ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ, ವಿಡಿಯೋ ವೈರಲ್
Suicide Case: ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಸಂಖ್ಯೆ ಹೆಚ್ಚಾಗುತ್ತಲೇ ಇದ್ದು, ಈ ಮೂಲಕ ಮೆಟ್ರೋ ಸುದ್ದಿಯಾಗುತ್ತಲೇ ಇದೆ. ಇನ್ನು ಇದೀಗ 49 ವರ್ಷದ ವ್ಯಕ್ತಿಯೊಬ್ಬರು ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆ ಮಾಡಿಕೊಂಡು ಪ್ರಾಣ ಕಳೆದುಕೊಂಡಿರುವ ಘಟನೆ ಇಂದು (ಆಗಸ್ಟ್ 08) ಮಧ್ಯಾಹ್ನ ನಡೆದಿದೆ.
ಅದರಲ್ಲೂ ಬೆಂಗಳೂರಿನ ನಮ್ಮ ಮಟ್ರೋ ಭಾರೀ ಸುದ್ದಿಯಾಗುತ್ತಲೇ ಇದೆ. ಇತ್ತೀಚೆಗಷ್ಟೇ ನಗರದಲ್ಲಿ ವ್ಯಕ್ತಿಯೊಬ್ಬರು ಮೆಟ್ರೋ ಹಳಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿತ್ತು. ಅಷ್ಟೇ ಅಲ್ಲದೆ, ಈ ಹಿಂದೆಯೂ ಸಹ ಹಲವರು ಆಹತ್ಮಹತ್ಯೆಗೆ ಯತ್ನಿಸಿದ ಘಟನೆಗಳು ಕೂಡ ನಗರದ ಹಲವು ಮೆಟ್ರೋ ನಿಲ್ದಾಣಗಳಲ್ಲಿ ನಡೆದಿವೆ. ಹಾಗೆಯೇ ಇಂತಹಹದ್ದೇ ಘಟನೆಯೊಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ನಿನ್ನೆ (ಆಗಸ್ಟ್ 08) ನಡೆದಿದೆ.

ಸೂರಜ್ಮಲ್ ಮೆಟ್ರೋ ನಿಲ್ದಾಣದಲ್ಲಿ ನಿನ್ನೆ ಮಧ್ಯಾಹ್ನದ ವೇಳಗೆ ಫ್ಲಾಟ್ಫಾರ್ಮ್ 1ರಿಂದ ರಸ್ತೆಗೆ ಜಿಗಿದು 49 ವರ್ಷದ ವ್ಯಕ್ತಿ ಆತ್ಮಹತ್ಯೆ ಮಾಡಿದ್ದು, ಈ ದೃಶ್ಯ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಇನ್ನು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಹರೀಶ್ ಎಂದು ಗುರುತಿಸಲಾಗಿದ್ದು, ಈತ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಏನೆಂದು ಇನ್ನಷ್ಟೇ ತಿಳಿದುಬರಬೇಕಿದೆ.
ಈ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಭದ್ರತಾ ಸಿಬ್ಬಂದಿಗಳು ವ್ಯಕ್ತಿಯನ್ನು ರಕ್ಷಿಸಲು ಮುಂದಾದರೂ ಕೂಡ ನಿರಾಕರಿಸಿ ರಸ್ತೆಗೆ ಜಿಗಿದಿದ್ದು, ಪರಿಣಾಮ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಮೆಟ್ರೋ ಸಂಚಾರ ಸ್ಥಗಿತ: ಬೆಂಗಳೂರಿನಲ್ಲಿ ಮೊಟ್ರೋ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಗಳು ನಡೆದಿವೆ. ಹಾಗೆಯೇ ಇದೀಗ ನಗರದಲ್ಲಿ ಅಂತಹದ್ದೇ ಒಂದು ಘಟನೆ ಮತ್ತೆ ನಡೆದಿರುವ ಹಿನ್ನೆಲೆ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿತ್ತು.
ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು 35 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಾಗಸಂದ್ರ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ (ಹಸಿರು) ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ನಡೆದಿದೆ. ಆದರೆ ಆತ್ಮಹತ್ಯೆಗೆ ಕಾರಣ ಏನೆಂದು ಇನ್ನೂ ತಿಳಿದುಬಂದಿಲ್ಲ. ಮೃತರ ಗುರುತು ಕೂಡ ಪತ್ತೆ ಆಗಿರಲಿಲ್ಲ.
ಘಟನೆ ಬಳಿಕ ತಾತ್ಕಾಲಿಕ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಆಗಿದ್ದು, ಕೋಣನಕುಂಟೆ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಯಲಚೇನಹಳ್ಳಿ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ ನಿಲ್ದಾಣಗಳ (ಹಸಿರು ಮಾರ್ಗ) ನಡುವೆ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಉಳಿದ ಮಾರ್ಗದಲ್ಲಿ ಸೇವೆಗಳು ಲಭ್ಯವಿದೆ ಎಂದು ಬಿಎಂಆರ್‌ಸಿಎಲ್ ಅಧಿಕೃಯ ಟ್ವೀಟ್‌ನಲ್ಲಿ ತಿಳಿಸಿತ್ತು.
Helplines: COOJ Mental Health Foundation (COOJ)- 0832-2252525, ಪರಿವರ್ತನ್- +91 7676 602 602, Connecting Trust- +91 992 200 1122/+91-992 200 4305 or Sahai- 080-25497777/ [email protected]
ನಿಮ್ಹಾನ್ಸ್, ರೋಟರಿ ಸಂಸ್ಥೆ ಹಾಗೂ ಮೆಡಿಕೊ ಪ್ಯಾಸ್ಟೊರಾಲ್ ಅಸೋಸಿಯೇಷನ್ ನೆರವಿನಿಂದ ಆತ್ಮಹತ್ಯೆ ತಡೆಗಟ್ಟಲು, ಮಾನಸಿಕ ಖಿನ್ನತೆಯಿಂದ ಬಳಲುವವರಿಗಾಗಿ ಸ್ನೇಹಾ ಫೌಂಡೇಷನ್ ಸಹಾಯವಾಣಿ ಇಂತಿದೆ: 04424640050, ಟಾಟಾ ಇನ್ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸ್ 02225521111ಗೆ ಕರೆ ಮಾಡಬಹುದು.












Click it and Unblock the Notifications