ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ವಿರುದ್ಧ ಮಹಾಮೈತ್ರಿಕೂಟ ಸಿದ್ಧವಾಗುತ್ತಿದೆ: ಅಖಿಲೇಶ್

|
Google Oneindia Kannada News

ಲಕ್ನೋ, ಸೆಪ್ಟೆಂಬರ್ 17: 2019 ರ ಲೋಕಸಬಾ ಚುನಾವಣೆಯಲ್ಲಿ ಬಿಜೆಪಿಯನ್ನು ಅ ಧಿಕಾರದಿಂದ ದೂರವಿಡಲು ಮಹಾಮೈತ್ರಿಕೂಟ ಸಿದ್ಧಗೊಳಲ್ಳುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಹೇಳಿದ್ದಾರೆ.

ಕೇವಲ ವಿರೋಧ ಪಕ್ಷಗಳು ಮಾತ್ರವಲ್ಲ, ಇಡೀ ದೇಶದ ಜನತೆಯೇ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಹವಣಿಸುತ್ತಿದೆ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಹೇಳಿದ್ದಾರೆ.

ಏಕಾಂಗಿಯಾಗಿ ಚುನಾವಣೆ ಎದುರಿಸಲು ಸಿದ್ಧ: ಮಾಯಾವತಿಏಕಾಂಗಿಯಾಗಿ ಚುನಾವಣೆ ಎದುರಿಸಲು ಸಿದ್ಧ: ಮಾಯಾವತಿ

ಲಕ್ನೋದಲ್ಲಿ ಪತ್ರಿಕಾಗೋಷ್ಠಿಯೊಂದರಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವ ಸಲುವಾಗಿ ಮಹಾಮೈತ್ರಿಕೂಟವೊಂದು ಈಗಾಗಲೇ ಸಿದ್ಧವಾಗುತ್ತದೆ. ಭವಿಷ್ಯದಲ್ಲಿ ಇದೊಂದು ಬಲಾಢ್ಯವಾದ ಮೈತ್ರಿಕೂಟವಾಗಿ ರೂಪುಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

A Gathbandhan to oust BJP is in making: Akhilesh

ಆದರೆ ಮಹಾಮೈತ್ರಿಕೂಟದೊಂದಿಗೆ ಗುರುತಿಸಿಕೊಳ್ಳಲಿರುವ ಪಕ್ಷಗಳಲ್ಲೇ ಈಗಾಗಲೇ ಟಿಕೆಟ್ ಹಂಚಿಕೆಗೆ ಸಂಬಂಧಿಸಿದಂತೆ ಭಿನ್ನಾಭಿಪ್ರಾಯ ಆರಂಭವಾಗಿದ್ದು, ನಾವು ನಿರೀಕ್ಷಿಸಿದಷ್ಟು ಟಿಕೆಟ್ ಸಿಗದೆ ಇದ್ದಲ್ಲಿ ನಾವು ಸ್ವತಂತ್ರವಾಗಿ ಚುನಾವಣೆಗೆ ಸ್ಪರ್ಧಿಸುವುದಾಗಿ ಬಿಎಸ್ಪಿ ನಾಯಕಿ ಮಾಯಾವತಿ ಹೇಳಿಕೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ

ನಮ್ಮ ಪಕ್ಷಕ್ಕೆ ಸೂಕ್ತ ಸಂಖ್ಯೆಯ ಟಿಕೆಟ್ ಸಿಗುತ್ತದೆ ಎಂದಾದಲ್ಲಿ ಮಾತ್ರ ನಾವು ಯಾರೊಮದಿಗೆ ಬೇಕಾದರೂ, ಎಲ್ಲಿ ಬೇಕಾದರೂ ಮೈತ್ರಿಗೆ ಸಿದ್ಧ ಎಂದು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ ಹೇಳಿದ್ದರು.

English summary
Former Uttar Pradesh Chief Minister and Samajwadi Party (SP) president Akhilesh Yadav on Monday expressed confidence in stitching a strong alliance to oust the Bharatiya Janata Party (BJP) in the 2019 general elections.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X