24 ಗಂಟೆಯಲ್ಲಿ ಭಾರತದಲ್ಲಿ 92,071 ಹೊಸ ಕೋವಿಡ್ ಪ್ರಕರಣ
ನವದೆಹಲಿ, ಸೆಪ್ಟೆಂಬರ್ 14 : ಭಾರತದಲ್ಲಿ 24 ಗಂಟೆಯಲ್ಲಿ 92,071 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ದೇಶದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 48,46,428ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ಹೆಲ್ತ್ ಬುಲೆಟಿನ್‌ನಲ್ಲಿ ಈ ಕುರಿತು ಮಾಹಿತಿ ನೀಡಿದೆ. ದೇಶದಲ್ಲಿ 24 ಗಂಟೆಯಲ್ಲಿ 1,136 ಜನರು ಸಾವನ್ನಪ್ಪಿದ್ದಾರೆ, ಇದುವರೆಗೂ ಒಟ್ಟು ಮೃತಪಟ್ಟವರ ಸಂಖ್ಯೆ 79,722.
ಭಾರತದಲ್ಲಿನ ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 9,86,598. ಇದುವರೆಗೂ ಗುಣಮುಖರಾದವರು 37,80,108 ಎಂದು ಆರೋಗ್ಯ ಸಚಿವಾಲಯ ಹೇಳಿದೆ. ವಿಶ್ವದಲ್ಲಿಯೇ ಅತಿ ಹೆಚ್ಚು ಕೋವಿಡ್ ಸೋಂಕಿತರು ಇರುವ ದೇಶಗಳ ಪಟ್ಟಿಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ.
ಭಾನುವಾರದ ತನಕ ದೇಶದಲ್ಲಿ 5,72,39,428 ಮಾದರಿಗಳ ಕೋವಿಡ್ ಪರೀಕ್ಷೆಯನ್ನು ಮಾಡಲಾಗಿದೆ. ಸೆಪ್ಟೆಂಬರ್ 13ರಂದು 9,78,500 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.

ಭಾರತಕ್ಕೆ 2ನೇ ಸ್ಥಾನ
ವಿಶ್ವದಲ್ಲಿ ಅತಿ ಹೆಚ್ಚು ಕೋವಿಡ್ ಸೋಂಕಿತರು ಇರುವ ದೇಶ ಅಮೆರಿಕ (6,708,458) ಸೋಂಕಿತರು ಇದ್ದಾರೆ. ಭಾರತ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 2ನೇ ಸ್ಥಾನದಲ್ಲಿದೆ. ಬ್ರೆಜಿಲ್ ಮೂರನೇ ಸ್ಥಾನದಲ್ಲಿದ್ದು ಒಟ್ಟು ಸೋಂಕಿತರ ಸಂಖ್ಯೆ 4,330,455.

ಮಹಾರಾಷ್ಟ್ರ ರಾಜ್ಯ ಟಾಪ್
ಭಾರತದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ. ರಾಜ್ಯದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 10,60,308. ಸಕ್ರಿಯ ಪ್ರಕರಣಗಳ ಸಂಖ್ಯೆ 2,90,334. ಇದುವರೆಗೂ ರಾಜ್ಯದಲ್ಲಿ 29,531 ಜನರು ಮೃತಪಟ್ಟಿದ್ದಾರೆ.

ಆಂಧ್ರಪ್ರದೇಶಕ್ಕೆ 2ನೇ ಸ್ಥಾನ
ಭಾರತದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ 2ನೇ ರಾಜ್ಯ ಆಂಧ್ರ ಪ್ರದೇಶ. ಒಟ್ಟು ಸೋಂಕಿತರ ಸಂಖ್ಯೆ 5,67,123. ಸಕ್ರಿಯ ಪ್ರಕರಣಗಳ ಸಂಖ್ಯೆ 95,072. ತಮಿಳುನಾಡು 3ನೇ ಸ್ಥಾನದಲ್ಲಿದೆ. ಒಟ್ಟು ಸೋಂಕಿತರ ಸಂಖ್ಯೆ 5,02,759.
Recommended Video

ಕರ್ನಾಟಕ, ಉತ್ತರ ಪ್ರದೇಶ
ಕರ್ನಾಟಕದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 4,59,445ಕ್ಕೇ ಏರಿಕೆಯಾಗಿದ್ದು, ರಾಜ್ಯ ದೇಶದಲ್ಲಿ 4ನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ ರಾಜ್ಯ 5ನೇ ಸ್ಥಾನದಲ್ಲಿದ್ದು, ಒಟ್ಟು ಸೋಂಕಿತರು 3,12,036.












Click it and Unblock the Notifications