ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಾಲ್ಕು ಕಾಲುಗಳುಳ್ಳ ಮಗುವಿಗೆ ಜನ್ಮ ನೀಡಿದ ತಾಯಿ

|
Google Oneindia Kannada News

ಭೋಪಾಲ್‌, ಡಿಸೆಂಬರ್‌ 16: ಮಧ್ಯಪ್ರದೇಶದ ಗ್ವಾಲಿಯರ್ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ನಾಲ್ಕು ಕಾಲುಗಳಿರುವ ಹೆಣ್ಣು ಮಗುವಿಗೆ ಜನ್ಮ ನೀಡಿರುವುದು ಜನರಲ್ಲಿ ಕುತೂಹಲ ಮೂಡಿಸಿದೆ.

ನೈಸರ್ಗಿಕ ನಿಯಮಗಳು ಕೆಲವೊಮ್ಮೆ ಆಶ್ಚರ್ಯಕರವಾದ ಸಂಗತಿಗಳನ್ನು ತೋರುತ್ತವೆ. ಹುಟ್ಟು ಎಂಬುದು ನೈಸರ್ಗಿಕ ನಿಯಮ. ಹಾಗೇಯೆ ಸಾವೂ ಕೂಡ. ಹಾಗಾಗಿ ಹೊಸ ಹೊಸ ಸಂಗತಿಗಳು, ವಿಚಾರಗಳು ಯಾವತ್ತು ಮಾನವನಿಗೆ ಒಂದು ಅನುಭವ ಪಾಠವೇ ಆಗಿದೆ. ಈ ನಿಟ್ಟಿನಲ್ಲಿ ನಾಲ್ಕು ಕಾಲುಗಳುಳ್ಳ ಮಗುವೊಂದಕ್ಕೆ ತಾಯಿಯೊಬ್ಬರು ಜನ್ಮ ನೀಡಿರುವುದು ವಿಶೇಷವಾಗಿದೆ.

ಅವಳಿ ಮಕ್ಕಳಿಗೆ ತಾಯಿಯಾದ ಇಶಾ, ಅಂಬಾನಿ ಮನೆಯಲ್ಲಿ ಸಂಭ್ರಮಅವಳಿ ಮಕ್ಕಳಿಗೆ ತಾಯಿಯಾದ ಇಶಾ, ಅಂಬಾನಿ ಮನೆಯಲ್ಲಿ ಸಂಭ್ರಮ

ಮಧ್ಯಪ್ರದೇಶದ ಕಮಲರಾಜ ಆಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ಮಕ್ಕಳ ವಿಭಾಗದಲ್ಲಿ ಸಿಕಂದರ್ ಕಂಪೂ ಪ್ರದೇಶದ ಆರತಿ ಕುಶ್ವಾಹ ಅವರು ಬುಧವಾರ ಮಗುವಿಗೆ ಜನ್ಮ ನೀಡಿದ್ದಾರೆ. ನವಜಾತ ಶಿಶು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಜನನದ ನಂತರ ಹೆಣ್ಣು ಮಗುವಿನ ತೂಕ 2.3 ಕೆ.ಜಿ. ಇತ್ತು. ಗ್ವಾಲಿಯರ್‌ನ ಜಯಾರೋಗ್ಯ ಆಸ್ಪತ್ರೆಯ ಅಧೀಕ್ಷಕರೊಂದಿಗೆ ವೈದ್ಯರ ತಂಡವು ಶಿಶುವನ್ನು ಪರೀಕ್ಷಿಸಿತು.

A mother gives birth to a four-legged baby in Madhya Pradesh

ಜಯಾರೋಗ್ಯ ಆಸ್ಪತ್ರೆ ಸಮೂಹದ ಸೂಪರಿಂಟೆಂಡೆಂಟ್ ಡಾ.ಆರ್.ಕೆ.ಎಸ್.ಧಕಡ್ ಮಾತನಾಡಿ, ಮಗುವಿಗೆ ಹುಟ್ಟಿದಾಗ ನಾಲ್ಕು ಕಾಲುಗಳಿವೆ. ಆಕೆಗೆ ದೈಹಿಕ ವಿಕಲತೆ ಇದೆ. ಕೆಲವು ಭ್ರೂಣಗಳು ಹೆಚ್ಚುವರಿಯಾಗಿವೆ. ಇದನ್ನು ವೈದ್ಯಕೀಯ ವಿಜ್ಞಾನದ ಭಾಷೆಯಲ್ಲಿ ಇಶಿಯೋಪಾಗಸ್ ಎಂದು ಕರೆಯಲಾಗುತ್ತದೆ. ಭ್ರೂಣವು ಎರಡು ಭಾಗಗಳಾಗಿ ವಿಭಜನೆಯಾದಾಗ ದೇಹವು ಎರಡು ಸ್ಥಳಗಳಲ್ಲಿ ಬೆಳವಣಿಗೆಯಾಗುತ್ತದೆ. ಈ ಹೆಣ್ಣು ಮಗುವಿನ ಸೊಂಟದ ಕೆಳಗಿನ ಭಾಗವು ಎರಡು ಹೆಚ್ಚುವರಿ ಕಾಲುಗಳೊಂದಿಗೆ ಅಭಿವೃದ್ಧಿಗೊಂಡಿದೆ. ಆದರೆ ಆ ಕಾಲುಗಳು ನಿಷ್ಕ್ರಿಯವಾಗಿವೆ ಎಂದು ತಿಳಿಸಿದ್ದಾರೆ.

