ಭಾರತದಲ್ಲಿ ಕೊರೊನಾವೈರಸ್ ಹೊಸ ಪ್ರಕರಣ, ಪರೀಕ್ಷೆ, ಲಸಿಕೆ ವಿತರಣೆ ವಿವರ

ನವದೆಹಲಿ, ಜೂನ್ 09: ಭಾರತದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ರೋಗದ ಪ್ರಭಾವ ತಗ್ಗಿರುವುದು ಅಂಕಿ-ಅಂಶಗಳ ಸಹಿತ ಗೊತ್ತಾಗುತ್ತಿದೆ. ಸತತ ಎರಡನೇ ದಿನವೂ ದೇಶದಲ್ಲಿ ಒಂದು ಲಕ್ಷಕ್ಕಿಂತ ಕಡಿಮೆ ಸೋಂಕಿತ ಪ್ರಕರಣಗಳು ವರದಿಯಾಗಿವೆ.

ದೇಶದಲ್ಲಿ ಒಂದೇ ದಿನ 92,596 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ. ಇದೇ ಅವಧಿಯಲ್ಲಿ 1,62,664 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಂದೇ ದಿನ ಕೊರೊನಾವೈರಸ್ ಮಹಾಮಾರಿಗೆ 2219 ಮಂದಿ ಪ್ರಾಣ ಬಿಟ್ಟಿದ್ದಾರೆ.

ಭಾರತದಲ್ಲಿ ಒಟ್ಟು 2,90,89,069 ಕೊರೊನಾವೈರಸ್ ಸೋಂಕಿತ ಪ್ರಕರಣಗಳು ವರದಿಯಾಗಿವೆ. ಈ ಪೈಕಿ ಇದುವರೆಗೂ 2,75,04,126 ಸೋಂಕಿತರು ಗುಣಮುಖರಾಗಿದ್ದು, ಮಹಾಮಾರಿಯಿಂದ ಒಟ್ಟು 3,53,528 ಜನರು ಪ್ರಾಣ ಬಿಟ್ಟಿದ್ದಾರೆ. ಇದರ ಹೊರತಾಗಿ 12,31,415 ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಪತ್ತೆಯಾಗಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ತಗ್ಗಿದ ಕೊರೊನಾವೈರಸ್ ತಪಾಸಣೆ ಪ್ರಮಾಣ

ದೇಶದಲ್ಲಿ ತಗ್ಗಿದ ಕೊರೊನಾವೈರಸ್ ತಪಾಸಣೆ ಪ್ರಮಾಣ

ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಇಳಿಮುಖವಾಗುವುದಕ್ಕೆ ಇನ್ನೂ ಒಂದು ಕಾರಣ ಅಡಗಿದೆ. ಕೊವಿಡ್-19 ಸೋಂಕು ಪರೀಕ್ಷೆ ಪ್ರಮಾಣದಲ್ಲೂ ಇಳಿಕೆ ಕಂಡು ಬಂದಿದೆ. ಪ್ರತಿನಿತ್ಯ 20 ಲಕ್ಷಕ್ಕೂ ಹೆಚ್ಚು ಜನರಿಗೆ ತಪಾಸಣೆ ನಡೆಸಲಾಗುತ್ತಿತ್ತು. ಆದರೆ ಕಳೆದ 24 ಗಂಟೆಗಳಲ್ಲಿ 19,85,967 ಜನರ ಮಾದರಿ ತಪಾಸಣೆಗೆ ಒಳಪಡಿಸಲಾಗಿದೆ. ದೇಶದಲ್ಲಿ ಈವರೆಗೂ 37,01,93,563 ಜನರಿಗೆ ಕೊವಿಡ್-19 ಸೋಂಕಿನ ತಪಾಸಣೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಮಾಹಿತಿ ನೀಡಿದೆ.

ಒಂದು ಗಂಟೆಯಲ್ಲಿ 1 ಲಕ್ಷ ಫಲಾನುಭವಿಗಳಿಗೆ ಕೊರೊನಾ ಲಸಿಕೆ

ಒಂದು ಗಂಟೆಯಲ್ಲಿ 1 ಲಕ್ಷ ಫಲಾನುಭವಿಗಳಿಗೆ ಕೊರೊನಾ ಲಸಿಕೆ

ಭಾರತದಲ್ಲಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನ ಆರಂಭವಾಗಿ 144 ದಿನಗಳಲ್ಲಿ 23,90,58,360 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ಮಂಗಳವಾರ ರಾತ್ರಿ 7 ಗಂಟೆ ವೇಳೆಗೆ 25,58,652 ಮಂದಿಗೆ ಕೊರೊನಾವೈರಸ್ ಲಸಿಕೆ ನೀಡಲಾಗಿದೆ. ಈ ಪೈಕಿ 22,67,842 ಜನರಿಗೆ ಮೊದಲ ಡೋಸ್ ಹಾಗೂ 2,90,810 ಫಲಾನುಭವಿಗಳಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

