• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೊರೊನಾ ಲಸಿಕೆ ವಿತರಣೆಯಲ್ಲಿ ಭಾರತಕ್ಕೆ 3ನೇ ಸ್ಥಾನ!

|

ನವದೆಹಲಿ, ಫೆಬ್ರವರಿ.18: ಜಗತ್ತಿನಲ್ಲೇ ಅತಿಹೆಚ್ಚು ಕೊರೊನಾವೈರಸ್ ಲಸಿಕೆ ವಿತರಿಸಿದ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವು ಮೂರನೇ ಸ್ಥಾನದಲ್ಲಿದೆ. ದೇಶದಲ್ಲಿ ಇದುವರೆಗೂ 94 ಲಕ್ಷಕ್ಕೂ ಅಧಿಕ ಮಂದಿಗೆ ಕೊವಿಡ್-19 ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ತಿಳಿಸಿದೆ.

ಜನವರಿ.16ರಂದು ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಕೊರೊನಾವೈರಸ್ ಲಸಿಕೆ ವಿತರಣೆ ಅಭಿಯಾನಕ್ಕೆ ಚಾಲನೆ ನೀಡಿದ್ದರು. ಅಂದಿನಿಂದ 33 ದಿನಗಳಲ್ಲಿ ಅತಿಹೆಚ್ಚು ಜನರಿಗೆ ಲಸಿಕೆ ನೀಡಿದ 3ನೇ ರಾಷ್ಟ್ರ ಭಾರತವಾಗಿದೆ. ಅಮೆರಿಕಾ ಅಗ್ರಸ್ಥಾನದಲ್ಲಿದ್ದರೆ, ಇಂಗ್ಲೆಂಡ್ ಎರಡನೇ ಸ್ಥಾನದಲ್ಲಿ ಗುರುತಿಸಿಕೊಂಡಿದೆ.

ಕೊರೊನಾ ಸುದ್ದಿ: 16 ದಿನಗಳಲ್ಲಿ 10 ಬಾರಿ 100ಕ್ಕಿಂತ ಕಡಿಮೆ ಜನರ ಸಾವು

ಭಾರತದಲ್ಲಿ ಆಕ್ಸ್ ಫರ್ಡ್ ವಿಶ್ವವಿದ್ಯಾಲಯದಲ್ಲಿ ಸಂಶೋಧಿಸಿದ ಮತ್ತು ಪುಣೆಯ ಸೆರಂ ಇನ್ಸ್ ಟಿಟ್ಯೂಟ್ ಆಫ್ ಇಂಡಿಯಾದಲ್ಲಿ ಉತ್ಪಾದಿಸಿದ ಕೊವಿಶೀಲ್ಡ್ ಮತ್ತು ಭಾರತ್ ಬಯೋಟೆಕ್ ಸಂಸ್ಥೆಯ ಕೊವ್ಯಾಕ್ಸಿನ್ ಲಸಿಕೆಯನ್ನು ವಿತರಿಸಲಾಗುತ್ತಿದೆ. ಮೊದಲ ಹಂತದ ಲಸಿಕೆ ನಂತರ ದೇಶದಲ್ಲಿ ಇದೀಗ ಎರಡನೇ ಹಂತದ ಲಸಿಕೆ ವಿತರಣೆ ಅಭಿಯಾನ ನಡೆಸಲಾಗುತ್ತಿದೆ.

{photo-feature}

English summary
94 People Has Got Coronavirus Vaccine, India Is Third Nation In World.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X