ಇದೀಗ ಮಕ್ಕಳ ವಿಭಾಗದ ವೈದ್ಯರು ದೇಹದ ಯಾವುದೇ ಭಾಗದಲ್ಲಿ ಬೇರೆ ಯಾವುದೇ ಅಂಗವಿಕಲತೆ ಇದೆಯೇ ಎಂದು ತಪಾಸಣೆ ನಡೆಸುತ್ತಿದ್ದು, ಪರೀಕ್ಷೆ ಬಳಿಕ ಆಕೆ ಆರೋಗ್ಯವಾಗಿದ್ದರೆ ಶಸ್ತ್ರಚಿಕಿತ್ಸೆ ಮೂಲಕ ಆ ಕಾಲುಗಳನ್ನು ತೆಗೆಯಲಾಗುತ್ತದೆ. ಇದರಿಂದ ಆಕೆ ಸಹಜ ಜೀವನ ನಡೆಸಬಹುದು ಎಂದು ಡಾ.ಧಕಡ್ ಹೇಳಿದರು.

ಆಸ್ಪತ್ರೆಯ ಅಧೀಕ್ಷಕರು, ಸದ್ಯ ಕಮಲರಾಜ ಆಸ್ಪತ್ರೆಯ ಶಿಶುವೈದ್ಯಕೀಯ ವಿಭಾಗದ ವಿಶೇಷ ನವಜಾತ ನಿಗಾ ಘಟಕದಲ್ಲಿ ಹೆಣ್ಣು ಶಿಶುವನ್ನು ದಾಖಲಿಸಲಾಗಿದೆ. ಶಿಶುವಿನ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ. ವೈದ್ಯರು ಶಸ್ತ್ರಚಿಕಿತ್ಸೆ ಮೂಲಕ ಆಕೆಯ ಹೆಚ್ಚುವರಿ ಕಾಲುಗಳನ್ನು ತೆಗೆಯುವ ಬಗ್ಗೆ ಮಾತನಾಡುತ್ತಿದ್ದಾರೆ. ಸದ್ಯ ಹೆಣ್ಣು ಮಗು ಸಂಪೂರ್ಣ ಆರೋಗ್ಯವಾಗಿದೆ ಎಂದರು.

ಇದೇ ವರ್ಷದ ಮಾರ್ಚ್‌ನಲ್ಲಿ ಮಧ್ಯಪ್ರದೇಶದ ರತ್ಲಾಮ್‌ನಲ್ಲಿ ಮಹಿಳೆಯೊಬ್ಬರು ಎರಡು ತಲೆ, ಮೂರು ಕೈಗಳು ಮತ್ತು ಎರಡು ಕಾಲುಗಳಿರುವ ಮಗುವಿಗೆ ಜನ್ಮ ನೀಡಿದ್ದರು. ಆಗ ಮಗುವಿಗೆ ಚಿಕಿತ್ಸೆ ನೀಡಿದ್ದ ಡಾ.ಬ್ರಜೇಶ್ ಲಾಹೋಟಿ ಅವರು, "ಇದು ದಂಪತಿಗೆ ಮೊದಲ ಮಗು. ಮೊದಲು ಸೋನೋಗ್ರಫಿ ವರದಿಯಲ್ಲಿ ಇಬ್ಬರು ಮಕ್ಕಳಿದ್ದಾರೆ ಎಂದು ತಿಳಿದುಬಂದಿದೆ. ಇದು ಅಪರೂಪದ ಪ್ರಕರಣವಾಗಿದೆ. ಅದರ ಮಗುವಿನ ಜೀವ ಹೆಚ್ಚು ಕಾಲ ಉಳಿಯುವುದಿಲ್ಲ ಎಂದಿದ್ದರು

ಮಗುವಿನ ತೂಕ ಸುಮಾರು 3 ಕೆಜಿ, ಎರಡು ಬೆನ್ನುಹುರಿಗಳು ಮತ್ತು ಒಂದು ಹೊಟ್ಟೆ ಇದೆ. ಇದು ತುಂಬಾ ಸಂಕೀರ್ಣವಾದ ಸ್ಥಿತಿಯಾಗಿದೆ. ಮಗುವಿಗೆ ಡೈಸೆಫಾಲಿಕ್ ಪ್ಯಾರಾಪಾಗಸ್ ಎಂಬ ಸ್ಥಿತಿಯನ್ನು ಹೊಂದಿದೆ ಎಂದು ಅವರು ಹೇಳಿದ್ದರು.

English summary
In Gwalior district of Madhya Pradesh, a woman has given birth to a four-legged baby girl.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X