ಉತ್ತರ ಪ್ರದೇಶದ ಆರ್‌ಎಸ್‌ಎಸ್ ಕಚೇರಿ ಗೇಟ್‌ಗೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ

ಲಕ್ನೋ, ಆಗಸ್ಟ್‌ 3: ಉತ್ತರ ಪ್ರದೇಶದ ಆರ್‌ಎಸ್‌ಎಸ್‌ ಕಚೇರಿ ಗೇಟ್‌ಗೆ ಸ್ಥಳೀಯ ವ್ಯಕ್ತಿಯೊಬ್ಬರ ಮೂತ್ರ ವಿಸರ್ಜನೆ ಮಾಡಿದ ಪರಿಣಾಮ ಕಚೇರಿಯಲ್ಲಿ ಗದ್ದಲ ನಡೆದ ಘಟನೆ ವರದಿಯಾಗಿದೆ.

ಘಟನೆ ಬಳಿಕ ವ್ಯಕ್ತಿ ಮತ್ತು ಆತನ ಇಬ್ಬರು ಸಹ ಆರೋಪಿಗಳನ್ನು ಬಂಧಿಸಲಾಗಿದೆ. ಬುಧವಾರ ರಾತ್ರಿ ಆರ್‌ಎಸ್‌ಎಸ್ ಕಾರ್ಯಕರ್ತರು ಕಚೇರಿಯ ಗೇಟ್‌ನಲ್ಲಿ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಮತ್ತು ಆತನ ಜೊತೆಗಿದ್ದ 3-4 ಮಂದಿಯನ್ನು ತಡೆದ ಘಟನೆ ನಡೆದಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

A man urinated on the RSS office gate in Uttar Pradesh

ಆರ್‌ಎಸ್‌ಎಸ್ ಕಚೇರಿ ಬಳಿ ಕಾರ್ಯಕರ್ತರು ಆ ಗುಂಪಿನೊಂದಿಗೆ ವಾಗ್ವಾದ ನಡೆಸಿದರು. ಅವರೊಂದಿಗೆ ಶೀಘ್ರದಲ್ಲೇ ಸುಮಾರು 50 ಜನರು ಸೇರಿಕೊಂಡರು. ಈಗ ಬಂಧಿತ ಆರೋಪಿಗಳು ಕಚೇರಿ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿ ಅವರ ಮೇಲೆ ಗುಂಡು ಹಾರಿಸಿದ್ದು, ಈ ವೇಳೆ ಮೂವರು ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆಯ ನಂತರ ಗಾಯಗೊಂಡ ಕಾರ್ಯಕರ್ತರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನಂತರ ಬಿಡುಗಡೆ ಮಾಡಲಾಗಿದೆ ಆರ್‌ಎಸ್‌ಎಸ್‌ ಪದಾಧಿಕಾರಿ ರವಿ ಮಿಶ್ರಾ ತಿಳಿಸಿದ್ದಾರೆ. ಆರ್‌ಎಸ್‌ಎಸ್ ಪದಾಧಿಕಾರಿಯ ದೂರಿನ ಆಧಾರದ ಮೇಲೆ, 5 ಅಪರಿಚಿತ ಮತ್ತು 40-50 ಅಪರಿಚಿತ ಜನರ ವಿರುದ್ಧ ಸೆಕ್ಷನ್ 307 (ಕೊಲೆ ಯತ್ನ) ಸೇರಿದಂತೆ ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಎಸ್‌ಪಿ ಹೇಳಿದರು.

ಈ ಸಂಬಂಧ ಶಶಾಂಕ್ ಗುಪ್ತಾ, ಶಿವಂಕ್ ಗುಪ್ತಾ ಮತ್ತು ಮುಖೇಶ್ ಗುಪ್ತಾ ಅವರನ್ನು ಬಂಧಿಸಲಾಗಿದ್ದು, ಇತರ ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ಘಟನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ವಿಶ್ಲೇಷಿಸುತ್ತಿದ್ದಾರೆ. ಇನ್ನುಳಿದ ಆರೋಪಿಗಳನ್ನು ಬಂಧಿಸಲು ನಾಲ್ಕು ತಂಡಗಳನ್ನು ರಚಿಸಲಾಗಿದ್ದು, ಆರ್‌ಎಸ್‌ಎಸ್ ಕಚೇರಿಯಲ್ಲಿ ಪೊಲೀಸ್ ಪಡೆಯನ್ನು ನಿಯೋಜಿಸಲಾಗಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್‌ಪಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+