ಭಾರತದಲ್ಲಿ 24 ಗಂಟೆಯಲ್ಲಿ 94,372 ಹೊಸ ಕೋವಿಡ್ ಪ್ರಕರಣ
ನವದೆಹಲಿ, ಸೆಪ್ಟೆಂಬರ್ 13: ಭಾರತದಲ್ಲಿ 24 ಗಂಟೆಯಲ್ಲಿ 94,372 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ, 1,114 ಜನರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ದೇಶದಲ್ಲಿನ ಒಟ್ಟು ಕೋವಿಡ್ ಸೋಂಕಿತರ ಸಂಖ್ಯೆ 47,54,357ಕ್ಕೆ ಏರಿಕೆಯಾಗಿದೆ ಮತ್ತು ದೇಶದಲ್ಲಿಯೇ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ.
ಭಾರತದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 9,73,175. ಇದುವರೆಗೂ ಗುಣಮುಖರಾದವರು 37,02,596. 24 ಗಂಟೆಯಲ್ಲಿ 1,114 ಜನರು ಮೃತಪಟ್ಟಿದ್ದಾರೆ, ಇದುವರೆಗೂ ಒಟ್ಟು ಮೃತಪಟ್ಟವರ ಸಂಖ್ಯೆ 78,586.
ಇದುವರೆಗೂ ದೇಶದಲ್ಲಿ 5,62,60,928 ಮಾದರಿಗಳ ಕೋವಿಡ್ ಪರೀಕ್ಷೆ ನಡೆಸಲಾಗಿದೆ. 10,71,702 ಮಾದರಿಗಳ ಪರೀಕ್ಷೆಯನ್ನು ಸೆಪ್ಟೆಂಬರ್ 12ರಂದು ನಡೆಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

5 ರಾಜ್ಯಗಳಲ್ಲಿ ಹೆಚ್ಚು ಪ್ರಕರಣಗಳು
ಕಳೆದ 24 ಗಂಟೆಯಲ್ಲಿ ಮಹಾರಾಷ್ಟ್ರ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಮತ್ತು ಉತ್ತರ ಪ್ರದೇಶದಲ್ಲಿ ಅತಿ ಹೆಚ್ಚು ಕೋವಿಡ್ ಪ್ರಕರಣಗಳು ದಾಖಲಾಗಿವೆ. ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 10,37,765ಕ್ಕೆ ಏರಿಕೆಯಾಗಿದೆ.

ಗುಣಮುಖರಾಗುವವರ ಸಂಖ್ಯೆ ಹೆಚ್ಚಳ
ಭಾರತದಲ್ಲಿ ಕೋವಿಡ್‌ನಿಂದ ಗುಣಮುಖರಾಗುವವರ ಸಂಖ್ಯೆ ಹೆಚ್ಚಳವಾಗಿದೆ. ಮೇ ತಿಂಗಳಿನಲ್ಲಿ 50 ಸಾವಿರ ಜನರು ಗುಣಮುಖರಾಗಿದ್ದರು. ಸೆಪ್ಟೆಂಬರ್‌ನಲ್ಲಿ ಇದು 36 ಲಕ್ಷಕ್ಕೆ ಏರಿಕೆಯಾಗಿದೆ. ಪ್ರತಿದಿನ ಸುಮಾರು 70 ಸಾವಿರ ಜನರು ಗುಣಮುಖರಾಗುತ್ತಿದ್ದಾರೆ.

ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ
ದೇಶದಲ್ಲಿ ಅತಿ ಹೆಚ್ಚು ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ. ಶನಿವಾರ ರಾಜ್ಯದಲ್ಲಿ 22,084 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. 13,489 ಜನರು ಡಿಸ್ಚಾರ್ಜ್ ಆಗಿದ್ದಾರೆ. ರಾಜ್ಯದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 2,79,768.

ಸಂಸತ್ ಅಧಿವೇಶನ ಆರಂಭ
ಕೋವಿಡ್ ಸೋಂಕಿನ ಭೀತಿಯ ನಡುವೆಯೇ ಸೋಮವಾರದಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭವಾಗಲಿದೆ. ಎಲ್ಲಾ ಸಂಸದರಿಗೂ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಬೆಳಗ್ಗೆ ಮತ್ತು ಮಧ್ಯಾಹ್ನ 3 ಗಂಟೆಗಳ ಕಾಲ ಮಾತ್ರ ಕಲಾಪ ನಡೆಯಲಿದೆ. 785 ಸದಸ್ಯರ ಪೈಕಿ 200ಕ್ಕೂ ಅಧಿಕ ಜನರು 65 ವರ್ಷ ಮೇಲ್ಪಟ್ಟವರು. ಸಾಮಾಜಿಕ ಅಂತರ ಕಾಪಾಡಲು ಸಂಸದರು ಕುಳಿತುಕೊಳ್ಳುವ ಜಾಗದಲ್ಲಿ ಹಲವಾರು ಬದಲಾವಣೆಗಳನ್ನು ಮಾಡಲಾಗಿದೆ.












Click it and Unblock the Notifications