ಕೊರೊನಾ ವೈರಸ್ ಅಟ್ಟಹಾಸ: ಹೊಸ ದಾಖಲೆ ಬರೆದ ಭಾರತ
ನವದೆಹಲಿ, ಜೂನ್ 6: ಭಾರತದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಲೇ ಇದೆ. ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ.
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 9887 ಕೋವಿಡ್-19 ಪಾಸಿಟಿವ್ ಪ್ರಕರಣ ದಾಖಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಭಾರತದಲ್ಲಿ ಇಲ್ಲಿಯವರೆಗೂ ಒಂದೇ ದಿನದಲ್ಲಿ ಇಷ್ಟೊಂದು ಪ್ರಮಾಣದ ಸೋಂಕಿತರು ಪತ್ತೆಯಾಗಿರುವುದು ಇದೇ ಮೊದಲು.
ಇಟಲಿಯನ್ನೂ ಮೀರಿಸಿದ ಭಾರತ; ಇದು ಕೊರೊನಾ ವೈರಸ್ ಕಥೆ!
ಹಾಗೇ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಕೋವಿಡ್-19 ನಿಂದ 294 ಮಂದಿ ಬಲಿಯಾಗಿದ್ದಾರೆ. ಆ ಮೂಲಕ 24 ಗಂಟೆಗಳ ಅವಧಿಯಲ್ಲಿ ಸೋಂಕಿತರ ಪ್ರಮಾಣ ಮತ್ತು ಸಾವಿನ ಸಂಖ್ಯೆಯಲ್ಲಿ ಭಾರತ ಹೊಸ ದಾಖಲೆ ಬರೆದಂತಾಗಿದೆ.

ಭಾರತದ ಅಂಕಿ-ಅಂಶ
ಭಾರತದಲ್ಲಿ ಇಲ್ಲಿಯವರೆಗೂ 2,36,657 ಮಂದಿಗೆ ಡೆಡ್ಲಿ ಕೊರೊನಾ ವೈರಸ್ ಸೋಂಕು ತಗುಲಿದೆ. ಈವರೆಗೂ 1,14,073 ಮಂದಿ ಕೊರೊನಾ ವೈರಸ್ ವಿರುದ್ಧ ಹೋರಾಡಿ ಸಂಪೂರ್ಣವಾಗಿ ಗುಣಮುಖರಾಗಿದ್ದರೆ, 6,642 ಮಂದಿ ಕೋವಿಡ್-19 ನಿಂದ ಮೃತಪಟ್ಟಿದ್ದಾರೆ.
ಭಾರತದಲ್ಲಿ ಸದ್ಯ 1,15,942 ಸಕ್ರಿಯ ಕೊರೊನಾ ವೈರಸ್ ಸೋಂಕಿತರಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆರನೇ ಸ್ಥಾನಕ್ಕೇರಿದ ಭಾರತ
ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ಅತಿ ಹೆಚ್ಚು ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗಿರುವುದರಿಂದ, ಜಾಗತಿಕ ಪಟ್ಟಿಯಲ್ಲಿ ಇಟಲಿಯನ್ನು ಭಾರತ ಹಿಂದಕ್ಕೆ ತಳ್ಳಿದೆ. ಆ ಮೂಲಕ ಇಡೀ ವಿಶ್ವದಲ್ಲಿ ಹೆಚ್ಚು ಕೊರೊನಾ ವೈರಸ್ ಸೋಂಕಿತರು ಪತ್ತೆಯಾಗಿರುವ ದೇಶಗಳ ಪೈಕಿ ಭಾರತ ಆರನೇ ಸ್ಥಾನಕ್ಕೇರಿದೆ.
ಒಳ್ಳೇ ಸುದ್ದಿ: ಕರ್ನಾಟಕದಲ್ಲಿ ಕೊರೊನಾ ವೈರಸ್ ಗೆ ಗುದ್ದು ಕೊಡುತ್ತಿದೆ 'ಈ' ಚಿಕಿತ್ಸೆ.!

ಇಟಲಿಯಲ್ಲಿ ಸೋಂಕಿತರ ಸಂಖ್ಯೆ ಎಷ್ಟು.?
ಇಟಲಿಯಲ್ಲಿ ಈವರೆಗೆ 234,531 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿದೆ. ಈಗಾಗಲೇ 33,774 ಮಂದಿ ಕೋವಿಡ್-19 ನಿಂದ ಸಾವನ್ನಪ್ಪಿದ್ದು, 163,781 ಮಂದಿ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ.
ಸದ್ಯ ಇಟಲಿಯಲ್ಲಿ ಇರುವ ಸಕ್ರಿಯ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ - 36,976

ಟಾಪ್ 5 ದೇಶಗಳು ಯಾವುವು.?
* ಯು.ಎಸ್.ಎ
ಒಟ್ಟು ಕೊರೊನಾ ವೈರಸ್ ಸೋಂಕಿತರು - 19,65,912
ಕೋವಿಡ್-19 ನಿಂದ ಸಾವನ್ನಪ್ಪಿದವರು - 111,394
ಕೋವಿಡ್-19 ನಿಂದ ಗುಣಮುಖರಾದವರು - 738,729
ಸಕ್ರಿಯ ಕೊರೊನಾ ವೈರಸ್ ಸೋಂಕಿತರು - 11,15,789
* ಬ್ರೆಜಿಲ್
ಒಟ್ಟು ಕೊರೊನಾ ವೈರಸ್ ಸೋಂಕಿತರು - 646,006
ಕೋವಿಡ್-19 ನಿಂದ ಸಾವನ್ನಪ್ಪಿದವರು - 35,047
ಕೋವಿಡ್-19 ನಿಂದ ಗುಣಮುಖರಾದವರು - 302,084
ಸಕ್ರಿಯ ಕೊರೊನಾ ವೈರಸ್ ಸೋಂಕಿತರು - 308,875
* ರಷ್ಯಾ
ಒಟ್ಟು ಕೊರೊನಾ ವೈರಸ್ ಸೋಂಕಿತರು - 449,834
ಕೋವಿಡ್-19 ನಿಂದ ಸಾವನ್ನಪ್ಪಿದವರು - 5,528
ಕೋವಿಡ್-19 ನಿಂದ ಗುಣಮುಖರಾದವರು - 212,680
ಸಕ್ರಿಯ ಕೊರೊನಾ ವೈರಸ್ ಸೋಂಕಿತರು - 231,626
* ಸ್ಪೇನ್
ಒಟ್ಟು ಕೊರೊನಾ ವೈರಸ್ ಸೋಂಕಿತರು - 288,058
ಕೋವಿಡ್-19 ನಿಂದ ಸಾವನ್ನಪ್ಪಿದವರು - 27,134
* ಯು.ಕೆ
ಒಟ್ಟು ಕೊರೊನಾ ವೈರಸ್ ಸೋಂಕಿತರು - 283.311
ಕೋವಿಡ್-19 ನಿಂದ ಸಾವನ್ನಪ್ಪಿದವರು - 40,261