• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

Breaking: ಅಸ್ಸಾಂನ ಕರೀಂಗಂಜ್‌ನಲ್ಲಿ ಭೀಕರ ರಸ್ತೆ ಅಪಘಾತ: 9 ಮಂದಿ ಸಾವು

|
Google Oneindia Kannada News

ಗುವಾಹತಿ, ನವೆಂಬರ್ 11: ಅಸ್ಸಾಂನ ಕರೀಂಗಂಜ್ ಜಿಲ್ಲೆಯಲ್ಲಿ ಆಟೋ ರಿಕ್ಷಾ ಮತ್ತು ಟ್ರಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಮೂವರು ಅಪ್ರಾಪ್ತರು ಸೇರಿದಂತೆ ಒಂಬತ್ತು ಜನರು ಸಾವನ್ನಪ್ಪಿದ್ದಾರೆ. ಬೈತಖಾಲ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ 8 ರಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿರುವ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ. ಒಂದು ಮೃತದೇಹ ಕರೀಂಗಂಜ್ ಸಿವಿಲ್ ಆಸ್ಪತ್ರೆಗೆ ತಲುಪಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಅಸ್ಸಾಂ-ತ್ರಿಪುರಾ ಗಡಿಯಲ್ಲಿರುವ ಕರೀಮ್‌ಗಂಜ್ ಜಿಲ್ಲೆಯ ಪಥರ್‌ಕಂಡಿ ಪೊಲೀಸ್ ಠಾಣೆ ವ್ಯಾಪ್ತಿಯ ಬೈತಖಾಲ್ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿ 8ರಲ್ಲಿ ಗುರುವಾರ ನಸುಕಿನ ಜಾವ ಈ ಘಟನೆ ಸಂಭವಿಸಿದೆ. ವರದಿಗಳ ಪ್ರಕಾರ, ಮೃತರು ಛತ್ ಪೂಜಾ ವಿಧಿವಿಧಾನಗಳನ್ನು ಮುಗಿಸಿ ಹಿಂತಿರುಗುತ್ತಿದ್ದರು. ಟ್ರಕ್ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ನಂತರ ಈ ಅಪಘಾತ ಸಂಭವಿಸಿದೆ ಎಂದು ಕರೀಂಗಂಜ್ ಜಿಲ್ಲೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

English summary
At least nine people, including three minors, died in a head-on collision between an auto-rickshaw and a speeding truck in Assam's Karimganj district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X