಿಳಿಸಿದ್ದೇನೆ. ರಾಹುಲ್‌ ಗಾಂಧಿ ಅವರು ಸೌಹಾರ್ದತೆಗಾಗಿ ರಾಷ್ಟ್ರದ ಉದ್ದಗಲಕ್ಕೂ ನಡೆದು ಸಾಧನೆ ಮಾಡಿದ್ದಾರೆ' ಎಂದು ತಿಳಿಸಿದ್ದರು.

ಶನಿವಾರ ನಡೆದ ಪಾದಯಾತ್ರೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ರಾಹುಲ್ ಗಾಂಧಿಯವರೊಂದಿಗೆ ಯಾತ್ರೆಗೆ ಸಾಥ್ ನೀಡಿದ್ದರು. ಇನ್ನು ಯಾತ್ರೆಯಲ್ಲಿ ಭದ್ರತಾ ಉಲ್ಲಂಘನೆಯ ಆರೋಪದ ಕಾರಣ ಶುಕ್ರವಾರ ಯಾತ್ರೆ ರದ್ದುಗೊಂಡಿತ್ತು. ನಂತರ ಆವಂತಿಪೋರಾದ ಚೆರ್ಸೂ ಗ್ರಾಮದಿಂದ ಶನಿವಾರ ಯಾತ್ರೆ ಪುನರಾರಂಭವಾಗಿತ್ತು. ಪೀಪಲ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಕೂಡ ಅವಂತಿಪೋರಾದಲ್ಲಿ ಯಾತ್ರೆಯಲ್ಲಿ ಪಾಲ್ಗೊಂಡಿದ್ದರು.

9 Opposition Parties Likely To Skip Bharat Jodo Yatra Concluding Function

ಯಾತ್ರೆಯ ವೇಳೆ ಯಾವುದೇ ಭದ್ರತಾ ಲೋಪವಾಗಿಲ್ಲ ಎಂದು ಸ್ಥಳೀಯ ಪೊಲೀಸರು ನಿರಾಕರಿಸಿದ್ದಾರೆ. ಪ್ರದೇಶದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ವಿಜಯ್ ಕುಮಾರ್ ಶನಿವಾರ ಆರೋಪಗಳನ್ನು ತಳ್ಳಿಹಾಕಿದ್ದು, ಪ್ರಚಾರದ ಸಮಯದಲ್ಲಿ ಯಾವುದೇ ಭದ್ರತಾ ಲೋಪವಾಗಿಲ್ಲ ಎಂದು ಹೇಳಿದ್ದಾರೆ.

ಜನವರಿ 30 ರಂದು ಶ್ರೀನಗರದಲ್ಲಿ ನಡೆಯಲಿರುವ ಸಮಾರೋಪ ಸಮಾರಂಭದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಕಾರ್ಯಕ್ರಮದಲ್ಲಿ ಹಲವು ಹಿರಿಯ ಕಾಂಗ್ರೆಸ್ ನಾಯಕರು ಮತ್ತು ಇತರ ಪ್ರಮುಖ ರಾಜಕೀಯ ಪಕ್ಷಗಳ ನಾಯಕರು ಭಾಗವಹಿಸಲಿದ್ದಾರೆ.

ಸೆಪ್ಟೆಂಬರ್ 7 ರಂದು ಕನ್ಯಾಕುಮಾರಿಯಿಂದ ಆರಂಭವಾದ ಭಾರತ್ ಜೋಡೋ ಯಾತ್ರೆಯು ಜಮ್ಮು ಕಾಶ್ಮೀರದಲ್ಲಿ ಮುಕ್ತಾಯವಾಗಲಿದೆ. ಸುಮಾರು 145 ದಿನಗಳಲ್ಲಿ 3,970 ಕಿಮೀ ಸಾಗಿರುವ ಈ ಯಾತ್ರೆಯು 12 ರಾಜ್ಯಗಳು ಮತ್ತು ಎರಡು ಕೇಂದ್ರಾಡಳಿತ ಪ್ರದೇಶಗಳನ್ನು ಕ್ರಮಿಸಿದ್ದು, ಜನವರಿ 30 ರಂದು ಶ್ರೀನಗರದಲ್ಲಿ ಕೊನೆಗೊಳ್ಳುತ್ತದೆ.

English summary
9 opposition parties likely to skip Congress' Bharat Jodo Yatra concluding function due to security concerns. 21 parties were invited for the function. know more.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X