ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೂರು ದಿನಗಳಲ್ಲಿ ರಾಜ್ಯಗಳಿಗೆ 96,490 ಡೋಸ್ ಕೊರೊನಾ ಲಸಿಕೆ ಪೂರೈಕೆ

|
Google Oneindia Kannada News

ನವದೆಹಲಿ, ಜೂನ್ 14: ಮುಂದಿನ ಮೂರು ದಿನಗಳಲ್ಲಿ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 96,490 ಡೋಸ್‌ಗಳ ಲಸಿಕೆಗಳನ್ನು ಪೂರೈಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಘೋಷಿಸಿದೆ.

ಸದ್ಯಕ್ಕೆ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಬಳಿ 1,40,70,224 ಡೋಸ್‌ಗಳ ಲಸಿಕೆಗಳು ಲಭ್ಯವಿವೆ. ಇದುವರೆಗೂ ಕೇಂದ್ರ 26,68,36,62 ಡೋಸ್‌ಗಳನ್ನು ಉಚಿತವಾಗಿ ಪೂರೈಸಿದೆ ಎಂದು ಮಾಹಿತಿ ನೀಡಿದೆ.

 ಲಸಿಕೆ ಪಡೆದ ನಂತರ ಜ್ವರ ಬರುವುದು ಸಹಜವೇ? ಜ್ವರ ಇಲ್ಲದಿದ್ದರೆ ಏನರ್ಥ? ಲಸಿಕೆ ಪಡೆದ ನಂತರ ಜ್ವರ ಬರುವುದು ಸಹಜವೇ? ಜ್ವರ ಇಲ್ಲದಿದ್ದರೆ ಏನರ್ಥ?

ಇದರಲ್ಲಿ ವ್ಯರ್ಥವಾಗಿರುವ ಲಸಿಕೆಗಳೂ ಸೇರಿದಂತೆ 25,27,66,396 ಡೋಸ್‌ಗಳ ಲಸಿಕೆಗಳನ್ನು ಬಳಸಿಕೊಳ್ಳಲಾಗಿದೆ ಎಂದು ತಿಳಿಸಿದೆ.

96,490 Covid Vaccine Doses To States In Next 3 Days Says Centre

ಮೇ 1ರಿಂದ ಲಸಿಕಾ ನೀತಿಯಲ್ಲಿ ಕೆಲವು ಮಾರ್ಪಾಡುಗಳನ್ನು ಮಾಡಿಕೊಳ್ಳಲಾಯಿತು. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲು ಅನುಮತಿ ನೀಡಲಾಗಿದ್ದು, ಕೆಲವು ರಾಜ್ಯಗಳಲ್ಲಿ ಲಸಿಕೆಗಳ ಕೊರತೆ ಎದುರಾಗಿದೆ. ಲಸಿಕೆ ಅಭಿಯಾನ ಆರಂಭವಾದಾಗಿನಿಂದ ಇದುವರೆಗೂ 25,48,49,301 ಡೋಸ್‌ಗಳ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಮಾಹಿತಿ ನೀಡಿದೆ.

ಜನವರಿ 16ರಿಂದ ದೇಶದಲ್ಲಿ ಲಸಿಕಾ ಅಭಿಯಾನ ಆರಂಭವಾಗಿದ್ದು, ಹಂತ ಹಂತಗಳಲ್ಲಿ ಅಭಿಯಾನ ನಡೆಯುತ್ತಿದೆ. ಕೋವಿಶೀಲ್ಡ್, ಕೋವ್ಯಾಕ್ಸಿನ್ ಹಾಗೂ ಸ್ಫುಟ್ನಿಕ್ ವಿ ಲಸಿಕೆಗೆ ದೇಶದಲ್ಲಿ ಅನುಮೋದನೆ ನೀಡಲಾಗಿದೆ.

English summary
Ministry of Health and Family Welfare on Monday said more than 96,490 vaccine doses will be received by the states and Union Territories (UT) within the next three days,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X