ಭಾರತದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 96,424ಕ್ಕೆ ಏರಿಕೆ
ನವದೆಹಲಿ, ಸೆಪ್ಟೆಂಬರ್ 18 : ಭಾರತದಲ್ಲಿ 24 ಗಂಟೆಯಲ್ಲಿ 96,424 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ದೇಶದ ಒಟ್ಟು ಸೋಂಕಿತರ ಸಂಖ್ಯೆ 52,14,678ಕ್ಕೆ ಏರಿಕೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿಯಂತೆ ಕಳೆದ 24 ಗಂಟೆಯಲ್ಲಿ 1,174 ಜನರು ಮೃತಪಟ್ಟಿದ್ದಾರೆ. ಇದುವರೆಗೂ ಒಟ್ಟು ಮೃತಪಟ್ಟವರ ಸಂಖ್ಯೆ 84,372.

ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 10,17,754, ಇದುವರೆಗೂ 41,12,552 ಜನರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಸೆಪ್ಟೆಂಬರ್ 17ರ ತನಕ ದೇಶದಲ್ಲಿ 6,15,75,343 ಮಾದರಿಗಳ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಸೆಪ್ಟೆಂಬರ್ 17ರಂದು 10,06,615 ಮಾದರಿಗಳ ಪರೀಕ್ಷೆ ಮಾಡಲಾಗಿದೆ ಎಂದು ಐಸಿಎಂಆರ್ ಹೇಳಿದೆ.
ವಿಶ್ವದಲ್ಲಿ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ ಭಾರತ 2ನೇ ಸ್ಥಾನದಲ್ಲಿದೆ. ಅಮೆರಿಕದಲ್ಲಿ 6,874,596 ಸೋಂಕಿತರು ಇದ್ದಾರೆ. 3ನೇ ಸ್ಥಾನದಲ್ಲಿ ಬ್ರೆಜಿಲ್ ಇದ್ದು, 4,457,443 ಸೋಂಕಿತರು ಇದ್ದಾರೆ.
ಭಾರತದಲ್ಲಿ ಅತಿ ಹೆಚ್ಚು ಕೋವಿಡ್ ಸೋಂಕಿತರು ಇರುವ ರಾಜ್ಯ ಮಹಾರಾಷ್ಟ್ರ. ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 11,45,840. ಸಕ್ರಿಯ ಪ್ರಕರಣಗಳ ಸಂಖ್ಯೆ
3,01,752.
ಆಂಧ್ರಪ್ರದೇಶ (6,01,462) 2ನೇ ಸ್ಥಾನದಲ್ಲಿದೆ. ತಮಿಳುನಾಡು (5,25,420) ಸೋಂಕಿತರು ಇದ್ದು 3ನೇ ಸ್ಥಾನದಲ್ಲಿದೆ. ಕರ್ನಾಟಕ 4ನೇ ಸ್ಥಾನದಲ್ಲಿದ್ದು ಒಟ್ಟು ಸೋಂಕಿತರ ಸಂಖ್ಯೆ 4,94,356.












Click it and Unblock the Notifications