Get Updates
Get notified of breaking news, exclusive insights, and must-see stories!

ಲೋಕಸಭಾ ಸದಸ್ಯನಾಗಿ ಮತ್ತೆ ಸಂಸತ್ತಿಗೆ ಬಂದ ರಾಹುಲ್ ಗಾಂಧಿಗೆ ಅದ್ದೂರಿ ಸ್ವಾಗತ

ನವದೆಹಲಿ, ಆಗಸ್ಟ್‌ 7: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಮತ್ತೆ ಪಡೆದ ನಂತರ ಸಂಸತ್ತಿಗೆ ಆಗಮಿಸಿದ ಅವರನ್ನು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷದ ಸಂಸದರು ಸೋಮವಾರ ಅವರಿಗೆ ಆತ್ಮೀಯ ಸ್ವಾಗತವನ್ನು ನೀಡಿದರು.

ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಸತ್ ಭವನಕ್ಕೆ ಆಗಮಿಸಿದ ರಾಹುಲ್‌ ಗಾಂಧಿ, ನೇರವಾಗಿ ಮಹಾತ್ಮ ಗಾಂಧಿ ಪ್ರತಿಮೆಗೆ ತೆರಳಿ ಪುಷ್ಪ ನಮನ ಸಲ್ಲಿಸಿದರು. ಸಂಸತ್ತಿನ ಗೇಟ್ ನಂಬರ್ ಒಂದರಲ್ಲಿ ಅವರನ್ನು ಸ್ವಾಗತಿಸಿದ ಕಾಂಗ್ರೆಸ್ ಸಂಸದರು ಮತ್ತು ವಿರೋಧ ಪಕ್ಷದವರು ಘೋಷಣೆಗಳನ್ನು ಕೂಗಿದರು.

grand-welcome-for-rahul-gandhi

ಲೋಕಸಭೆ ಸೆಕ್ರೆಟರಿಯೇಟ್ ಅಧಿಸೂಚನೆ ಹೊರಡಿಸಿದ ನಂತರ ಕೇರಳದ ವಯನಾಡ್ ಸಂಸದರಾಗಿ ರಾಹುಲ್ ಗಾಂಧಿ ಅವರ ಸ್ಥಾನಮಾನವನ್ನು ಮರಳಿ ನೀಡಲಾಗಿದೆ. ಮೋದಿ ಉಪನಾಮ ಕುರಿತ ಹೇಳಿಕೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಆಗಸ್ಟ್ 4 ರಂದು ಅನರ್ಹತೆ ತಿರ್ಪಗೆ ತಡೆ ನೀಡಿದ ನಂತರ ಲೋಕಸಭೆ ಸೆಕ್ರೆಟರಿಯೇಟ್ ಸೋಮವಾರ ಅವರ ಸದಸ್ಯತ್ವವನ್ನು ಮರುಸ್ಥಾಪಿಸಿತು.

ಮಾರ್ಚ್ 2023 ರಲ್ಲಿ ಲೋಕಸಭೆಯಿಂದ ಅನರ್ಹಗೊಂಡ ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಅವರನ್ನು ವಯನಾಡ್ ಸಂಸಸತ್ವವನ್ನು ಮರಳಿ ನೀಡಲಾಯಿತು. ಗುಜರಾತ್ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ರಾಹುಲ್‌ ಗಾಂಧಿ ಮೇಲ್ಮನವಿಯ ಮೇರೆಗೆ ಸುಪ್ರೀಂ ಕೋರ್ಟ್ ಜುಲೈನಲ್ಲಿ ಗುಜರಾತ್ ಸರ್ಕಾರ ಮತ್ತು ದೂರುದಾರರಿಗೆ ನೋಟಿಸ್ ಜಾರಿಗೊಳಿಸಿತು.

