Air India Express Flight 141 ಜನರಿದ್ದ ವಿಮಾನದಲ್ಲಿ ದಿಢೀರ್ ಪ್ರಾಬ್ಲಂ, 3 ತಾಸು ಗಾಳಿಯಲ್ಲೇ ಹಾರಾಟ ಆಮೇಲೇನಾಯ್ತು ?
ಭಾರತದಲ್ಲಿ ಶುಕ್ರವಾರ ಭಾರೀ ವಿಮಾನ ಅವಘಡವೊಂದು ಸಂಭವಿಸಿದೆ. ಇದರಿಂದ ಬರೋಬ್ಬರಿ ಎರಡು ಗಂಟೆಗೂ ಹೆಚ್ಚು ಅವಧಿ ವಿಮಾನ ನಿಲ್ದಾಣದ ಮೇಲೆ ಗಿರಕಿ ಹೊಡೆದಿರುವ ಸಹ ನಡೆದಿದೆ. ಭಾರತದಲ್ಲಿ ಸಂಭವಿಸ ಬಹುದೊಡ್ಡ ದುರಂತ ಕೂದಲೆಳೆಯಲ್ಲಿ ಸಂಭವಿಸಿದ್ದರೂ ಅದರ ಭಯಾನಕತೆಯಿಂದ ಜನ ಇನ್ನೂ ಹೊರಗೆ ಬಂದಿಲ್ಲ. ನೆರೆಯ ತಮಿಳುನಾಡಿನಲ್ಲಿ ಈ ಅವಘಡ ಸಂಭವಿಸಿದೆ. ವಿಮಾನದಲ್ಲಿದ್ದ 141 ಜನ...
ದೇಶದಲ್ಲಿ ಬಹುದೊಡ್ಡ ವಿಮಾನದ ದುರಂತವೊಂದು ತಪ್ಪಿದೆ. ಆದರೆ, ಭಾರೀ ಆತಂಕವನ್ನೇ ಅದು ಸೃಷ್ಟಿ ಮಾಡಿದೆ. ಭಾರತದಿಂದ ಶಾರ್ಜಾಕ್ಕೆ ಹೋಗುತ್ತಿದ್ದ ಏರ್ ಇಂಡಿಯಾದಲ್ಲಿ ಈ ಭಾರೀ ಅವಘಡ ಸಂಭವಿಸಿದೆ. ವಿಮಾನದಲ್ಲಿ ಏಕಾಏಕಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿದ್ದು, ಈ ವಿಮಾನವನ್ನು ತುರ್ತು ಭೂಸ್ಪರ್ಶ (ತುರ್ತು ಲ್ಯಾಂಡಿಂಗ್) ಮಾಡಿರುವುದು ವರದಿಯಾಗಿದೆ. ಆದರೆ, ಈ ರೀತಿ ಏಕಾಏಕಿ ಲ್ಯಾಂಡಿಂಗ್ (ಎಮರ್ಜೆನ್ಸಿ) ಮಾಡುವುದಕ್ಕಿಂತಲೂ ಮುಂಚೆ ಅಂದಾಜು ಎರಡು ಗಂಟೆಗಳಿಗೂ ಹೆಚ್ಚು ಕಾಲ ಗಾಳಿಯಲ್ಲೇ ಗಿರಕಿಯಾಕಿರುವುದು ವರದಿಯಾಗಿದೆ. ತಮಿಳುನಾಡಿನ ಪ್ರಮುಖ ಜಿಲ್ಲೆಗಳಲ್ಲಿ ಒಂದಾಗಿರುವ ತಿರುಚ್ಚಿ ನಗರದಲ್ಲಿ ಈ ಘಟನೆ ನಡೆದಿದ್ದು, ದೇಶದಾದ್ಯಂತ ಭಾರೀ ಸಂಚಲನವನ್ನೇ ಸೃಷ್ಟಿ ಮಾಡಿದೆ.

ಈ ವಿಮಾನವು ತುರ್ತು ಭುಸ್ಪರ್ಶ ಮಾಡುವ ಮುನ್ನ ಸುಮಾರು ಎರಡು ಗಂಟೆಗೂ ಹೆಚ್ಚಿನ ಅವಧಿ ತಮಿಳುನಾಡಿನ ತಿರುಚ್ಚಿ ನಗರದ ಆಕಾಶದಲ್ಲಿ ಗಿರಕಿಹೊಡೆದಿದೆ. ಈ ಸಂದರ್ಭದಲ್ಲಿ ವಿಮಾನದಲ್ಲಿ ಇದ್ದವರು ಭಯಭೀತರಾಗಿದ್ದಾರೆ. ವಿಮಾನದಲ್ಲಿ ಚಿರಾಟ, ಆತಂಕ ಮನೆ ಮಾಡಿತ್ತು ಎಂದು ಪ್ರಯಾಣಿಕರು ದುಗುಡದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ವಿಮಾನ ಈ ರೀತಿ ಆದ ಸಂದರ್ಭದಲ್ಲಿ ಜನ ಭಾರೀ ಆತಂಕಕ್ಕೆ ಒಳಗಾಗಿದ್ದರು ಎಂದು ಹೇಳಲಾಗಿದೆ. ತಿರುಚಿರಾಪಳ್ಳಿಯಿಂದ ಶಾರ್ಜಾಗೆ ಹೋಗುತ್ತಿದ್ದ ಏರ್ ಇಂಡಿಯಾ ಫ್ಲೈಟ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು.
