ಪ್ರಿಯಕರನ ಜೊತೆ ಸೇರಿ ಪ್ರೀತಿಗೆ ವಿರೋಧಿಸಿದ ತಾಯಿಯನ್ನು ಕೊಂದ ಅಪ್ರಾಪ್ತೆ

ಭೋಪಾಲ್, ಜ. 02: ತಮ್ಮ ಪ್ರೀತಿಯನ್ನು ವಿರೋಧಿಸಿದಕ್ಕಾಗಿ ಹೆತ್ತ ತಾಯಿಯನ್ನೇ ಮಗಳು ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಮಧ್ಯಪ್ರದೇಶದ ಗ್ವಾಲಿಯರ್ ನಗರದಲ್ಲಿ ನಡೆದಿದೆ.

ಗ್ವಾಲಿಯರ್ ನಗರದಲ್ಲಿ 17 ವರ್ಷದ ಅಪ್ರಾಪ್ತೆ ಮತ್ತು ಆಕೆಯ ಗೆಳೆಯ ಬಾಲಕಿಯ ತಾಯಿಯನ್ನು ಚಾಕುವಿನಿಂದ ಇರಿದು, ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ದುರಂತ ಘಟನೆ ಭಾನುವಾರ ಬೆಳಕಿಗೆ ಬಂದಿದ್ದು, ಬಾಲಕಿಯನ್ನು ವಶಕ್ಕೆ ಪಡೆದು ಆಕೆಯ 25 ವರ್ಷದ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಭಿಂಡ್ ಜಿಲ್ಲೆಯ 38 ವರ್ಷದ ಮೃತ ಮಹಿಳೆಯು ಹಜಿರಾ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯಾಪುರದಲ್ಲಿ ತನ್ನ ಮಗಳೊಂದಿಗೆ ವಾಸಿಸುತ್ತಿದ್ದರು ಎಂದು ವರದಿಯಾಗಿದೆ.

ಕಳೆದ ಎರಡು ತಿಂಗಳ ಹಿಂದೆಯೇ ಬಾಲಕಿ ತಾನು ಪ್ರೀತಿಸುತ್ತಿದ್ದ ಯುವಕನೊಂದಿಗೆ ಮನೆ ಬಿಟ್ಟು ಓಡಿಹೋಗಿದ್ದರು. ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದರು. ಪ್ರಕರಣದಲ್ಲಿ ಆತ ಜಾಮೀನು ಪಡೆದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

A 17-year-old girl, boyfriend killed her mother for opposing their relationship

ಇನ್ನು, ಭಾನುವಾರ ಸಂತ್ರಸ್ತೆಯು ಎಷ್ಟು ಹೊತ್ತಾದರೂ ಮನೆಯ ಬಾಗಿಲು ತೆರೆಯುತ್ತಿಲ್ಲ ಎಂದಿ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಪೊಲೀಸರು ಸ್ಥಳಕ್ಕಾಗಮಿಸಿ, ಬಾಗಿಲು ಒಡೆದು ಒಳಗೆ ಪ್ರವೇಶಿಸಿದಾಗ, ಮಹಿಳೆ ರಕ್ತದ ಮಡುವಿನಲ್ಲಿ ಶವವಾಗಿ ಬಿದ್ದಿರುವುದು ಕಂಡಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಮಿತ್ ಸಂಘಿ ತಿಳಿಸಿದ್ದಾರೆ. ಈ ವೇಳೆ ಮನೆಯಲ್ಲಿ ಬಾಲಕಿ ಪತ್ತೆಯಾಗಿಲ್ಲ.

ತನಿಖೆ ಆರಂಭಿಸಿದ ಪೊಲೀಸರು ತನ್ನ ಪ್ರಿಯಕರನೊಂದಿಗೆ ಇದ್ದ ಅಪ್ರಾಪ್ತ ಬಾಲಕಿಯನ್ನು ಪತ್ತೆಹಚ್ಚಿದ್ದಾರೆ. ಮಹಿಳೆಯನ್ನು ತರಕಾರಿ ಚಾಕುವಿನಿಂದ ಇರಿದು ಕತ್ತು ಹಿಸುಕಿ ಸಾಯಿಸಿರುವುದಾಗಿಯೂ, ಇಬ್ಬರೂ ಓಡಿಹೋಗಲು ಯೋಜಿಸಿದ್ದಾಗಿಯೂ ಬಾಲಕಿ ಮತ್ತು ಆಕೆಯ ಸ್ನೇಹಿತ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಯೊಂದಿಗೆ ತನ್ನ ಮಗಳು ಪ್ರೇಮಕ್ಕೆ ಬಿದ್ದಿರುವುದು ತಾಯಿಗೆ ಇಷ್ಟವಿರಲಿಲ್ಲ. ಹೀಗಾಗಿ ಆತನ ಜೊತೆಗೆ ಸಂಬಂಧವಿರಿಸಿಕೊಳ್ಳದಂತೆ ಎಚ್ಚರಿಕೆ ನೀಡಿದ್ದರು. ಎರಡು ತಿಂಗಳ ಹಿಂದೆ ಬಾಲಕಿ ತನ್ನ ಪ್ರಿಯಕರನೊಂದಿಗೆ ಓಡಿ ಹೋಗಿದ್ದಳು. ಆಗಲೂ ಆಕೆಯ ತಾಯಿ ಪೊಲೀಸರಿಗೆ ದೂರು ನೀಡಿದ್ದರು. ಪೊಲೀಸರು ಬಾಲಕಿಯನ್ನು ಮನೆಗೆ ಕರೆತಂದು, ಪ್ರಿಯಕರನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದ್ದರು. ಬಳಿಕ ಆತ ಜಾಮೀನು ಪಡೆದಿದ್ದರು ಎಮದು ಪೊಲಿಸ್ ಅಧಿಕಾರಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಮಹಿಳೆಯನ್ನು ಕೊಂದ ಇಬ್ಬರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ನಿಬಂಧನೆಗಳ ಅಡಿಯಲ್ಲಿ ಕೊಲೆ ಮತ್ತು ಇತರ ಅಪರಾಧಗಳ ಆರೋಪ ಹೊರಿಸಲಾಗಿದೆ ಎಂದು ಹಜಿರಾ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸಂತೋಷ್ ಸಿಂಗ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+