ಗುಜರಾತ್ ಹೈಕೋರ್ಟ್, ಈ ಹಿಂದೆ ತನ್ನ ಆದೇಶದಲ್ಲಿ, 'ಮೋದಿ ಉಪನಾಮ' ಹೇಳಿಕೆಗಾಗಿ ಸೂರತ್ ನ್ಯಾಯಾಲಯವು ರಾಹುಲ್ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಅವರ ಅಪರಾಧವನ್ನು ತಡೆಯಲು ನಿರಾಕರಿಸಿತ್ತು. ಪ್ರಕರಣದಲ್ಲಿ ಅಪರಾಧ ಸಾಬೀತಾದ ನಂತರ, ಮಾರ್ಚ್ 24 ರಂದು ಕೇರಳದ ವಯನಾಡ್ ಸಂಸದರಾಗಿ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿತ್ತು.

grand-welcome-for-rahul-gandhi

ಸೋಮವಾರ ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವವನ್ನು ಮರುಸ್ಥಾಪಿಸಿದ ಕೂಡಲೇ, ಕಾಂಗ್ರೆಸ್ ನಾಯಕರು ಈ ಸಂದರ್ಭವನ್ನು ಆಚರಿಸಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದ ಅಧೀರ್ ರಂಜನ್ ಚೌಧರಿ ಸೇರಿದಂತೆ ಪಕ್ಷದ ಮುಖಂಡರು ಸಿಹಿ ವಿನಿಮಯ ಮಾಡಿಕೊಂಡರು.

ಸೋನಿಯಾ ಗಾಂಧಿ ಅವರ ನಿವಾಸದ ಹೊರಗೆ ಸಂಭ್ರಮಾಚರಣೆ ಪ್ರಾರಂಭವಾಯಿತು, ಅಲ್ಲಿ ಪಕ್ಷದ ಕಾರ್ಯಕರ್ತರು ನೃತ್ಯ ಮಾಡುತ್ತಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಖರ್ಗೆ ಲೋಕಸಭೆಯ ಕಾರ್ಯದರ್ಶಿಯ ಈ ಕ್ರಮವನ್ನು ಸ್ವಾಗತಿಸಿದ್ದು, ಇದು ಭಾರತದ ಜನರಿಗೆ ಸಮಾಧಾನ ತಂದಿದೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರನ್ನು ಸಂಸಸ್ಯತ್ವ ಮರುಸ್ಥಾಪಿಸುವ ನಿರ್ಧಾರವು ಸ್ವಾಗತಾರ್ಹ ಕ್ರಮವಾಗಿದೆ. ಇದು ಭಾರತದ ಜನರಿಗೆ ಮತ್ತು ವಿಶೇಷವಾಗಿ ವಯನಾಡಿಗೆ ಸಮಾಧಾನ ತಂದಿದೆ. ತಮ್ಮ ಅಧಿಕಾರಾವಧಿಯಲ್ಲಿ ಯಾವುದೇ ಸಮಯ ಉಳಿದಿದ್ದರೂ, ಬಿಜೆಪಿ ಮತ್ತು ಮೋದಿ ಸರ್ಕಾರವು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸಿಕೊಂಡು ಪ್ರಜಾಪ್ರಭುತ್ವವನ್ನು ಅವಹೇಳನ ಮಾಡುವುದಕ್ಕಿಂತ ನೈಜ ಆಡಳಿತದ ಮೇಲೆ ಕೇಂದ್ರೀಕರಿಸುವ ಮೂಲಕ ಅದನ್ನು ಬಳಸಿಕೊಳ್ಳಬೇಕು ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆ ಕುರಿತು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಅವರು, ಸ್ಪೀಕರ್ ಇಂದು ನಿರ್ಧಾರ ತೆಗೆದುಕೊಂಡಿದ್ದೇವೆ. ನಾವು ಕಾನೂನು ಪ್ರಕ್ರಿಯೆಯನ್ನು ಅನುಸರಿಸಿದ್ದೇವೆ ಮತ್ತು ಸುಪ್ರೀಂ ಕೋರ್ಟ್ ಆದೇಶವನ್ನು ಸ್ವೀಕರಿಸಿದ ತಕ್ಷಣ ನಾವು ಅದನ್ನು ಮರುಸ್ಥಾಪಿಸಿದ್ದೇವೆ ಎಂದು ಹೇಳಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+