ಎಷ್ಟು ಹಂತಗಳಲ್ಲಿ ಕೊವಿಡ್-19 ಲಸಿಕೆ ವಿತರಣೆ

ಎಷ್ಟು ಹಂತಗಳಲ್ಲಿ ಕೊವಿಡ್-19 ಲಸಿಕೆ ವಿತರಣೆ

ದೇಶದಲ್ಲಿ ಕೊರೊನಾವೈರಸ್ ಸಾಂಕ್ರಾಮಿಕ ಪಿಡುಗು ಹರಡುವಿಕೆ ವೇಗಕ್ಕೆ ಕಡಿವಾಣ ಹಾಕಲು ಮೂರು ಹಂತಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ಜನವರಿ 16ರಂದು ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರು, ಮೊದಲ ಶ್ರೇಣಿ ಕಾರ್ಮಿಕರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಮಾರ್ಚ್ 1ರಂದು ಎರಡನೇ ಹಂತದಲ್ಲಿ ಆರೋಗ್ಯ ಸಮಸ್ಯೆ ಹೊಂದಿರುವ 45 ವರ್ಷ ಮೇಲ್ಪಟ್ಟ ಹಾಗೂ 60 ವರ್ಷದ ಮೇಲ್ಪಟ್ಟ ಪ್ರತಿಯೊಬ್ಬರಿಗೆ ಲಸಿಕೆ ವಿತರಣೆ ಆರಂಭಿಸಲಾಯಿತು. ಏಪ್ರಿಲ್ 1ರಂದು 45 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರಿಗೂ ಕೊವಿಡ್-19 ಲಸಿಕೆ ವಿತರಣೆ ಶುರು ಮಾಡಲಾಗಿತ್ತು. ಮೂರನೇ ಹಂತದಲ್ಲಿ ಮೇ 1ರಿಂದ 18-44 ವಯೋಮಾನದವರಿಗೆ ಲಸಿಕೆ ನೀಡುವ ಪ್ರಕ್ರಿಯೆಗೆ ಚಾಲನೆ ನೀಡಲಾಗಿತ್ತು.

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಯಾವ ಹಂತದಲ್ಲಿ ಎಷ್ಟು ಫಲಾನುಭವಿಗಳಿಗೆ ಲಸಿಕೆ?

ಭಾರತದಲ್ಲಿ ಮೇ 1ರಿಂದ ಈವರೆಗೂ 3,17,37,869 ಫಲಾನುಭವಿಗಳಿಗೆ ಕೊರೊನಾವೈರಸ್ ಲಸಿಕೆಯ ಮೊದಲ ಡೋಸ್ ನೀಡಲಾಗಿದ್ದು, 3,16,134 ಜನರಿಗೆ ಎರಡನೇ ಡೋಸ್ ಲಸಿಕೆಯನ್ನು ವಿತರಿಸಲಾಗಿದೆ.

ದೇಶದಲ್ಲಿ ಈವರೆಗೂ 99,95,552 ಆರೋಗ್ಯ ಕಾರ್ಯಕರ್ತರಿಗೆ ಮೊದಲ ಡೋಸ್ ಮತ್ತು 68,91,662 ಆರೋಗ್ಯ ಕಾರ್ಯಕರ್ತರಿಗೆ ಎರಡನೇ ಡೋಸ್ ನೀಡಲಾಗಿದೆ. 1,63,80,521 ಜನ ಮೊದಲ ಶ್ರೇಣಿ ಕಾರ್ಮಿಕರಿಗೆ ಮೊದಲ ಡೋಸ್ ಹಾಗೂ 87,26,071 ಕಾರ್ಮಿಕರಿಗೆ ಎರಡನೇ ಡೋಸ್ ಕೊವಿಡ್-19 ಲಸಿಕೆ ನೀಡಲಾಗಿದೆ.

ದೇಶದಲ್ಲಿ ಈವರೆಗೂ 45 ವರ್ಷಕ್ಕಿಂತ ಮೇಲ್ಪಟ್ಟ 7,25,46,765 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು 1,15,34,478 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ. 60 ವರ್ಷ ಮೇಲ್ಪಟ್ಟ 6,12,75,505 ಫಲಾನುಭವಿಗಳಿಗೆ ಮೊದಲ ಡೋಸ್ ಲಸಿಕೆ ನೀಡಲಾಗಿದ್ದು, 1,94,36,078 ಜನರಿಗೆ ಎರಡನೇ ಡೋಸ್ ಲಸಿಕೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+