ಭಾರತದಲ್ಲಿ ಕೊರೊನಾ ಸೋಂಕಿತರಿಗಿಂತ ಗುಣಮುಖರ ಸಂಖ್ಯೆ ಡಬಲ್!
ನವದೆಹಲಿ, ಫೆಬ್ರವರಿ.12: ಭಾರತದಲ್ಲಿ ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ ಮತ್ತೊಮ್ಮೆ ತಗ್ಗಿದೆ. ಕಳೆದ 24 ಗಂಟೆಗಳಲ್ಲಿ 9309 ಮಂದಿಗೆ ಕೊರೊನಾವೈರಸ್ ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ದೃಢಪಟ್ಟಿದೆ.
ದೇಶದಲ್ಲಿ ಒಂದೇ ದಿನ 87 ಮಂದಿ ಕೊರೊನಾವೈರಸ್ ಸೋಂಕಿನಿಂದ ಪ್ರಾಣ ಬಿಟ್ಟಿದ್ದು, ಒಟ್ಟು ಸಾವಿನ ಸಂಖ್ಯೆಯು 1,55,447ಕ್ಕೆ ಏರಿಕೆಯಾಗಿದೆ. ಹೊಸ ಸೋಂಕಿತ ಪ್ರಕರಣಗಳಿಗಿಂತ ಗುಣಮುಖರಾದವರ ಸಂಖ್ಯೆಯೇ ಹೆಚ್ಚಾಗಿದೆ. ಕಳೆದ ಒಂದು ದಿನದಲ್ಲಿ 15,858 ಜನರು ಕೊವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ.
ಶುಕ್ರವಾರದ ಅಂಕಿ-ಅಂಶಗಳ ಪ್ರಕಾರ, ಒಟ್ಟು ಕೊರೊನಾವೈರಸ್ ಸೋಂಕಿತ ಪ್ರಕರಣಗಳ ಸಂಖ್ಯೆ 1,08,80,603ಕ್ಕೆ ಏರಿಕೆಯಾಗಿದೆ. 1,05,89,230 ಕೊವಿಡ್-19 ಸೋಂಕಿತರು ಗುಣಮುಖರಾಗಿದ್ದು, ಉಳಿದಂತೆ 1,35,926 ಸಕ್ರಿಯ ಪ್ರಕರಣಗಳಿವೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

75,05,010 ಜನರಿಗೆ ಕೊರೊನಾವೈರಸ್ ಲಸಿಕೆ:
ದೇಶದಲ್ಲಿ ಎರಡನೇ ಹಂತದ ಕೊವಿಡ್-19 ಲಸಿಕೆ ವಿತರಣೆ ಅಭಿಯಾನವನ್ನು ಸಹ ಕ್ಷಿಪ್ರಗತಿಯಲ್ಲಿ ನಡೆಸಲಾಗುತ್ತಿದೆ. ಇದುವರೆಗೂ 75,05,010 ವೈದ್ಯಕೀಯ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಸೆರಮ್ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ.












Click it and Unblock the Notifications