ಅಸ್ಸಾಮಿನಲ್ಲಿ ಭೂಕಂಪ: ರಿಕ್ಟರ್ ಮಾಪನದಲ್ಲಿ 4.0 ತೀವ್ರತೆ ದಾಖಲು
ಡರ್ರಾಂಗ್ (ಅಸ್ಸಾಂ), ಜುಲೈ 31: ಅಸ್ಸಾಮಿನ ಡರ್ರಾಂಗ್ ಎಂಬಲ್ಲಿ ಇಂದು(ಜುಲೈ 31) ಬೆಳಿಗ್ಗೆ ಲಘು ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪನದಲ್ಲಿ 4.0 ತೀವ್ರತೆ ದಾಖಲಾಗಿದೆ.
ಬೆಳಿಗ್ಗೆ 6:30 ರ ಸುಮಾರಿಗೆ ಭೂಕಂಪ ಸಂಭವಿಸಿದ್ದು, ಯಾವುದೇ ಸಾವು ನೋವಿನ ವರದಿಯಾಗಿಲ್ಲ. ಇತ್ತೀಚೆಗೆ ಈಶಾನ್ಯ ರಾಜ್ಯಗಳಲ್ಲಿ ಪದೇ ಪದೇ ಭೂಕಂಪ ಸಂಭವಿಸುತ್ತಿದ್ದು, ಈ ಭಾಗದ ಜನರಲ್ಲಿ ಆತಂಕ ಹುಟ್ಟಿಸಿದೆ.

ಜುಲೈ 19, ಜುಲೈ 5, ಜೂನ್ 25, ಜೂನ್ 19, ಜೂನ್ 1 ರಂದೂ ಈಶಾನ್ಯ ರಾಜ್ಯದ ವಿವಿಧೆಡೆಗಳಲ್ಲಿ ಭೂಕಂಪ ಸಂಭವಿಸಿದ್ದನ್ನು ಇಲ್ಲಿ ಉಲ್ಲೇಖಿಸಬಹುದು.












Click it and Unblock the Notifications