9ರ ಬಾಲಕಿ ಮೇಲೆ 50 ವರ್ಷ ವಯಸ್ಸಿನ ವ್ಯಕ್ತಿಯಿಂದ ಅತ್ಯಾಚಾರ

ಗುಂಟೂರು, ಮೇ 03: ಕತುವಾ ಅತ್ಯಾಚಾರ ಪ್ರಕರಣವನ್ನು ದೇಶ ಮರೆಯುವ ಮೊದಲೇ ಆಂಧ್ರಪ್ರದೇಶದ ಗುಂಟೂರಿನಲ್ಲಿ 9 ವರ್ಷದ ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಅತ್ಯಾಚಾರ ನಡೆದಿದೆ.

50 ವರ್ಷದ ಆಟೋ ಚಾಲಕನೊಬ್ಬ ತನ್ನ ನೆರಮನೆಯ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದು, ಘಟನೆಗೆ ಸಂಬಂಧಿಸಿದಂತೆ ಗುಂಟೂರಿನಲ್ಲಿ ಪ್ರತಿಭಟನೆ ನಡೆದಿದೆ.

ಬಾಲಕಿ ಹೊಟ್ಟೆ ನೋವು ಎಂದು ಅಳುತ್ತಿದ್ದರಿಂದ ಆಕೆಯನ್ನು ಕುಟುಂಬಸ್ಥರು ಆಸ್ಪತ್ರೆಗೆ ಸೇರಿಸಿದ್ದರು. ಆಕೆಯ ಮೇಲೆ ಅತ್ಯಾಚಾರ ನಡೆದಿದೆ ಎಂದು ಆಗ ವೈದ್ಯರು ತಿಳಿಸಿದ್ದರು. ಈ ಕುರಿತು ಆಕೆಯ ಬಳಿ ವಿಚಾರಿಸಿದಾಗ ಈ ಕೃತ್ಯದ ಕುರಿತು ವಿವರಿಸಿದ್ದಾಳೆ.

9 year old Andhra girl raped by 50 year old man

ಆರೋಪಿ 50 ವರ್ಷದ ರಿಕ್ಷಾ ಡ್ರೈವರ್ ನಾಪತ್ತೆಯಾಗಿದ್ದಾನೆ. ಸಂತ್ರಸ್ಥೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ.

ಈಗಾಗಲೇ ಪೋಕ್ಸೋ(Protection of Children from Sexual Offences Act) ಕಾಯ್ದೆಯಲ್ಲಿ ತಿದ್ದುಪಡಿ ತಂದಿರುವ ಕೇಂದ್ರ ಸರ್ಕಾರ 12 ವರ್ಷ ಮತ್ತು ಅದಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಮೇಲೆ ನಡೆಯುವ ಅತ್ಯಾಚಾರ ಪ್ರಕರಣಗಳಲ್ಲಿ ಅಪರಾಧಿಗೆ ಗಲ್ಲುಶಿಕ್ಷೆ ನೀಡುವ ಕಾನೂನನ್ನು ಜಾರಿಗೆ ತರುತ್ತಿರುವುದನ್ನು ಇಲ್ಲಿ ಉಲ್ಲೇಖಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+