Breaking: ಸ್ಪೈಸ್‌ಜೆಟ್ ವಿಮಾನದಲ್ಲಿ ಬೆಂಕಿ; ಪಾಟ್ನಾದಲ್ಲಿ ತುರ್ತು ಲ್ಯಾಂಡಿಂಗ್

ಪಾಟ್ನಾ, ಜೂನ್ 19: ದೆಹಲಿಗೆ ಹೊರಟಿದ್ದ ಸ್ಪೈಸ್‌ಜೆಟ್ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿಮಾನವು ಪಾಟ್ನಾದ ವಿಮಾನ ನಿಲ್ದಾಣಕ್ಕೆ ವಾಪಸ್ಸಾಗಿರುವ ಘಟನೆ ಭಾನುವಾರ ನಡೆದಿದೆ.

ಭಾನುವಾರ ಬೆಳಗ್ಗೆ ದೆಹಲಿ ಕಡೆಗೆ ಹಾರಿದ ಸ್ಪೈಸ್‌ಜೆಟ್ ವಿಮಾನದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದು, ಬೆಂಕಿ ಕಾಣಿಸಿಕೊಂಡಿತ್ತು. ಈ ಕುರಿತು ತಿಳಿಯುತ್ತಿದ್ದಂತೆ ವಿಮಾನವನ್ನು ಪಾಟ್ನಾ ವಿಮಾನ ನಿಲ್ದಾಣಕ್ಕೆ ವಾಪಸ್ ತಂದು, ಸುರಕ್ಷಿತವಾಗಿ ಲ್ಯಾಂಡ್ ಮಾಡಲಾಗಿದೆ.

ಸ್ಪೈಸ್‌ಜೆಟ್ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ಪಾಟ್ನಾ ವಿಮಾನ ನಿಲ್ದಾಣದಲ್ಲಿ ಇಳಿದಿರುವುದು ಗೊತ್ತಾಗಿದೆ. ವಿಮಾನದಿಂದ ಪ್ರಯಾಣಿಕರು ಇಳಿಯುತ್ತಿರುವ ವಿಡಿಯೋ ಕೂಡ ಲಭ್ಯವಾಗಿದೆ.

A Delhi-Bound Spicejet Flight Returned to Patna Airport After Engine Issues in the Aircraft

185 ಪ್ರಯಾಣಿಕರಿದ್ದ ವಿಮಾನ:
ಸ್ಪೈಸ್‌ಜೆಟ್ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡಿರುವುದನ್ನು ಗಮನಿಸಿದ ಸ್ಥಳೀಯರು ಜಿಲ್ಲಾ ಮತ್ತು ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ತದನಂತರ ದೆಹಲಿಗೆ ಹೊರಟಿದ್ದ ವಿಮಾನವು ಪಾಟ್ನಾ ವಿಮಾನ ನಿಲ್ದಾಣಕ್ಕೆ ಮರಳಿತು. ಎಲ್ಲಾ 185 ಪ್ರಯಾಣಿಕರು ಸುರಕ್ಷಿತವಾಗಿ ಈಗ ಕೆಳಗಿಳಿದಿದ್ದಾರೆ. ಬೆಂಕಿ ಕಾಣಿಸಿಕೊಳ್ಳುವುದಕ್ಕೆ ತಾಂತ್ರಿಕ ದೋಷ ಕಾರಣ ಎಂದು ಹೇಳಲಾಗುತ್ತಿದ್ದು, ಎಂಜಿನಿಯರಿಂಗ್ ತಂಡ ಮತ್ತಷ್ಟು ವಿಶ್ಲೇಷಣೆ ನಡೆಸುತ್ತಿದೆ ಎಂದು ಪಾಟ್ನಾ ಜಿಲ್ಲಾಧಿಕಾರಿ ಚಂದ್ರಶೇಖರ್ ಸಿಂಗ್ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+