ಭಾರತದಲ್ಲಿ ಶೇ.90ರಷ್ಟು ಕೊವಿಡ್-19 ಸೋಂಕಿತರು ಗುಣಮುಖ

ನವದೆಹಲಿ, ಅಕ್ಟೋಬರ್.25: ಭಾರತದಲ್ಲಿ 100 ಮಂದಿ ಕೊವಿಡ್-19 ಸೋಂಕಿತರ ಪೈಕಿ 90 ಮಂದಿ ಗುಣಮುಖರಾಗಿರುವುದು ಅಂಕಿ-ಅಂಶಗಳ ಸಮೇತ ಸಾಬೀತಾಗಿದೆ. ಕಳೆದ 24 ಗಂಟೆಗಳಲ್ಲೇ 62077 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ದೇಶದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆಯಲ್ಲಿ ಗಣನೀಯ ಇಳಿಕೆ ಕಂಡು ಬಂದಿದೆ. ಹೊಸ ಪ್ರಕರಣಗಳ ಜೊತೆಗೆ ಸಾವಿನ ಪ್ರಮಾಣವೂ ಕಡಿಮೆ ಆಗಿರುವ ಬಗ್ಗೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಮಾಹಿತಿ ನೀಡಿದೆ.

ಒಟ್ಟು 78,64,811ಸೋಂಕಿತ ಪ್ರಕರಣಗಳ ಪೈಕಿ 70,78,123 ಕೊರೊನಾವೈರಸ್ ಸೋಂಕಿತರು ಗುಣಮುಖರಾಗಿದ್ದಾರೆ. ಉಳಿದಂತೆ 6,68,154 ಸಕ್ರಿಯ ಪ್ರಕರಣಗಳಿವೆ. ಕಳೆದ ಅಕ್ಟೋಬರ್.02ರಿಂದ ಸಾವಿನ ಪ್ರಮಾಣದಲ್ಲೂ ಭಾರಿ ಇಳಿಕೆ ಕಂಡು ಬಂದಿದೆ ಎಂದು ಆರೋಗ್ಯ ಸಚಿವಾಲಯವು ತಿಳಿಸಿದೆ.

90 Percent Of Coronavirus Infected Peoples Recovered in India: Health Ministry


24 ಗಂಟೆಗಳಲ್ಲೇ 50,129 ಕೊವಿಡ್-19 ಪ್ರಕರಣ:

ಭಾರತದಲ್ಲಿ ಒಂದೇ ದಿನ 50,129 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಒಟ್ಟು ಸೋಂಕಿತ ಪ್ರಕರಣಗಳ ಸಂಖ್ಯೆ ಈಗಾಗಲೇ 78,64,811ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಒಂದೇ ದಿನ 578 ಮಂದಿ ಕೊವಿಡ್-19 ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಸಾವಿನ ಸಂಖ್ಯೆಯು 1,18,534ಕ್ಕೆ ಏರಿಕೆಯಾಗಿದೆ. ಕಳೆದ 15 ದಿನಗಳಿಂದ ಸಾವಿನ ಸಂಖ್ಯೆ 1000ಕ್ಕಿಂತ ಕಡಿಮೆಯಾಗಿದ್ದು, ಸಾವಿನ ಪ್ರಮಾಣವೂ ಇಳಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+