ಮೂರು ದಿನಗಳಲ್ಲಿ ರಾಜ್ಯಗಳಿಗೆ 96,490 ಡೋಸ್ ಕೊರೊನಾ ಲಸಿಕೆ ಪೂರೈಕೆ
ನವದೆಹಲಿ, ಜೂನ್ 14: ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 96,490 ಡೋಸ್‌ಗಳ ಲಸಿಕೆಗಳನ್ನು ಪೂರೈಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಘೋಷಿಸಿದೆ.
ಸದ್ಯಕ್ಕೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಬಳಿ 1,40,70,224 ಡೋಸ್‌ಗಳ ಲಸಿಕೆಗಳು ಲಭ್ಯವಿವೆ. ಇದುವರೆಗೂ ಕೇಂದ್ರ 26,68,36,62 ಡೋಸ್‌ಗಳನ್ನು ಉಚಿತವಾಗಿ ಪೂರೈಸಿದೆ ಎಂದು ಮಾಹಿತಿ ನೀಡಿದೆ.
ಇದರಲ್ಲಿ ವ್ಯರ್ಥವಾಗಿರುವ ಲಸಿಕೆಗಳೂ ಸೇರಿದಂತೆ 25,27,66,396 ಡೋಸ್‌ಗಳ ಲಸಿಕೆಗಳನ್ನು ಬಳಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

ಮೇ 1ರಿಂದ ಲಸಿಕಾ ನೀತಿಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಲಾಯಿತು. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಅನುಮತಿ ನೀಡಲಾಗಿದ್ದು, ಕೆಲವು ರಾಜ್ಯಗಳಲ್ಲಿ ಲಸಿಕೆಗಳ ಕೊರತೆ ಎದುರಾಗಿದೆ. ಲಸಿಕೆ ಅಭಿಯಾನ ಆರಂಭವಾದಾಗಿನಿಂದ ಇದುವರೆಗೂ 25,48,49,301 ಡೋಸ್‌ಗಳ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ನೀಡಿದೆ.
ಜನವರಿ 16ರಿಂದ ದೇಶದಲ್ಲಿ ಲಸಿಕಾ ಅಭಿಯಾನ ಆರಂಭವಾಗಿದ್ದು, ಹಂತ ಹಂತಗಳಲ್ಲಿ ಅಭಿಯಾನ ನಡೆಯುತ್ತಿದೆ. ಕೋವಿಶೀಲ್ಡ್, ಕೋವ್ಯಾಕ್ಸಿನ್ ಹಾಗೂ ಸ್ಫುಟ್ನಿಕ್ ವಿ ಲಸಿಕೆಗೆ ದೇಶದಲ್ಲಿ ಅನುಮೋದನೆ ನೀಡಲಾಗಿದೆ.












Click it and Unblock the Notifications