ಕೋವಿಡ್ ಸೋಂಕಿತರು; ವಿಶ್ವದಲ್ಲಿ ಭಾರತಕ್ಕೆ 2ನೇ ಸ್ಥಾನ

ನವದೆಹಲಿ, ಸೆಪ್ಟೆಂಬರ್ 07: ಭಾರತದಲ್ಲಿ ಕಳೆದ 24 ಗಂಟೆಯಲ್ಲಿ 90,802 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 42,04,614ಕ್ಕೆ ಏರಿಕೆಯಾಗಿದೆ. ವಿಶ್ವದಲ್ಲಿ ಕೋವಿಡ್ ಸೋಂಕಿತರ ಪಟ್ಟಿಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ.

Recommended Video

      Corona ಅಂಕಿ ಅಂಶಗಳಲ್ಲಿ ಕಂಡ ಏಕೈಕ ಪಾಸಿಟಿವ್ ಸುದ್ದಿ | Oneindia Kannada

      ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ ಭಾನುವಾರ ಬೆಳಗ್ಗೆ 8ರಿಂದ ಸೋಮವಾರ ಬೆಳಗ್ಗೆ 8ರ ತನಕ ದೇಶದಲ್ಲಿ 90,802 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 1016 ಜನರು ಮೃತಪಟ್ಟಿದ್ದಾರೆ. ದೇಶದಲ್ಲಿ ಇದುವರೆಗೂ ಮೃತಪಟ್ಟವರ ಸಂಖ್ಯೆ 71,642.

      ಇದುವರೆಗೂ ಭಾರದಲ್ಲಿ 4,95,51,507 ಮಾದರಿಗಳ ಕೋವಿಡ್ ಪರೀಕ್ಷೆ ಮಾಡಲಾಗಿದೆ. ಸೆಪ್ಟೆಂಬರ್ 6ರಂದು 7,20,362 ಮಾದರಿಗಳ ಪರೀಕ್ಷೆಯನ್ನು ನಡೆಸಲಾಗಿದೆ ಎಂದು ಐಸಿಎಂಆರ್ ಹೇಳಿದೆ.

      ಭಾರತದಲ್ಲಿ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 42,04,614. ಸಕ್ರಿಯ ಪ್ರಕರಣಗಳು 8,82,542. ದೇಶದಲ್ಲಿ ಇದುವರೆಗೂ 32,50,429 ಜನರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಮೃತಪಟ್ಟವರ ಸಂಖ್ಯೆ 71,642.

      ಅತಿ ಹೆಚ್ಚು ಕೋವಿಡ್ ಪ್ರಕರಣಗಳ ಸಂಖ್ಯೆ

      ಅತಿ ಹೆಚ್ಚು ಕೋವಿಡ್ ಪ್ರಕರಣಗಳ ಸಂಖ್ಯೆ

      ವಿಶ್ವ ಆರೋಗ್ಯ ಸಂಸ್ಥೆಯ ಮಾಹಿತಿ ಪ್ರಕಾರ ಭಾರತದಲ್ಲಿ ಒಂದು ತಿಂಗಳ ಬಳಿಕ ಪ್ರತಿದಿನ ಅತಿ ಹೆಚ್ಚು ಕೋವಿಡ್ ಪ್ರಕರಣ ದಾಖಲಾಗುತ್ತಿದೆ. ಪ್ರತಿ ದಿನ 50 ರಿಂದ 60 ಸಾವಿರ ಪ್ರಕರಣ ದಾಖಲಾಗುತ್ತಿತ್ತು. ಈಗ ಪ್ರತಿ ದಿನ 85 ಸಾವಿರದಿಂದ 90 ಸಾವಿರ ಪ್ರಕರಣಗಳು ದಾಖಲಾಗುತ್ತಿವೆ.

      ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ

      ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ

      ಭಾರತದಲ್ಲಿ ಮಹಾರಾಷ್ಟ್ರ, ಆಂಧ್ರ ಪ್ರದೇಶ, ತಮಿಳುನಾಡು, ಕರ್ನಾಟಕ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಿದೆ. ಕಳೆದ 24 ಗಂಟೆಯಲ್ಲಿ ಈ ರಾಜ್ಯಗಳಲ್ಲಿ ಅತಿ ಹೆಚ್ಚು ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ.

      32.5 ಲಕ್ಷ ಸೋಂಕಿತರು ಗುಣಮುಖ

      32.5 ಲಕ್ಷ ಸೋಂಕಿತರು ಗುಣಮುಖ

      ಭಾರತದಲ್ಲಿ ಇದುವರೆಗೂ 32.5 ಲಕ್ಷ ಕೋವಿಡ್ ಸೋಂಕಿತರು ಗುಣಮುಖಗೊಂಡು ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಯಲ್ಲಿಯೇ 69,000 ಜನರು ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಮೃತಪಟ್ಟವರ ಸಂಖ್ಯೆ 71,642.

      ಯಾವ ದೇಶದಲ್ಲಿ ಎಷ್ಟು?

      ಯಾವ ದೇಶದಲ್ಲಿ ಎಷ್ಟು?

      ವಿಶ್ವದಲ್ಲಿ ಅಮೆರಿಕದಲ್ಲಿ 6,460,250 ಸೋಂಕಿತರು ಇದ್ದಾರೆ ದೇಶ ಮೊದಲ ಸ್ಥಾನದಲ್ಲಿದೆ. ಭಾರತದಲ್ಲಿ 4,204,613 ಸೋಂಕಿತರು ಇದ್ದು, 2ನೇ ಸ್ಥಾನದಲ್ಲಿದೆ. ಬ್ರೆಜಿಲ್‌ನಲ್ಲಿ 4,137,606 ಸೋಂಕಿತರಿದ್ದು 3ನೇ ಸ್ಥಾನದಲ್ಲಿದೆ. ವಿಶ್ವದಲ್ಲಿ 4ನೇ ಸ್ಥಾನದಲ್ಲಿ ರಷ್ಯಾವಿದೆ (1,025,505).

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+