ಏರ್ ಇಂಡಿಯಾದ ವಿಮಾನ IX613 ಶುಕ್ರವಾರ 141 ಜನ ಪ್ರಯಾಣಿಕರನ್ನು ಹೊತ್ತು ಸಂಜೆ ವೇಳೆ 5:45ಕ್ಕೆ ತಮಿಳುನಾಡಿನ ತಿರುಚ್ಚಿ ವಿಮಾನ ನಿಲ್ದಾಣದಿಂದ ತನ್ನ ಹಾರಾಟನ್ನು ಅಂದರೆ, ಟೇಕಾಫ್ ಆಗಿತ್ತು. ಆದರೆ, ವಿಮಾನ ಹಾರಾಟವಾದ ಕೆಲವೇ ಕ್ಷಣಗಳಲ್ಲಿ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಕೂಡಲೇ ವಿಮಾನದ ಸಿಬ್ಬಂಇ ಎಮರ್ಜೆನ್ಸಿ ಘೋಷಿಸಿದ್ದಾರೆ. ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏರ್ ಇಂಡಿಯಾ ವಿಮಾನದ ಪೈಲಟ್ ಹಾಗೂ ಸಿಬ್ಬಂದಿ ಅಲರ್ಟ್ ಆಗಿದ್ದಾರೆ.
ಅಂದಾಜು ಮೂರು ಗಂಟೆಗಳಿಗೂ ಹೆಚ್ಚು ಕಾಲ ಆಕಾಶದಲ್ಲೇ ವಿಮಾನ ಗಿರಗಿಟ್ಲೆ (ಗಿರಕಿ) ಸುತ್ತಿದೆ. ಆ ಮೂರು ತಾಸುಗಳನ್ನು ವಿಮಾನದಲ್ಲಿ 141 ಜನ ಜೀವವನ್ನು ಕೈಯಲ್ಲೇ ಹಿಡಿದಿದ್ದಾರೆ. ಈ ಬೆಳವಣಿಗೆಗಳ ನಂತರ ತಿರುಚಿರಾಪಳ್ಳಿ ವಿಮಾನ ನಿಲ್ದಾಣದಲ್ಲಿ ಸೇಫ್ ಲ್ಯಾಂಡಿಂಗ್ ಮಾಡಲಾಗಿದೆ.
20ಕ್ಕೂ ಹೆಚ್ಚು ಆಂಬ್ಯುಲೆನ್ಸ್: ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಹಾಗೂ ತುರ್ತು ಭೂಸ್ಪರ್ಶದ ಸುದ್ದಿಗಳು ತಿಳಿಯುತ್ತಿದ್ದಂತೆಯೇ ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಹೈಅಲರ್ಟ್ ಘೋಷಿಸಲಾಗಿತ್ತು. ವಿಮಾನ ನಿಲ್ದಾಣದಲ್ಲಿನ ಸಿಬ್ಬಂದಿ ಹಾಗೂ ಭದ್ರತಾ ಸಿಬ್ಬಂದಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದರು. ತಿರುಚ್ಚಿಯಿಂದ ಶಾರ್ಜಾಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಏಕಾಏಕಿ ತಾಂತ್ರಿಕ ದೋಷ ಕಾಣಿಸಿಕೊಂಡ ಬೆನ್ನಲ್ಲೇ ಎಲ್ಲರೂ ಆಘಾತಕ್ಕೆ ಒಳಗಾಗಿದ್ದರು. ವಿಮಾನದಲ್ಲಿ ಡ್ರಾಲಿಕ್ ವೈಫಲ್ಯ ಅಂದರೆ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಹೀಗಾಗಿ, ತಿರುಚ್ಚಿ ವಿಮಾನ ನಿಲ್ದಾಣದಲ್ಲಿ ಇಳಿಸುವ ಮೊದಲು ಅದರಲ್ಲಿ ಇದ್ದ ಇಂಧನವನ್ನು ಖಾಲಿ ಮಾಡಲಾಗಿದೆ. ಇದರಿಂದ ಭಾರೀ ದೊಡ್ಡ ಅನಾಹುತವನ್ನೇ ತಪ್ಪಿಸಲಾಗಿದೆ. ಇನ್ನು ವಿಮಾನ ನಿಲ್ದಾಣದಲ್ಲಿ ಬರೋಬ್ಬರಿ 20ಕ್ಕೂ ಅಧಿಕ ಆಂಬ್ಯುಲೆನ್ಸ್ ಹಾಗೂ ಅಗ್ನಿಶಾಮಕ ವಾಹನಗಳನ್ನು ವಿಮಾನ ನಿಲ್ದಾಣದಲ್ಲಿ ಕಾಯ್ದಿರಿಸಲಾಗಿತ್ತು.
-
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ












Click it and Unblock the Notifications